ಉಡುಪಿ | ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಿ: ಸಿಇಓ ಪ್ರತೀಕ್ ಬಾಯಲ್

Date:

ಉಡುಪಿ ಜಿಲ್ಲೆಯ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್‌ಎಂಇ) ಅಭಿವೃದ್ಧಿಗೆ ಬ್ಯಾಂಕುಗಳು ಹೆಚ್ಚಿನ ಆರ್ಥಿಕ ನೆರವು ನೀಡುವ ಮೂಲಕ ಉದ್ಯಮ ವಲಯದ ಬೆಳವಣಿಗೆಗೆ ಉತ್ತೇಜನ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 15 ಸಾವಿರಕ್ಕೂ ಅಧಿಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿದ್ದು, ಗೋಡಂಬಿ ಸಂಸ್ಕರಣೆ, ಮೆರಿನ್ ಉತ್ಪನ್ನಗಳು ಹಾಗೂ ಸಿದ್ಧ ಆಹಾರ ಘಟಕಗಳಂತಹ ಕೈಗಾರಿಕೆಗಳಿಗೆ ಅಗತ್ಯವಿರುವ ಮೂಲಸೌಕರ್ಯ ಮತ್ತು ಬಂಡವಾಳ ನೆರವು ಒದಗಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಬ್ಯಾಂಕುಗಳು ಆದ್ಯತೆಯ ಮೇಲೆ ಸಾಲ ಸೌಲಭ್ಯ ನೀಡಬೇಕು. ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ ಕುರಿತು ರೈತರಿಗೆ ಹೆಚ್ಚಿನ ಅರಿವು ಮೂಡಿಸಿ, ವಿಮಾ ವ್ಯಾಪ್ತಿಗೆ ಹೆಚ್ಚಿನ ರೈತರನ್ನು ಸೇರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸುವಲ್ಲಿ ಬ್ಯಾಂಕುಗಳು ಮತ್ತು ಇಲಾಖೆಗಳ ಸಮನ್ವಯ ಅತ್ಯಂತ ಮುಖ್ಯವಾಗಿದೆ. ಅರ್ಜಿದಾರರಿಗೆ ಸೂಕ್ತ ಮಾರ್ಗದರ್ಶನ ನೀಡಿ, ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಷ್ಕರಿಸಿ ನೆರವು ತಲುಪಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಬ್ಯಾಂಕ್ ಸಾಲ-ಠೇವಣಿ ಅನುಪಾತ ಶೇ.48.99ರಷ್ಟಿದ್ದು, ಇದು ರಿಸರ್ವ್ ಬ್ಯಾಂಕ್ ಮಾರ್ಗಸೂಚಿಯ ಶೇ.60ರ ಗುರಿಗಿಂತ ಕಡಿಮೆಯಾಗಿದೆ. ಆದ್ದರಿಂದ ವಸತಿ, ಶಿಕ್ಷಣ, ಸ್ವಯಂ ಉದ್ಯೋಗ ಹಾಗೂ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ವಿತರಣೆ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ವಿವಿಧ ಯೋಜನೆಗಳಡಿ ಜಿಲ್ಲೆಯಲ್ಲಿ ಸಾಲ ವಿತರಣೆ ಮತ್ತು ಸಾಧನೆ ಕುರಿತು ಮಾಹಿತಿ ನೀಡಲಾಯಿತು. ಕಳೆದ ಸಾಲಿನಲ್ಲಿ ವಾರ್ಷಿಕ ಕ್ರೆಡಿಟ್ ಯೋಜನೆಯಡಿ ಜಿಲ್ಲೆ ಶೇ.110.81ರಷ್ಟು ಗುರಿ ಸಾಧನೆ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಆರ್‌ಬಿಐ, ನಬಾರ್ಡ್, ಜಿಲ್ಲಾ ಲೀಡ್ ಬ್ಯಾಂಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಬ್ಯಾಂಕ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...