ಉಡುಪಿ ರಾಜ್ಯದ ಮೊದಲ ಸಂಪೂರ್ಣ ಸಾಕ್ಷರತಾ ಜಿಲ್ಲೆ: ಸಚಿವ ರಿಝ್ವಾನ್ ಅರ್ಷದ್ ಘೋಷಣೆ

Date:

ಕಡಲು ನಮ್ಮ ನಿಜವಾದ ಮತ್ತು ಅತಿದೊಡ್ಡ ಸಂಪತ್ತು. ಇದರ ಸದ್ಬಳಕೆಗಾಗಿ ಕರ್ನಾಟಕ ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಸರಕಾರ ಅನುಮೋದನೆ ನೀಡಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಹೇಳಿದ್ದಾರೆ.

- Advertisement -

ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಆಯೋಜಿಸ ಲಾದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಆಕರ್ಷಕ ಪಥಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡುತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಈ ನೀತಿಯ ಅಡಿಯಲ್ಲಿ ಸರಕಾರಿ ಮೀನುಗಾರಿಕಾ ಕಾಲೇಜಿನಲ್ಲಿ ಕರ್ನಾಟಕ ಮರೈನ್ ಟೆಕ್ನಾಲಜಿ ಮತ್ತು ಬ್ಲೂ ಎಕಾನಮಿ ಸಂಸ್ಥೆಯನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗಿದೆ. ಅಲ್ಲದೇ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಯನ್ನು 60ರಿಂದ 200ಕ್ಕೆ ಏರಿಸಲು ನಿರ್ಧರಿಸಲಾಗಿದೆ ಎಂದೂ ಅವರು ಹೇಳಿದರು.

ಕರಾವಳಿ ಮತ್ತು ಮಲೆನಾಡು ಭಾಗದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಒದಗಿಸಲು ಯೋಜಿಸಲಾಗಿದೆ. ತ್ರಾಸಿ ಮತ್ತು ಮರವಂತೆ ಬೀಚ್‌ನಲ್ಲಿ ಲಭ್ಯವಿರುವ 7.07 ಎಕರೆ ಭೂಮಿಯನ್ನು ಬಳಸಿಕೊಂಡು 48 ಕೋಟಿ ರೂ. ವೆಚ್ಚ ದೊಂದಿಗೆ ರೆಸಾರ್ಟ್ ಹಾಗೂ ವಿವಿಧ ಮನೋರಂಜನಾ ಪಾರ್ಕ್ ಹಾಗೂ ಕ್ರೀಡಾ ಚಟುವಟಿಕೆಗಳನ್ನು ರೂಪಿಸಲು ಮತ್ತು ಉತ್ತೇಜನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಆರ್ಥಿಕ ಬೆನ್ನೆಲುಬಾಗಿರುವ ಮೀನುಗಾರಿಕೆಗೆ ಹೆಚ್ಚಿನ ಉತ್ತೇಜನ, ಕರಾವಳಿಗೆ ಆಗಮಿಸುವ ಪ್ರವಾಸಿಗರಿ ಗಾಗಿ ಹಾಗೂ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ‘ಕಲಾ ನಡಿಗೆ, ನಿಮ್ಮ ಬಳಿಗೆ’ ಎಂಬ ವಿನೂತನ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ವಿಶೇಷ ಒತ್ತು ನೀಡಲಾಗಿದೆ ಎಂದರು.

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿರುವ ಖುಷಿಯೊಂದಿಗೆ ಉಡುಪಿ ಜಿಲ್ಲಾ ಪಂಚಾಯತ್ ಸಹ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರವಾಗಿರುವುದಾಗಿ ಅವರು ಪ್ರಕಟಿಸಿದರು. ಇದಕ್ಕಾಗಿ ಸಂಬಂಧಿಸಿದ ಎಲ್ಲರಿಗೂ ಅವರು ಅಭಿನಂದನೆ ಸಲ್ಲಿಸಿದರು.

ಕನ್ನಡಾಂಬೆಯ ಭಾವಚಿತ್ರದೊಂದಿಗೆ ಮೆರವಣಿಗೆ: ಬೆಳಗ್ಗೆ ನಗರದ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಚಿವರು ವಿವಿಧ ಟ್ಯಾಬ್ಲೋ ಸಹಿತ ಆಕರ್ಷಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ಕೆಎಂ ಮಾರ್ಗ, ಕೋರ್ಟ್ ರೋಡ್, ಜೋಡುಕಟ್ಟೆ ಮಾರ್ಗವಾಗಿ ಅಜ್ಜರಕಾಡಿನ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ಆಗಮಿಸಿತ್ತು.

ಬಹುಮಾನ ವಿತರಣೆ: ಸಚಿವರು ಮೆರಣಿಗೆಯಲ್ಲಿ ಪಾಲ್ಗೊಂಡ ಅತ್ಯುತ್ತಮ ಟ್ಯಾಬ್ಲೋಗಳಿಗೆ, ಪಥಸಂಚಲನದಲ್ಲಿ ಭಾಗವಹಿಸಿದ ಅತ್ಯುತ್ತಮ ತಂಡಗಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ತಂಡಗಳಿಗೆ ಬಹಮಾನಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಪಂ ಸಿಇಒ ಪತ್ರೀಕ್ ಬಾಯಲ್ ಉಪಸ್ಥಿತರಿದ್ದರು. ಜಿಲ್ಲಾ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್‌ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

WhatsApp Image 2026 11 01 at 10.50.59 PM 1

ರಾಜ್ಯದ ಮೊದಲ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ಉಡುಪಿ; ಸಚಿವ ರಿಝ್ವಾನ್ ಘೋಷಣೆ

ಜಿಲ್ಲಾ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಉಡುಪಿಯನ್ನು ರಾಜ್ಯದ ಮೊತ್ತಮೊದಲ ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಇಂದು ಘೋಷಿಸಿದರು.

ಕೇಂದ್ರ ಸರಕಾರದ ನಿಯಮಾನುಸಾರ ಉಡುಪಿ ಜಿಲ್ಲೆಯ 155 ಗ್ರಾಪಂಗಳು ಹಾಗೂ ಎಂಟು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶೇ. 95.53 ಸಾಕ್ಷರತೆಯ ಪ್ರಮಾಣದೊಂದಿಗೆ ರಾಜ್ಯದ ಮೊದಲ ಸಾಕ್ಷರತಾ ಜಿಲ್ಲೆಯಾಗಿ ಉಡುಪಿ ಹೊರಹೊಮ್ಮಿದ್ದು, ಉಸ್ತುವಾರಿ ಸಚಿವರು ಜಿಲ್ಲೆಯನ್ನು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’ ಎಂದು ಇಂದು ಅಧಿಕೃತವಾಗಿ ಘೋಷಣೆ ಮಾಡಿದರು.

ವಿಷ ಬೆರೆಸುವ ಪ್ರಯತ್ನದ ಬಗ್ಗೆ ಎಚ್ಚರ ಅಗತ್ಯ

ಉಡುಪಿ ತುಳುನಾಡು, ಸಂಸ್ಕೃತಿಯ ದೊಡ್ಡ ಭಾಗವಾಗಿದ್ದರೂ, ಕನ್ನಡದ ಮಹಾನ್ ಪರಂಪರೆಗೆ ಉಡುಪಿ ನೀಡಿ ರುವ ಕೊಡುಗೆ ಅಪಾರ. ಇಂತಹ ಭವ್ಯ ಪರಂಪರೆಯ ನೆಲದಲ್ಲಿ ಇದೀಗ ಜನರ ನಡುವೆ ವಿಷ ಬೆರೆಸುವ ಪ್ರಯತ್ನ ಗಳು ನಡೆಯುತ್ತಿದೆ. ಇದು ಅತ್ಯಂತ ನೋವಿನ ಹಾಗೂ ಬೇಸರದ ಸಂಗತಿ ಎಂದು ಸಚಿವ ರಿಝ್ವಾನ್ ನುಡಿದರು.

ಈ ಬಗ್ಗೆ ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು. ಇದು ಇಂದಿನ ಬಹು ದೊಡ್ಡ ಜವಾಬ್ದಾರಿ. ಇಲ್ಲಿ ನಾವೆಲ್ಲರೂ ಭಾರತೀಯರು, ಕನ್ನಡಿಗರು ಎನ್ನುವುದು ಮುಖ್ಯವೇ ಹೊರತು ಜಾತಿ, ಮತ, ಪಂಥಗಳಲ್ಲ ಎನ್ನುವುದನ್ನು ನೆನಪಿನಲ್ಲಿ ಇಡಬೇಕು. ಈ ಬಗ್ಗೆ ಪ್ರಜ್ಞಾವಂತ ಸಮುದಾಯಕ್ಕೆ ನಾನು ಹೆಚ್ಚು ಹೇಳುವುದಿಲ್ಲ ಎಂದರು.

ವಿವಿಧ ಬಹುಮಾನ ವಿಜೇತರು

ಆಕರ್ಷಕ ಟ್ಯಾಪ್ಲೋ: 1.ಪ್ರವಾಸೋದ್ಯಮ ಇಲಾಖೆ, 2.ಉಡುಪಿ ನಗರಸಭೆ, 3.ಕೃಷಿ ಇಲಾಖೆ.

ಪಥಸಂಚಲನ: ಪ್ರಾಥಮಿಕ ಶಾಲಾ ವಿಭಾಗ-1.ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳ್ತೂರು ಸಂತೆಕಟ್ಟೆ, 2.ಸರಕಾರಿ ಪ್ರಾಥಮಿಕ ಶಾಲೆ ವಳಕಾಡು. ಪ್ರೌಢ ಶಾಲಾ ವಿಭಾಗ:1.ಯು.ಕಮಲಾಬಾಯಿ ಹೈಸ್ಕೂಲ್ ಕಡಿಯಾಳಿ, 2.ಮಾಧವಕೃಪಾ ಆಂಗ್ಲಮಾಧ್ಯಮ ಪ್ರೌಢ ಶಾಲೆ ಮಣಿಪಾಲ, 3.ಆನಂದತೀರ್ಥ ವಿದ್ಯಾಲಯ ಪ್ರೌಢಶಾಲೆ ಕುಂಜಾರುಗಿರಿ.

ಕಾಲೇಜು ವಿಭಾಗ: 1.ಎಂಜಿಎಂ ಕಾಲೇಜು ಉಡುಪಿ ಎನ್‌ಸಿಸಿ ನೇವಿ, 2.ಪೂರ್ಣಪ್ರಜ್ಞ ಕಾಲೇಜು ಉಡುಪಿ ಎನ್‌ಸಿಸಿ ನೇವಿ, 3. ಪೂರ್ಣಪ್ರಜ್ಞ ಕಾಲೇಜು ಎನ್‌ಸಿಸಿ ಆರ್ಮಿ. ಸಾಂಸ್ಕೃತಿಕ ಕಾರ್ಯಕ್ರಮ: 1.ಅಂಬಲಪಾಡಿ ವಿದ್ಯಾಸಮುದ್ರ ಆಂಗ್ಲ ಮಾಧ್ಯಮ ಶಾಲೆ ಕಿದಿಯೂರು, 2.ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಂದ್ರಾಳಿ, 3.ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂಜಿಬೆಟ್ಟು ಉಡುಪಿ. ಸಮಾಧಾನಕರ ಬಹುಮಾನಗಳು: ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಶಾಲೆ ಅಲೆವೂರು ಹಾಗೂ ನಾರಾಯಣ ಗುರು ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮಲ್ಪೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ ಕಾಳಜಿ: ಹೊನವಾಡದಲ್ಲಿ ಸರ್ಕಾರಿ ಶಾಲೆಗೆ ನೂತನ ಕಟ್ಟಡ

ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ...

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು...

ರಾಯಚೂರು | ಕೌಟುಂಬಿಕ ಕಲಹ: ದಂಪತಿ ಸೇರಿ ಇಬ್ಬರು ಮಕ್ಕಳು ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ, ಹೆಂಡತಿ ಇಬ್ಬರು ಮಕ್ಕಳು ಸೇರಿ ನಾಲ್ವರು...