ಉಡುಪಿ | ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ – ಆರೋಗ್ಯಯುತ ಜೀವನ ನಡೆಸಿ : ಶಾಸಕ ಯಶ್‌ಪಾಲ್ ಎ ಸುವರ್ಣ

Date:

ಮಕ್ಕಳಲ್ಲಿ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ ಅವರುಗಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಈ ಜಂತುಹುಳು ನಿವಾರಣೆಗಾಗಿ ವರ್ಷದಲ್ಲಿ ಎರಡು ಬಾರಿ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತಿದ್ದು, ಜಿಲ್ಲೆಯ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಈ ಮಾತ್ರೆಯನ್ನು ಸೇವಿಸುವುದರೊಂದಿಗೆ ಆರೋಗ್ಯಯುತ ಜೀವನ ನಡೆಸುವಂತೆ ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ ನೀಡಿದರು.

- Advertisement -

ಅವರು ಇಂದು ನಗರದ ಸೈಂಟ್ ಸಿಸಿಲಿ ಪ್ರೌಢಶಾಲಾ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರಾಷ್ಟೀಯ ಅರೋಗ್ಯ ಅಭಿಯಾನ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಜಂತುಹುಳುಗಳ ಬಾಧೆಯಿಂದ ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವಾದ ಇಂದು 1 ರಿಂದ 19 ವರ್ಷದೊಳಗಿನ ಜಿಲ್ಲೆಯ ಸುಮಾರು 2,72,477 ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ. 1 ರಿಂದ 5 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಹಾಗೂ 6 ರಿಂದ 19 ವರ್ಷದೊಳಗಿನವರಿಗೆ ಸರಕಾರಿ, ಅನುದಾನಿತ, ಖಾಸಗಿ ಶಾಲಾ-ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುವುದು ಎಂದ ಅವರು, ಇಂದು ಮಾತ್ರೆ ಪಡೆಯದ ಮಕ್ಕಳಿಗೆ ಆ. 17 ರ ಮೋಪ್ ಅಪ್ ದಿನದಂದು ಮಾತ್ರೆಗಳನ್ನು ನೀಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಓದಿನ ಕಡೆ ಹೆಚ್ಚು ಗಮನ ಹರಿಸಲು ಆರೋಗ್ಯಯುತವಾಗಿರುವುದು ಬಹಳ ಮುಖ್ಯ. ಜಂತು ಹುಳದ ನಿವಾರಣೆಗೆ ಸ್ವಚ್ಛತೆ ಬಹಳ ಪ್ರಾಮುಖ್ಯವಾಗಿದ್ದು, ವಿದ್ಯಾರ್ಥಿಗಳು ಕೈ ಕಾಲುಗಳನ್ನು ಸ್ವಚ್ಛವಾಗಿರಿಸದೆ ಆಹಾರ ಸೇವನೆ ಮಾಡುವ ಅಭ್ಯಾಸಗಳನ್ನು ನಿಲ್ಲಿಸಬೇಕು.

JANTUHULU 4

ವಿದ್ಯಾರ್ಥಿಗಳು ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವ ಕಡೆ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು. ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಸರಕಾರವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅನುಗುಣವಾಗಿ ಉತ್ತಮ ವ್ಯವಸ್ಥೆಗಳನ್ನು ಕಲ್ಪಿಸುತ್ತಿದೆ. ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಿದ್ದಾಗ ಮಾತ್ರ ಸ್ವಾಸ್ಥ ಸಮಾಜ ನಿರ್ಮಾಣ ಸಾಧ್ಯ. ಮಕ್ಕಳು ಜಂತುಹುಳು ಮಾತ್ರೆ ಸೇವಿಸುವುದರೊಂದಿಗೆ ಆರೋಗ್ಯಯುತ ಜೀವನ ನಡೆಸಿ, ಸ್ವಾಸ್ಥ ಭಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಜಿ ಹುಬ್ಬಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ, ಭಯ, ಅಂಜಿಕೆಯಿಲ್ಲದೇ ಈ ಜಂತುಹುಳು ನಿವಾರಣಾ ಮಾತ್ರೆಗಳನ್ನು ಸೇವಿಸಬಹುದು. ಇದರಿಂದ ಯಾವುದೇ ಅಡ್ಡಪರಿಣಾಮಗಳು ಆಗುವುದಿಲ್ಲ ಎಂದ ಅವರು, ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕೆಯೊಂದೆ ಸಹಕಾರಿಯಾಗಿದ್ದು, 14 ರಿಂದ 15 ವರ್ಷ ವಯಸ್ಸಿನ ಒಳಗಿನ ಇದುವರೆಗೂ ಹೆಚ್.ಪಿ.ವಿ ಲಸಿಕೆ ಪಡೆಯದ ಹೆಣ್ಣು ಮಕ್ಕಳು ಲಸಿಕೆ ಪಡೆಯುವಂತೆ ತಿಳಿಸಿದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜ್ಯೋತ್ಸಾö್ನ ಬಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳು ಸರ್ವತೋಮುಖ ಅಭಿವೃದ್ಧಿ ಹೊಂದಲು ಆರೋಗ್ಯ ಅತೀ ಮುಖ್ಯವಾಗಿದೆ. ಜಂತುಹುಳು ಮಕ್ಕಳ ಕರುಳನ್ನು ಸೇರಿ, ಪೌಷ್ಠಿಕಾಂಶ ಹೀರಿಕೊಂಡು ಅಪೌಷ್ಠಿಕತೆ ಹಾಗೂ ರಕ್ತಹೀನತೆಯನ್ನು ಉಂಟುಮಾಡುತ್ತದೆ. ದೇಹದಲ್ಲಿ ಅಗತ್ಯವಾದ ಪೌಷ್ಠಿಕಾಂಶದ ಕೊರತೆ ಉಂಟಾದಾಗ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯೂ ಕುಂಠಿತವಾಗುವುದರೊಂದಿಗೆ ಮಕ್ಕಳ ಆಟ-ಪಾಠಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜಂತು ಹುಳದ ನಿವಾರಣೆಗೆ ಮಕ್ಕಳು ಮಾತ್ರೆ ಸೇವನೆಯಿಂದ ಮಾತ್ರವಲ್ಲದೇ ಕಡ್ಡಾಯವಾಗಿ ಶೌಚಾಲಯಗಳನ್ನು ಉಪಯೋಗಿಸಿದ ನಂತರ ಕೈತೊಳೆಯುವುದು, ಪರಿಸರದ ಸ್ವಚ್ಛತೆ ಕಾಪಾಡುವುದು, ಮಲವಿಸರ್ಜನೆಗೆ ಶೌಚಾಲಯವನ್ನೇ ಬಳಸುವುದು ಸೇರಿದಂತೆ ಮತ್ತಿತರ ಸುರಕ್ಷತಾ ವಿಧಾನಗಳಿಂದ ಜಂತುಹುಳು ಭಾದೆಯಿಂದ ರಕ್ಷಿಸಿಕೊಳ್ಳಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಜಂತುಹುಳದ ಮಾತ್ರೆಯನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಸೈಂಟ್ ಸಿಸಿಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರೀತಿ ಕ್ರಾಸ್ತಾ, ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಧ್ಯಾಪಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಹೆಚ್ಚೇಶ್ ಹೆಚ್.ಎಸ್ ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ನಿರೂಪಿಸಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಹತ್ತು ತಾಸು ವಿದ್ಯುತ್ ಕೊಡಲು ರೈತ ಸಂಘ ಮನವಿ

ಬೊಮ್ಮನಹಳ್ಳಿ ಗ್ರೀಡ್ ನಿಂದ ರೈತರ ಬೋರ್ ವೆಲ್ ಪಂಪ್ಲೆಟ್ಟುಗಳಿಗೆ ಸರಿಯಾಗಿ ವಿದ್ಯುತ್...

ಧಾರವಾಡ | ಸೆ. 27ಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆ

ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆಗಳ...

ಧಾರವಾಡ | ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಧಾರವಾಡ ಜಪಟ್ಟಣದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಇಂದು (ಸೆ.24)  ಮುಖ್ಯ...