ಉಡುಪಿ | ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ ತಂದ ಜಿಲ್ಲಾ ಪೊಲೀಸ್

Date:

ಉಡುಪಿ ಜಿಲ್ಲೆಯ ಸಾರ್ವಜನಿಕರು ಕೆಲಸದ ನಿಮಿತ್ತ ಅಥವಾ ಪ್ರವಾಸಕ್ಕಾಗಿ ತಮ್ಮ ಮನೆಯನ್ನು ಲಾಕ್ ಮಾಡಿ ಹೊರಗೆ ಹೋದ ಸಂದರ್ಭಗಳಲ್ಲಿ ಮನೆಗಳ ಸುರಕ್ಷತೆಯನ್ನು ಖಚಿತಪಡಿಸಲು ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ (LHBS) ಎಂಬ ವಿನೂತನ ಯೋಜನೆಯನ್ನು ಆರಂಭಿಸಲಾಗಿದೆ.

- Advertisement -

ಈ ಯೋಜನೆಯಡಿ ಲಾಕ್ ಆಗಿರುವ ಮನೆಗಳ ಮೇಲೆ ಪೊಲೀಸರು ವಿಶೇಷ ನಿಗಾ ವಹಿಸಲಿದ್ದು, ಸಂಬಂಧಿತ ಪೊಲೀಸ್ ಠಾಣೆಯ ಬೀಟ್ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ಹಗಲು ಹಾಗೂ ರಾತ್ರಿ ವೇಳೆಯಲ್ಲಿ ಭದ್ರತಾ ಪರಿಶೀಲನೆ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಸಾರ್ವಜನಿಕರು ಮನೆಯನ್ನು ಲಾಕ್ ಮಾಡಿ ಹೊರಡುವ ಮುನ್ನ ಉಡುಪಿ ಜಿಲ್ಲಾ ನಿಯಂತ್ರಣ ಕೊಠಡಿಯ ವಿಶೇಷ ದೂರವಾಣಿ ಸಂಖ್ಯೆ 0820-2526709 ಗೆ ಕರೆ ಮಾಡಿ ಮಾಹಿತಿ ನೀಡಬೇಕು. ಬಳಿಕ ನಿಯಂತ್ರಣ ಕೊಠಡಿಯಿಂದ ನೀಡಲಾಗುವ ವಾಟ್ಸಾಪ್ ಸಂಖ್ಯೆಗೆ ಮನೆಯಿಂದ ತೆರಳುವ ಮತ್ತು ಮರಳಿ ಬರುವ ದಿನಾಂಕ ಹಾಗೂ ಸಮಯ, ಮನೆಯ ಸಂಪೂರ್ಣ ವಿಳಾಸ ಮತ್ತು ಮನೆಯ ಮುಂಭಾಗ ನಿಂತು ತೆಗೆದ ಸೆಲ್ಫಿ ಫೋಟೋವನ್ನು ಕಳುಹಿಸಬೇಕು.

ಈ ಮಾಹಿತಿಯನ್ನು ಜಿಲ್ಲಾ ನಿಯಂತ್ರಣ ಕೊಠಡಿಯಿಂದ ಸಂಬಂಧಿತ ಪೊಲೀಸ್ ಠಾಣೆಗೆ ರವಾನಿಸಲಾಗುವುದು. ನಂತರ ಸಂಬಂಧಿತ ಬೀಟ್ ಸಿಬ್ಬಂದಿ ನಿಗದಿತ ಅವಧಿವರೆಗೆ ಮನೆಯ ಭದ್ರತೆ ಮತ್ತು ಸುರಕ್ಷತೆಯ ಮೇಲೆ ನಿಗಾ ಇರಿಸಲಿದ್ದಾರೆ.

ಈ ಸೌಲಭ್ಯವು ಕೇವಲ ಸ್ವಂತ ಅಥವಾ ವೈಯಕ್ತಿಕ ಮನೆಗಳಿಗೆ ಮಾತ್ರ ಅನ್ವಯವಾಗಿದ್ದು, ಅಪಾರ್ಟ್‌ಮೆಂಟ್ ಹಾಗೂ ಬಹುಮಹಡಿ ಫ್ಲಾಟ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕೃತವಲ್ಲದ ಅಥವಾ ಅಪರಿಚಿತ ದೂರವಾಣಿ ಸಂಖ್ಯೆಗಳೊಂದಿಗೆ ಮನೆಯ ವಿವರಗಳನ್ನು ಹಂಚಿಕೊಳ್ಳಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

1010769091
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಜಮೀನು ಕಬಳಿಕೆ: ನಾಲ್ವರ ವಿರುದ್ಧ ಪ್ರಕರಣ

ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಸರ್ವೇ ನಂಬರ್ 619ಎ/2 ರಲ್ಲಿದ್ದ 6...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...