ಉಡುಪಿ | ಮತದಾರರ ಪಟ್ಟಿಯ ರಕ್ಷಣೆಯೇ ಚುನಾವಣಾ ಸಿದ್ಧತೆಯ ಮೊದಲ ಹೆಜ್ಜೆ : ಜಯಪ್ರಕಾಶ್ ಹೆಗ್ಡೆ

Date:

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ಪ್ರಜೆಯ ಸಂವಿಧಾನಬದ್ದ ಹಕ್ಕು. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆ ಯಲ್ಲಿ ಪ್ರತಿಯೊಬ್ಬ ಮತದಾರ, ಬೂತ್ ಮಟ್ಟದ ಏಜೆಂಟ್(ಬಿಎಲ್‌ಎ) ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

- Advertisement -

ಎಸ್‌ಐಆರ್ ಪ್ರಕ್ರಿಯೆಯ ಉದ್ದೇಶ ಮತದಾರರ ಪಟ್ಟಿಯನ್ನು ನಿಖರ ಗೊಳಿಸುವುದಾಗಿದೆ. ಆದರೆ ಈ ಪ್ರಕ್ರಿಯೆಯ ಬಗ್ಗೆ ಅರಿವಿನ ಕೊರತೆ ಅಥವಾ ನಿರ್ಲಕ್ಷ್ಯ ಉಂಟಾದರೆ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈತಪ್ಪು ವುದು, ಹೊಸ ಮತದಾರರು ಸೇರ್ಪಡೆಯಾಗದೆ ಉಳಿಯುವುದು, ಅಗತ್ಯ ತಿದ್ದುಪಡಿಗಳು ಆಗದೆ ಉಳಿಯುವುದು ಅಥವಾ ಅನುಮಾನಾಸ್ಪದ ನೋಂದಣಿಗಳ ಕುರಿತು ಸಮಯಕ್ಕೆ ಆಕ್ಷೇಪಣೆ ಸಲ್ಲಿಕೆಯಾಗದಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಜೂ.30ರಿಂದ ಜು.29ರೊಳಗೆ ಪ್ರತಿಯೊಬ್ಬ ಮತದಾರರು ತಮ್ಮ ಬೂತ್‌ನ ಬಿಎಲ್‌ಓ ಅವರನ್ನು ಸಂಪರ್ಕಿಸಿ ಇಎಫ್ ಅನ್ನು ಸರಿಯಾದ ಮಾಹಿತಿ ಯೊಂದಿಗೆ ಭರ್ತಿ ಮಾಡಿ ಸಲ್ಲಿಸಬೇಕು. ಫಾರ್ಮ್‌ನಲ್ಲಿ ಕೇಳಲಾಗಿರುವ ವಿವರ ಗಳನ್ನು ಯಾವುದೇ ತಪ್ಪು ಅಥವಾ ಸುಳ್ಳು ಮಾಹಿತಿಯಿಲ್ಲದೆ ದಾಖಲಿಸುವುದು ಅತ್ಯಂತ ಮುಖ್ಯವಾಗಿದೆ. ಅಗತ್ಯವಿರುವ ಸಂದರ್ಭಗಳಲ್ಲಿ 2002ರ ಮತದಾರರ ಪಟ್ಟಿಯಲ್ಲಿನ ಮತದಾರನ ವಿವರ ಅಥವಾ ಆಗ ಆತ ಮತದಾನದ ಹಕ್ಕು ಪಡೆದಿರದಿದ್ದರೆ ಆತನ ತಂದೆ, ತಾಯಿ ಅಥವಾ ಅಜ್ಜ-ಅಜ್ಜಿಯರ ಮತದಾರರ ವಿವರಗಳನ್ನು ಒದಗಿಸಬೇಕಾಗಬಹುದು. ಆದ್ದರಿಂದ ಚುನಾವಣಾ ಆಯೋಗ ಕೇಳುವ 11 ದಾಖಲೆಗಳಲ್ಲಿ ಲಭ್ಯವಿರುವ ಅಗತ್ಯ ದಾಖಲೆಗಳನ್ನು ಮುಂಚಿತವಾಗಿಯೇ ಸಿದ್ಧವಾಗಿಟ್ಟು ಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಚುನಾವಣೆ ಗೆಲ್ಲುವ ಸಿದ್ಧತೆ ಮತದಾನದ ದಿನ ಆರಂಭವಾಗುವುದಿಲ್ಲ; ಅದು ಮತದಾರರ ಪಟ್ಟಿಯ ರಕ್ಷಣೆಯಿಂದ ಆರಂಭವಾಗುತ್ತದೆ. ಆದ್ದರಿಂದ ಗ್ರಾಪಂ, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಪುರಸಭೆ, ಪಟ್ಟಣ ಪಂಚಾ ಯತ್, ವಿಧಾನಸಭಾ ಹಾಗೂ ಲೋಕಸಭಾ ಅಭ್ಯರ್ಥಿ ಆಕಾಂಕ್ಷಿಗಳು, ಪ್ರತಿಯೊಬ್ಬ ಬಿಎಲ್‌ಎ, ಪ್ರತಿಯೊಬ್ಬ ಕಾರ್ಯಕರ್ತ ಮತ್ತು ಪ್ರತಿಯೊಬ್ಬ ಮತದಾರ ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿ ನಿಖರವಾಗಿ ರುವಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...