ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾರ್ಯಕ್ಕೆ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಮೆಚ್ಚುಗೆ

Date:

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರು ಇಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.

- Advertisement -

ಸಲೀಂ ಅಹಮದ್ ಅವರು ಸಭಾಪತಿಯಾದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪದಾಧಿಕಾರಿಗಳು ಅವರನ್ನು ಬರಮಾಡಿಕೊಂಡು ಅಭಿನಂದನೆ ಸಲ್ಲಿಸಿದರು. ಒಕ್ಕೂಟದ ಜಿಲ್ಲಾಧ್ಯಕ್ಷ ಮಹಮ್ಮದ್ ಮೌಲ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಕಟಪಾಡಿ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳಾದ ಪೀರು ಸಾಹೇಬ್, ಇಕ್ಬಾಲ್ ಮನ್ನಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರು, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟವು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು, ಇಂತಹ ಸಂಘಟಿತ ಒಕ್ಕೂಟಗಳು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಇರಬೇಕು ಎಂದು ಅಭಿಪ್ರಾಯಪಟ್ಟರು.

WhatsApp Image 2026 10 24 at 10.59.54 PM

“ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಬಗ್ಗೆ ನನಗೆ ಈಗಾಗಲೇ ಮಾಹಿತಿ ಇದೆ. ಒಕ್ಕೂಟದ ಕಾರ್ಯವೈಖರಿ ಹಾಗೂ ಅದರ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ತಿಳಿದುಕೊಂಡಿದ್ದೇನೆ. ಇಂತಹ ಒಕ್ಕೂಟಗಳು ಸಮಾಜದ ಸಂಘಟನೆ ಮತ್ತು ಸಮುದಾಯದ ವಿವಿಧ ವಿಚಾರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟವು ರಾಜ್ಯದ ಇತರ ಜಿಲ್ಲೆಗಳಿಗೂ ಮಾದರಿಯಾಗುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಒಗ್ಗಟ್ಟು ಮತ್ತು ಸಂಘಟನಾತ್ಮಕ ಪ್ರಯತ್ನಗಳ ಮಹತ್ವವನ್ನು ಈ ಸಂದರ್ಭದಲ್ಲಿ ಅವರು ಉಲ್ಲೇಖಿಸಿದರು. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಕಚೇರಿಗೆ ಭೇಟಿ ನೀಡಿದ ಅವರು, ಒಕ್ಕೂಟದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

WhatsApp Image 2026 10 24 at 10.58.34 PM

ಈ ಸಂದರ್ಭದಲ್ಲಿ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್, ಕಾಂಗ್ರೆಸ್ ಮುಖಂಡರಾದ ಹಬೀಬ್ ಅಲಿ, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್‌ ಹುಸೈನ್, ನಕ್ವ ಯಹ್ಯ, ಮೌಲಾನ ಝಮೀರ್ ರಶಾಧಿ, ಪೀರು ಸಾಹೇಬ್, ಇಕ್ಬಾಲ್ ಮನ್ನಾ,ವಿ.ಎಸ್. ಉಮರ್, ಜಫ್ರುಲ್ಲಾ ನೇಜಾರ್, ಶಭೀ ಖಾಝಿ, ಇಕ್ಬಾಲ್ ಕಟಪಾಡಿ ಹಾಗೂ ಟಿ.ಎಸ್. ಅನ್ಸರ್ ಸೇರಿದಂತೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

1013271375
eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...

ರಾಯಚೂರು | ಉದ್ರಿ ಕೊಡಲಿಲ್ಲವೆಂದು ಅಂಗಡಿ ಮಾಲೀಕನ ಬರ್ಬರ ಕೊಲೆ

ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ...