ಉಡುಪಿ | ಸಂವಿಧಾನ, ಮಾನವೀಯ ಮೌಲ್ಯಗಳ ರಕ್ಷಣೆಗೆ ಬೀದಿಗಿಳಿಯಿರಿ: ಪ್ರಕಾಶ್ ರಾಜ್

Date:

ಪ್ರಸ್ತುತ ದೇಶದ ಪರಿಸ್ಥಿತಿಯಲ್ಲಿ ವೇದಿಕೆಗಳಲ್ಲಿ ನಿಂತು ಭಾಷಣ ಮಾಡುವುದಕ್ಕಿಂತ ಬೀದಿಗಿಳಿದು ಸಂವಿಧಾನ ಮತ್ತು ಮಾನವೀಯ ಮೌಲ್ಯಗಳನ್ನು ಕಾಪಾಡಲು ಹೋರಾಟ ನಡೆಸುವುದು ಅಗತ್ಯವಾಗಿದೆ. ಇದು ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದಂತಿದ್ದು, ಎಲ್ಲರೂ ಸಹನೆ ಮತ್ತು ಬದ್ಧತೆಯಿಂದ ಹೋರಾಟಕ್ಕೆ ಮುಂದಾಗಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಹೇಳಿದರು.

- Advertisement -

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಶನಿವಾರ ಉಡುಪಿ ಮಿಷನ್ ಕಂಪೌಂಡ್‌ನ ಯುಬಿಎಂಸಿ ಆಡಿಟೋರಿಯಂನಲ್ಲಿ ಆಯೋಜಿಸಲಾದ ಸ್ನೇಹ ಸಮಾವೇಶದಲ್ಲಿ ‘ಮಾನವ ರತ್ನ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....
WhatsApp Image 2026 11 01 at 12.22.11 AM 1

ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಜನರಿಗೆ ಸಹನೆಯಿಂದ ಮನವರಿಕೆ ಮಾಡಿಕೊಡಬೇಕು. ಆಡಳಿತದ ಪರಿಣಾಮವಾಗಿ ಕರಾವಳಿಯ ಪರಿಸ್ಥಿತಿ ಹದಗೆಟ್ಟಿದ್ದು, ಆರ್ಥಿಕತೆ ಕುಸಿತ ಹಾಗೂ ಯುವಕರ ಭವಿಷ್ಯದ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ಅಂಕಿಅಂಶಗಳ ಸಹಿತ ಜನರಿಗೆ ತಿಳಿಸಬೇಕು. ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲೆ ಜಿಲ್ಲೆಗಳಿಗೆ ತೆರಳಿ ಈ ಕಾರ್ಯವನ್ನು ಕೈಗೊಳ್ಳಬೇಕಿದೆ. ಈಗ ರಾಜಕೀಯ ಪಕ್ಷಗಳಿಗಿಂತ ಜನಪರವಾಗಿ ಮಾತನಾಡುವ ಧ್ವನಿಗಳ ಅಗತ್ಯ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ಏಕೆ ರಚಿಸಿದರು ಎಂಬುದನ್ನು ಮೊದಲು ಅರ್ಥಮಾಡಿಕೊಳ್ಳಬೇಕು. ಸ್ವಾತಂತ್ರ್ಯ ಪಡೆದ ಭಾರತ ಮತ್ತೆ ದಬ್ಬಾಳಿಕೆಯ ವ್ಯವಸ್ಥೆಯ ಹಿಡಿತಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ಸಂವಿಧಾನ ರೂಪಿಸಲಾಯಿತು. ಆದರೆ, ಇಂದು ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಸಂವಿಧಾನ ಮತ್ತು ಮಾನವೀಯ ಮೌಲ್ಯಗಳ ರಕ್ಷಣೆಗಾಗಿ ಜನರು ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

WhatsApp Image 2026 11 01 at 12.31.22 AM

ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗುತ್ತಿದೆ: ಸಚಿವ ರಿಝ್ವಾನ್ ಅರ್ಷದ್

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವ ರಿಝ್ವಾನ್ ಅರ್ಷದ್, ಕೇಂದ್ರ ಸರಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಹೊಸ ಕಾನೂನುಗಳನ್ನು ಜಾರಿಗೆ ತರುತ್ತಿದೆ ಎಂದು ಆರೋಪಿಸಿದರು.

ದೇಶದ ಜನರ ಬದುಕನ್ನು ಸುರಕ್ಷಿತವಾಗಿಡುವ ಜವಾಬ್ದಾರಿಯಿಂದ ಸರಕಾರ ನುಣುಚಿಕೊಳ್ಳುತ್ತಿದೆ. ಅಲ್ಪಸಂಖ್ಯಾತರು ನಿರಂತರವಾಗಿ ತೊಂದರೆ ಮತ್ತು ಕಿರುಕುಳಗಳನ್ನು ಎದುರಿಸುತ್ತಿದ್ದಾರೆ. ಇವುಗಳ ವಿರುದ್ಧ ಧ್ವನಿ ಎತ್ತುವವರನ್ನು ದೇಶದ್ರೋಹಿಗಳೆಂದು ಬಿಂಬಿಸಲಾಗುತ್ತಿದೆ ಎಂದು ಅವರು ದೂರಿದರು.

WhatsApp Image 2026 11 01 at 12.22.12 AM 1

ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಸಮಾನ ಸಮಾಜ ನಿರ್ಮಾಣ: ಎ.ಬಿ. ಇಬ್ರಾಹಿಂ

ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ್ತ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಮಾತನಾಡಿ, ಜಗತ್ತಿನ ಹಲವು ದೇಶಗಳಲ್ಲಿ ಅಲ್ಪಸಂಖ್ಯಾತರು ಮತ್ತು ಮೂಲನಿವಾಸಿಗಳು ನಿರಂತರವಾಗಿ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪ್ರತಿನಿತ್ಯ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಅಲ್ಪಸಂಖ್ಯಾತರು ಸರಕಾರಿ ಸೌಲಭ್ಯಗಳನ್ನು ಪಡೆಯಲು ಹೋರಾಟ ನಡೆಸುವುದರ ಜೊತೆಗೆ ಸಮುದಾಯದ ಆಂತರಿಕ ಬದಲಾವಣೆಗೂ ಆದ್ಯತೆ ನೀಡಬೇಕು. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

WhatsApp Image 2026 11 01 at 12.22.11 AM

ಮೂವರಿಗೆ ಪ್ರಶಸ್ತಿ ಪ್ರದಾನ

ಸಮಾವೇಶದಲ್ಲಿ ಸಚಿವ ರಿಝ್ವಾನ್ ಅರ್ಷದ್ ಅವರು ನಟ ಪ್ರಕಾಶ್ ರಾಜ್ ಅವರಿಗೆ ‘ಮಾನವ ರತ್ನ’, ದುಬೈ ಉದ್ಯಮಿ ಹಿದಾಯತುಲ್ಲಾ ಅಬ್ಬಾಸ್ ಅವರಿಗೆ ‘ಸೇವಾ ರತ್ನ’ ಹಾಗೂ ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸುರೇಶ್ ಭಟ್ ಬಾಕ್ರಬೈಲ್ ಅವರಿಗೆ ‘ಸೌಹಾರ್ದ ರತ್ನ’ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಮೂವರಿಗೂ ತಲಾ 50 ಸಾವಿರ ರೂ. ನಗದು ಪುರಸ್ಕಾರ ನೀಡಲಾಯಿತು.

WhatsApp Image 2026 11 01 at 12.22.10 AM

ಸಮಾಜಪರ ಕಾಳಜಿಯನ್ನು ಮೆರೆದ ಪ್ರಶಸ್ತಿ ಪುರಸ್ಕೃತರು, ತಮಗೆ ದೊರೆತ ನಗದು ಬಹುಮಾನವನ್ನು ಸಮಾಜಮುಖಿ ಹೋರಾಟಗಳಿಗೆ ಸಮರ್ಪಿಸಿದರು. ನಟ ಪ್ರಕಾಶ್ ರಾಜ್ ಅವರು ತಮ್ಮ ಪ್ರಶಸ್ತಿ ಮೊತ್ತವನ್ನು ಎಸ್‌ಐಆರ್ ಹೋರಾಟದ ಉದ್ದೇಶಕ್ಕಾಗಿ ಸಾಮಾಜಿಕ ಹೋರಾಟಗಾರ ಕೆ.ಎಲ್. ಅಶೋಕ್ ಅವರಿಗೆ ನೀಡಿದರು. ಹಿದಾಯತುಲ್ಲಾ ಅಬ್ಬಾಸ್ ಅವರು ಹೂಡೆಯ ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ಉಸ್ತಾದ್ ಸಾದಿಕ್ ಅವರಿಗೆ ನಗದು ಪುರಸ್ಕಾರವನ್ನು ನೀಡಿದರು. ಸುರೇಶ್ ಭಟ್ ಬಾಕ್ರಬೈಲ್ ಅವರು ತಮ್ಮ ನಗದು ಪುರಸ್ಕಾರವನ್ನು ಹಿಂದಿರುಗಿಸಿದ್ದು, ಆ ಮೊತ್ತವನ್ನು ಒಕ್ಕೂಟದ ಅಧ್ಯಕ್ಷರು ಎಸ್‌ಐಆರ್ ಹೋರಾಟಕ್ಕಾಗಿ ಕೆ.ಎಲ್. ಅಶೋಕ್ ಅವರಿಗೆ ಹಸ್ತಾಂತರಿಸಿದರು.

WhatsApp Image 2026 11 01 at 12.22.10 AM 1

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಮಾಜಿಕ ಕಾರ್ಯಕರ್ತರಾದ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ, ಬಿಪಿನ್ ಚಂದ್ರಪಾಲ್ ಕಾರ್ಕಳ, ಜೆರಾಲ್ಡ್ ಪಿಂಟೋ ಉಡುಪಿ, ಚಂದ್ರಶೇಖರ್ ಶೆಟ್ಟಿ ಕುಂದಾಪುರ, ಸಾಮಾಜಿಕ ಹೋರಾಟಗಾರ್ತಿ ಗೀತಾ ಸುರೇಶ್ ಕುಮಾರ್ ಬೈಂದೂರು ಹಾಗೂ ಲೇಖಕಿ ಫಾತಿಮಾ ರಲಿಯಾ ಹೆಜಮಾಡಿ ಅವರನ್ನು ಸನ್ಮಾನಿಸಲಾಯಿತು.

WhatsApp Image 2026 11 01 at 12.22.11 AM 2

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಮುಹಮ್ಮದ್ ಯಾಸೀನ್ ಮಲ್ಪೆ ಆಶಯ ಮತ್ತು ಅಭಿನಂದನಾ ಭಾಷಣ ಮಾಡಿದರು.

WhatsApp Image 2026 11 01 at 12.22.12 AM

ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಜಿಲ್ಲಾ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗರ್ಫೂ, ಉಡುಪಿ ಜಿಲ್ಲಾ ವೆಲ್ಫೇರ್ ಫೋರಂ ಯುಎಇಯ ಎಂ.ಇ. ಮುಳೂರು, ಉದ್ಯಮಿ ಕರುಣಾಕರ ಶೆಟ್ಟಿ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಗೌರವಾಧ್ಯಕ್ಷ ದಿವಾಕರ ಸನಿಲ್, ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಉಡುಪಿ ಸಹಬಾಳ್ವೆ ಸಂಚಾಲಕ ಪ್ರೊ. ಫಣಿರಾಜ್, ಸಾಮಾಜಿಕ ಹೋರಾಟಗಾರ ಕೆ.ಎಲ್. ಅಶೋಕ್, ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಆಸೀಫ್ ಕೋಟೇಶ್ವರ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾರ್ಗ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಕೆ. ಅಶ್ರಫ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

WhatsApp Image 2026 11 01 at 12.22.09 AM

ಒಕ್ಕೂಟದ ಹಿರಿಯ ಉಪಾಧ್ಯಕ್ಷ ಮುಹಮ್ಮದ್, ಮಾಜಿ ಅಧ್ಯಕ್ಷರಾದ ಅಶ್ಫಾಕ್ ಅಹಮದ್ ಕಾರ್ಕಳ ಮತ್ತು ಇಬ್ರಾಹಿಂ ಸಾಹೇಬ್ ಕೋಟ, ವಿವಿಧ ತಾಲೂಕುಗಳ ಅಧ್ಯಕ್ಷರು ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Screenshot 2026 11 01 002726

ಹಾಫಿಝ್ ಅಬ್ದುಲ್ ರಹ್ಮಾನ್ ಅಶ್ರಫ್ ಕುರಾನ್ ಪಠಿಸಿದರು. ಕಾರ್ಯಕ್ರಮದ ಸಂಚಾಲಕ ಮೌಲಾನ ಝಮೀರ್ ಅಹ್ಮದ್ ರಶಾದಿ ಸ್ವಾಗತಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ ವಂದಿಸಿದರು. ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...

ಗದಗ | ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಸವರಾಜ ರಾಯರಡ್ಡಿ...