ಹಿರಿಯ ಪತ್ರಕರ್ತ ಗಣೇಶ್ ಪ್ರಭು (61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮಣಿಪಾಲದಿಂದ ಪ್ರಕಟವಾಗುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ ಹಾಗೂ ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ ಸುಮಾರು 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿ ತಮ್ಮ ಸೇವೆಯನ್ನು ಮುಂದುವರಿಸಿದ್ದರು.
ಸಾಧುಸ್ವಭಾವಿ, ಪರಿಶ್ರಮಿ ಮತ್ತು ನಿಷ್ಠಾವಂತ ಪತ್ರಕರ್ತರಾಗಿ ಪರಿಚಿತರಾಗಿದ್ದ ಗಣೇಶ್ ಪ್ರಭು ಅವರ ನಿಧನವು ಪತ್ರಿಕೋದ್ಯಮ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ.
ಇವರ ಅಗಲಿಕೆಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.






