ಉಡುಪಿ | ನಾಮ ಹಾಕಿದ ತಕ್ಷಣ ಮೇಲ್ಜಾತಿಯವರಾಗುವುದಿಲ್ಲ : ಜಯನ್ ಮಲ್ಪೆ

Date:

ದಲಿತರು ನಾಮ ಹಾಕಿಕೊಂಡು ಧಾರ್ಮಿಕ ಆಚರಣೆಗಳನ್ನು ಮಾಡಿದ ತಕ್ಷಣ ಸಮಾಜದಲ್ಲಿ ಮೇಲ್ಜಾತಿಯವರಾಗುವುದಿಲ್ಲ. ನಾಮ ಹಾಕಿದರೆ ವಿಶೇಷ ಸ್ಥಾನಮಾನ ಸಿಗುತ್ತದೆ ಅಥವಾ ದಲಿತರನ್ನು ಅಸ್ಪೃಶ್ಯರಂತೆ ನೋಡುವುದಿಲ್ಲ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕು ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದರು.

- Advertisement -

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಉಡುಪಿ ಜಿಲ್ಲಾ ಶಾಖೆಯ ಆಶ್ರಯದಲ್ಲಿ ಮಲ್ಪೆಯ ಸರಸ್ವತಿ ಜಾನಪದ ಕಲಾಮಂದಿರದಲ್ಲಿ ಆಯೋಜಿಸಿದ್ದ ದಲಿತ ಚಳವಳಿಯ ಪಿತಾಮಹ ಪ್ರೊ. ಬಿ. ಕೃಷ್ಣಪ್ಪ ಅವರ 88ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ಧಾರ್ಮಿಕ ಆಚರಣೆಗಳಿಗಿಂತ ದಲಿತರು ಬಿ. ಆರ್. ಅಂಬೇಡ್ಕರ್ ಅವರ ಚಿಂತನೆಗಳನ್ನು ಅರ್ಥಮಾಡಿಕೊಳ್ಳಬೇಕು. ಕೇವಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ‘ಜೈಭೀಮ್’ ಘೋಷಣೆಗಳನ್ನು ಕೂಗಿ ಮನೆಗೆ ಹೋಗಿ ಸತ್ಯನಾರಾಯಣ ಪೂಜೆ ಮಾಡುವುದಲ್ಲ, ಅಧಿಕಾರದ ಕೇಂದ್ರಗಳಾದ ಗ್ರಾಮ ಪಂಚಾಯಿತಿಯಿಂದ ಹಿಡಿದು ಸಂಸತ್ತಿನವರೆಗೆ ರಾಜಕೀಯವಾಗಿ ಮುನ್ನಡೆಯಲು ಪ್ರಯತ್ನಿಸಬೇಕು” ಎಂದು ಹೇಳಿದರು.

WhatsApp Image 2026 06 09 at 7.57.56 PM

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಸಂಸ ಜಿಲ್ಲಾ ನಾಯಕ ಹರೀಶ್ ಸಾಲ್ಯಾನ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಪರಮೇಶ್ವರ ಉಪ್ಪೂರು ಮಾತನಾಡಿ, “ಪ್ರೊ. ಕೃಷ್ಣಪ್ಪರು ಸಾವಿರಾರು ಶೋಷಿತರಿಗೆ ಸ್ವಾಭಿಮಾನ ತುಂಬಿದವರು. ದಲಿತ ಸಂಘಟನೆಯನ್ನು ಕಟ್ಟಿಕೊಂಡು ಚದುರಿದ ಸಮುದಾಯವನ್ನು ಒಂದೇ ಬಾವುಟದಡಿ ಒಗ್ಗೂಡಿಸಿದವರು” ಎಂದು ಸ್ಮರಿಸಿದರು.

ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಮಾತನಾಡಿ, “ಕೃಷ್ಣಪ್ಪನವರಂತಹ ಮೊದಲ ಸಾಲಿನ ನಾಯಕರ ಚಿಂತನೆಗಳನ್ನು ಅಳವಡಿಸಿಕೊಂಡಾಗ ಮಾತ್ರ ರಾಜ್ಯದಲ್ಲಿ ದಲಿತ ಸಮುದಾಯ ಮತ್ತಷ್ಟು ಬಲಗೊಳ್ಳಲಿದೆ. ದಲಿತ ವಿಮೋಚನೆಯ ಪ್ರಶ್ನೆ ಬಂದಾಗಲೆಲ್ಲ ಅವರು ಅಂಬೇಡ್ಕರ್ ಚಿಂತನೆಗಳತ್ತ ಗಮನ ಸೆಳೆದಿದ್ದರು” ಎಂದರು.

ಹಿರಿಯ ದಲಿತ ಮುಖಂಡ ದಯಾಕರ ಮಲ್ಪೆ ಮಾತನಾಡಿ, ಕೃಷ್ಣಪ್ಪನವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಸಂದರ್ಭದ ನೆನಪುಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಶಿವಣ್ಣ ಪರ್ಕಳ, ಪ್ರಸಾದ್ ನೆರ್ಗಿ, ರವಿರಾಜ್ ಲಕ್ಷ್ಮೀನಗರ, ಕೃಷ್ಣ ಶಿರಿಯಾನ್ ನೆರ್ಗಿ, ನಾರಾಯಣ ಪರ್ಕಳ, ಬಿ.ಎನ್. ಪ್ರಶಾಂತ್, ಸುಶೀಲ್ ಕುಮಾರ್ ಕೊಡವೂರು, ಅರುಣ್ ಸಾಲ್ಯಾನ್, ದೀಪಕ್ ಕೊಡವೂರು, ಮುರಳಿ ಕೊಡಂಕೂರು, ಶ್ಯಾಮ್‌ರಾಜ್ ಸಾಬ್ರಕಟ್ಟೆ, ವಾದಿರಾಜ್ ಪಾಳೇಕಟ್ಟೆ, ಹರೀಶ್ ಅಮೀನ್ ನೆರ್ಗಿ, ಗುಣವಂತ ತೊಟ್ಟಂ, ಮೋಹನ್ ಗುಜ್ಜರಬೆಟ್ಟು, ನವೀನ್ ಬನ್ನಂಜೆ, ಜಯರಾಜ್ ಸಾಲ್ಯಾನ್ ಹಾಗೂ ಕಲಾವಿದ ಮೋಹನ್‌ದಾಸ್ ನೆರ್ಗಿ ಉಪಸ್ಥಿತರಿದ್ದರು. ಭಗವಾನ್ ಮಲ್ಪೆ ಸ್ವಾಗತಿಸಿದರು. ವಿನಯ ಬಲರಾಮನಗರ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...