ಉಡುಪಿ | ಚಿಕ್ಕಲ್ಲೂರು ಅರಣ್ಯದಲ್ಲಿ ಮೂವರ ಸಾವು: ನ್ಯಾಯಾಂಗ ತನಿಖೆಗೆ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಆಗ್ರಹ

Date:

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಶೀಘ್ರ ಹಾಗೂ ಪಾರದರ್ಶಕ ನ್ಯಾಯಾಂಗ ತನಿಖೆ ನಡೆಸಿ, ಘಟನೆಯ ಸತ್ಯಾಸತ್ಯತೆ ಹೊರತಂದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಸರಕಾರವನ್ನು ಒತ್ತಾಯಿಸಿದೆ.

- Advertisement -

ಹನೂರು ತಾಲೂಕಿನ ನಿವಾಸಿಗಳಾದ ಆಂಟನಿ ಸ್ವಾಮಿ, ಜಾನ್ ರೋಸ್ ಪೀಟರ್ ಹಾಗೂ ಆಂಟನಿ ಕುಮಾರ್ ಮೃತಪಟ್ಟಿರುವ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸುವ ಅಗತ್ಯವಿದೆ ಎಂದು ವೇದಿಕೆಯ ಅಧ್ಯಕ್ಷ ಚಾರ್ಲ್ಸ್‌ ಅಂಬ್ಲರ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅರಣ್ಯ ಪ್ರದೇಶದಲ್ಲಿ ನಡೆದಿರುವ ಈ ಗುಂಡಿನ ದಾಳಿ ಹಾಗೂ ಮೂವರ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದು, ಕೇವಲ ಇಲಾಖಾ ಮಟ್ಟದ ತನಿಖೆಯಿಂದ ಪ್ರಕರಣದ ಸಂಪೂರ್ಣ ಸತ್ಯ ಹೊರಬರಲು ಸಾಧ್ಯವಿಲ್ಲ. ಆದ್ದರಿಂದ ಸ್ವತಂತ್ರ ಹಾಗೂ ಪಾರದರ್ಶಕ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನಿಯಮಬಾಹಿರವಾಗಿ ಅಥವಾ ಅವಸರದ ನಿರ್ಧಾರದಿಂದ ಗುಂಡು ಹಾರಿಸಲಾಗಿದ್ದರೆ, ಅಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನ ನಡೆಯಬಾರದು ಎಂದು ಚಾರ್ಲ್ಸ್‌ ಅಂಬ್ಲರ್‌ ಒತ್ತಾಯಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳು ತಮ್ಮ ಆಧಾರಸ್ತಂಭಗಳನ್ನು ಕಳೆದುಕೊಂಡಿದ್ದು, ಅವರ ಕುಟುಂಬಗಳ ದುಃಖ ಹಾಗೂ ಆರ್ಥಿಕ ಸಂಕಷ್ಟವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ, ಅಗತ್ಯ ನೆರವು ಹಾಗೂ ಪುನರ್ವಸತಿ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ವಾಸಿಸುವ ಹಾಗೂ ಜೀವನೋಪಾಯಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಜನರ ಹಕ್ಕುಗಳು ಮತ್ತು ಸುರಕ್ಷತೆಯನ್ನು ಸರಕಾರ ಖಾತರಿಪಡಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ಸಿಬ್ಬಂದಿಗೆ ಸೂಕ್ತ ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ತಿಳಿಸಿದೆ.

ಮೂವರ ಸಾವಿಗೆ ಕಾರಣವಾದ ಘಟನೆ ಕುರಿತು ತಕ್ಷಣ ನ್ಯಾಯಾಂಗ ತನಿಖೆ ಆರಂಭಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಹಾಗೂ ಮೃತರ ಕುಟುಂಬಗಳಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷ ಚಾರ್ಲ್ಸ್‌ ಅಂಬ್ಲರ್‌ ಸರಕಾರಕ್ಕೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...