ಉಡುಪಿ ಜಿಲ್ಲೆಯಲ್ಲಿ 2,970 ವಿದ್ಯಾರ್ಥಿಗಳಿಗೆ ನೀಟ್ ಮರುಪರೀಕ್ಷೆ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ಉಡುಪಿ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ (ಯುಜಿ) ಮರುಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ, ಸಂಪೂರ್ಣ ಪಾರದರ್ಶಕತೆ ಹಾಗೂ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ನಡೆಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಉಂಟಾಗದಂತೆ ಅಗತ್ಯ ಸೌಲಭ್ಯಗಳು ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಜಿಲ್ಲೆಯಲ್ಲಿ ಒಟ್ಟು 2,970 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 938 ಬಾಲಕರು, 2,032 ಬಾಲಕಿಯರು ಹಾಗೂ 7 ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ಸೇರಿದ್ದಾರೆ. ಒಬ್ಬ ಅಭ್ಯರ್ಥಿಗೆ ಸ್ಕ್ರೈಬ್ ಸೌಲಭ್ಯ ಒದಗಿಸಲಾಗಿದೆ.

ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 15 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ನಿಯಮಾನುಸಾರ ಒಂದು ಗಂಟೆ ಹೆಚ್ಚುವರಿ ಸಮಯ ದೊರೆಯಲಿದೆ.

NEET RE EXAM MEETING 1

ವಿದ್ಯಾರ್ಥಿಗಳ ಪರಿಶೀಲನಾ ಪ್ರಕ್ರಿಯೆಯನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಪೂರ್ಣಗೊಳಿಸಿ, ನಂತರ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್, ಬ್ಲೂಟೂತ್ ಸಾಧನ, ಇಯರ್‌ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಮೂಲ ಗುರುತಿನ ಚೀಟಿ ಹಾಗೂ ಎರಡು ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ವ್ಯವಸ್ಥೆ, ಸೂಕ್ತ ಪೊಲೀಸ್ ಭದ್ರತೆ, ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಸುರಕ್ಷಿತ ಸಾಗಾಟಕ್ಕೆ ವಾಹನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ ಹಾಗೂ ಅಗ್ನಿಶಾಮಕ ಮತ್ತು ಆರೋಗ್ಯ ಸಿಬ್ಬಂದಿಯ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಿತ ಇಲಾಖೆಗಳಿಗೆ ಸೂಚನೆ ನೀಡಿದರು.

ನೀಟ್ ಜಿಲ್ಲಾ ನೋಡಲ್ ಅಧಿಕಾರಿ ಎನ್. ಕರೀಂ ಖಾನ್ ಮಾತನಾಡಿ, ಅಜ್ಜರಕಾಡು, ಕೋಟ, ಉಡುಪಿ ಹಾಗೂ ಬ್ರಹ್ಮಾವರದ ಆರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆ, ಪ್ರತ್ಯೇಕ ಪ್ರಿಸ್ಕಿಂಗ್ ಹಾಗೂ ಬಯೋಮೆಟ್ರಿಕ್ ದೃಢೀಕರಣದ ಬಳಿಕವೇ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ...