ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾದರು.
ಸರಳ ವ್ಯಕ್ತಿತ್ವ, ಸ್ನೇಹಪರ ನಡೆ ಹಾಗೂ ವೃತ್ತಿನಿಷ್ಠೆಯಿಂದ ಗುರುತಿಸಿಕೊಂಡಿದ್ದ ನಾಗೇಶ್ ಗಾಣಿಗ ಅವರು ಸಿದ್ದಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನಪರ ಸಮಸ್ಯೆಗಳು, ಸ್ಥಳೀಯ ಬೆಳವಣಿಗೆಗಳು ಹಾಗೂ ಪ್ರಮುಖ ಘಟನೆಗಳನ್ನು ನಿಷ್ಪಕ್ಷಪಾತವಾಗಿ ವರದಿ ಮಾಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದರು.
ಅವರ ಅಕಾಲಿಕ ನಿಧನವು ಪತ್ರಿಕಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದ್ದು, ಸಹೋದ್ಯೋಗಿಗಳು, ಪತ್ರಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.





