ಉಡುಪಿ | ಕೃಷಿ ಸೇರಿದಂತೆ ಹೈನುಗಾರಿಕೆ ಚಟುವಟಿಕೆ ಕೈಗೊಳ್ಳಲು ಆರ್ಥಿಕ ಸಹಕಾರ ನೀಡಿ : ಸಿ.ಇ.ಓ ಪ್ರತೀಕ್ ಬಾಯಲ್

Date:

ರೈತರ ಬಾಂಧವರು ಕೃಷಿ ಸೇರಿದಂತೆ ಹೈನುಗಾರಿಕೆ ಚಟುವಟಿಕೆ ಕೈಗೊಳ್ಳಲು ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಅರ್ಹರಿಗೆ ಸಮರ್ಪಕವಾಗಿ ಒದಗಿಸಿ, ಅವರು ಆರ್ಥಿಕವಾಗಿ ಸ್ವಾವಲಂಭಿಗಳಾಗಲು ಪ್ರೋತ್ಸಾಹಿಸುವ ಕಾರ್ಯವನ್ನು ಬ್ಯಾಂಕುಗಳು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಸರಕಾರದ ವಿವಿಧ ಯೋಜನೆಗಳಡಿ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ನೆರವು ಕೋರಿ ಬ್ಯಾಂಕುಗಳಿಗೆ ಬರುವ ರೈತರು, ಸಾರ್ವಜನಿಕರು ಹಾಗೂ ಮಹಿಳಾ ಫಲಾನುಭವಿಗಳೊಂದಿಗೆ ಸೌಹಾರ್ದತವಾಗಿ ನಡೆದುಕೊಳ್ಳುವುದರೊಂದಿಗೆ ಅವರುಗಳು ನೆರವು ಪಡೆಯಲು ಅನುಕೂಲಮಾಡಿಕೊಡಬೇಕು. ಹಣಕಾಸಿನ ವಂಚನೆಯನ್ನು ತಡೆಗಟ್ಟಲು ವಹಿವಾಟು ಉದ್ದೇಶಗಳಿಗಾಗಿ 1600 ಫೋನ್ ಸಂಖ್ಯೆ ಸರಣಿಯನ್ನು ಮಾತ್ರ ಬಳಸುವಂತೆ ಬ್ಯಾಂಕುಗಳಿಗೆ ಆರ್.ಬಿ.ಐ ನಿರ್ದೇಶನ ನೀಡಿದೆ. ಎಲ್ಲಾ ಬ್ಯಾಂಕುಗಳು ವಹಿವಾಟು-ಸಂಬಂಧಿತ ಕರೆಗಳಿಗೆ 1600 ರಿಂದ ಪ್ರಾರಂಭವಾಗುವ ಫೋನ್ ಸಂಖ್ಯೆಗಳನ್ನು ಬಳಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

WhatsApp Image 2026 09 03 at 7.13.58 PM

ಸೈಬರ್‌ ವಂಚನೆಯಿಂದ ಹಣ ಕಳೆದುಕೊಂಡ ಗ್ರಾಹಕರು ಬ್ಯಾಂಕುಗಳಿಗೆ ವಿಚಾರಿಸಲು ಬಂದಾಗ ಅವರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳುವುದರೊಂದಿಗೆ ಸಲಹೆ ಸೇರಿದಂತೆ ಮತ್ತಿತರ ತಿಳುವಳಿಕೆಗಳನ್ನು ನೀಡಬೇಕು. ಸಾರ್ವಜನಿಕರು ಈ ರೀತಿಯ ವಂಚನೆಗೊಳಗಾದಂತೆ ನೋಡಿಕೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅವರುಗಳಿಗೆಅರಿವು ಮೂಡಿಸಬೇಕು. ನಿಯಮಾನುಸಾರ ಅವರುಗಳಿಗೆ ಪರಿಹಾರ ಒದಗಿಸಲು ಅವಕಾಶವಿದ್ದಲ್ಲಿ ಅವರಿಗೆ ನೀಡಬೇಕು. ಪೊಲೀಸ್‌ನವರು ಪ್ರಕರಣ ಸಂಬಂಧ ತನಿಖೆಗೆ ಬಂದಾಗ ಅವರೊಂದಿಗೆ ಸಹಕರಿಸಬೇಕೆಂದು ತಿಳಿಸಿದರು.

ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಯು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದೇಶದ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಸುಲಭವಾಗಿ ಶಿಕ್ಷಣ ಸಾಲ ನೀಡುವ ಯೋಜನೆಯಾಗಿದ್ದು, ಈ ಬಗ್ಗೆ ಜಿಲ್ಲೆಯ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಭೇಟಿ ಮಾಡಿ, ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದರು.

ಆರ್.ಬಿ.ಐ ಎ.ಜಿ.ಎಂ ನಿಶಾ ಠಾಕೂರ್ ಮಾತನಾಡಿ, ಬ್ಯಾಂಕಿನ ಆಂತರಿಕ ನಿಯಮಗಳಿಗೆ ಅನುಗುಣವಾಗಿ ಸಣ್ಣ ಮೊತ್ತದ ವಂಚನಾತ್ಮಕ ಎಲೆಕ್ಟ್ರಾನಿಕ್ ಬ್ಯಾಂಕಿಂಗ್ ವೈವಾಟುಗಳಿಂದ
ವ್ಯಕ್ತಿಯ ನಷ್ಟವು ನಿಜವಾದದ್ದು ಎಂದು ಸಾಧಿಸಿದಲ್ಲಿ, ರಾಷ್ಟ್ರೀಯ ಸೈಬರ್ ಅಪರಾಧ ವರದಿ ಮಾಡುವ ಪೋರ್ಟಲ್ ಅಥವಾ ರಾಷ್ಟ್ರೀಯ ಸೈಬ್ ಅಪರಾಧ ಸಹಾಯವಾಣಿ ನಲ್ಲಿ ನಿಗದಿತ ಅವಧಿಯಲ್ಲಿ ಪ್ರಕರಣ ದಾಖಲಿಸಿದ್ದಲ್ಲಿ, ನಿವ್ವಳ ನಷ್ಟದ ಮೊತ್ತದ ಶೇ.85 ರಷ್ಟು ಅಥವಾ 25,000, ಯಾವುದು ಕಡಿಮೆಯೋ ಅದನ್ನು ಅವರ ಜೀವಿತಾವಧಿಯಲ್ಲಿ ಒಂದು ಬಾರಿ ಮಾತ್ರ ಪರಿಹಾರ ನೀಡಲಾಗುವುದು, ಇ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದರು.

ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ-1 ರ ರೀಜನಲ್ ಮ್ಯಾನೆಜರ್ ತದಿನಾಡ ಶ್ರೀನಾಗ ಪೂರ್ಣಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜೂನ್ ಮಾಹೆಯ ಅಂತ್ಯದವರೆಗೆ ಜಿಲ್ಲೆಯ ಒಟ್ಟು 440 ಶಾಖೆಗಳಲ್ಲಿ ಠೇವಣಿ 48715.93 ಕೋಟಿ ರೂ., ಮುಂಗಡ ಠೇವಣಿ 24,184.84 ಕೋಟಿ ಸೇರಿದಂತೆ ಒಟ್ಟು ಬ್ಯಾಂಕುಗಳಲ್ಲಿ 72,900.77 ಕೋಟಿ ರೂ. ವಹಿವಾಟು ನಡೆದಿದ್ದು, ಬ್ಯಾಂಕುಗಳ ಠೇವಣಿ ಅನುಪಾತ ಶೇ.49.64 ಇದೆ. ಈ ಪ್ರಮಾಣವು ರೀಸರ್ವ್ ಬ್ಯಾಂಕ್ ಮಾರ್ಗ ಸೂಚಿಯಂತೆ ಕನಿಷ್ಠ ಶೇ.60 ಇರಬೇಕಾಗಿದೆ ಎಂದರು.

ಜಿಲ್ಲೆಗೆ ಪ್ರಸಕ್ತ ಸಾಲಿಗೆ ಆದ್ಯತೆಯ ಮತ್ತು ಆದ್ಯತೆಯೇತರ ವಲಯಗಳೆರಡಕ್ಕೂ ಒಟ್ಟಾರೆಯಾಗಿ 18,532.26 ಕೋಟಿ ರೂ.ಗಳ ವಾರ್ಷಿಕ ಕ್ರೆಡಿಟ್ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಈವರೆಗೆ 7,302.87 ಕೋಟಿ ರೂ. ಗುರಿ ಸಾಧಿಸಿ, ಶೇ. 39.41 ಸಾಧನೆ ಮಾಡಲಾಗಿದೆ ಎಂದ ಅವರು, ಕೃಷಿ ವಲಯದಲ್ಲಿ 4801.25 ಕೋಟಿ ನಿಗಧಿತ ಗುರಿಗೆ 1653.82 ಗುರಿ ಸಾಧಿಸಿ ಶೇ.34.45, ಎಂ.ಎಸ್.ಎಂ.ಇ ವಲಯಕ್ಕೆ 4192.82 ಕೋಟಿ ನಿಗಧಿತ ಗುರಿಗೆ 2158.61 ಗುರಿ ಸಾಧಿಸಿ ಶೇ. 51.48 ರಷ್ಟು, ಶಿಕ್ಷಣ ವಲಯದಲ್ಲಿ 231.82 ಕೋಟಿ ರೂ. ನಿಗಧಿತ ಗುರಿಗೆ 39.29 ಗುರಿ ಸಾಧಿಸಿ ಶೇ. 16.95 ರಷ್ಟು, ವಸತಿ ಕ್ಷೇತ್ರಗಳಿಗೆ 264.54 ಕೋಟಿ ರೂ. ನಿಗಧಿತ ಗುರಿಗೆ 69.64 ಗುರಿ ಸಾಧಿಸಿ ಶೇ. 26.32 ರಷ್ಟು, ಇತರೆ ಕ್ಷೇತ್ರಗಳಿಗೆ 373.47 ಕೋಟಿ ರೂ .ನಿಗಧಿತ ಗುರಿಗೆ, 186.45 ಗುರಿ ಸಾಧಿಸಿ ಶೇ. 49.92 ಹಾಗೂ ಆದ್ಯತೇತರ ವಲಯಗಳಿಗೆ 8668.37 ಕೋಟಿ ರೂ. ನಿಗಧಿತ ಗುರಿಗೆ, 3195.06 ರಷ್ಟು ಗುರಿ ಸಾಧಿಸಿ ಶೇ. 36.86 ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಮಾತನಾಡಿ, ಕೇಂದ್ರ ಸರ್ಕಾರದ ಪಿ.ಎಂ. ಸ್ವನಿಧಿ ಯೋಜನೆ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಬಲೀಕರಣಕ್ಕಾಗಿ ಸೆಪ್ಟೆಂಬರ್ 1 ರಿಂದ 30, ರವರೆಗೆ ಆಯೋಜಿಸಲಾಗುವ ಲೋಕ್ ಕಲ್ಯಾಣ್ ಮೇಳ ವಿಶೇಷ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಮೂಡಿಸುವುದರೊಂದಿಗೆ ಬೀದಿ ಬದಿ ವ್ಯಾಪಾರಿಗಳಿಗೆ ತಮ್ಮ ವ್ಯವಹಾರವನ್ನು ಅಭಿವೃದ್ಧಿ ಪಡಿಸಲು ಬ್ಯಾಂಕ್ಗಳಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು ಬ್ಯಾಂಕ್ ನ ಅಧಿಕಾರಿಗಳು ಮುಂದಾಗಬೇಕು ಎಂದರು.

ಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ರಾಜೇಶ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...