ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಸಾಲ–ಸಹಾಯಧನ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು–ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸದು), ಅರಿವು–ಶೈಕ್ಷಣಿಕ ನೇರ ಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ (ಟ್ರ್ಯಾಕ್ಟರ್/ಟ್ಯಾಕ್ಸಿ) ಹಾಗೂ ಹೊಲಿಗೆ ಯಂತ್ರ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್‌ಜೀ ಜನಸ್ನೇಹಿ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿಯ 080-22374832, 8050770004, 8050770005 ಹಾಗೂ ಉಡುಪಿ ಜಿಲ್ಲಾ ಕಚೇರಿಯ 0820-2574882 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.







