ಉಡುಪಿ | ಯುವ ಪೀಳಿಗೆಗೆ ಕಾರಂತರು ಪ್ರೇರಣೆ : ಕೆ.ಪಿ. ಶೆಣೈ

Date:

ಕಾರಂತರು ಪ್ರಕೃತಿಯ ಬಗ್ಗೆ ಅಪಾರ ಪ್ರೀತಿ ಹೊಂದಿದವರು. ಸಮಾಜದಲ್ಲಿ ಪ್ರತಿ ಹಂತದಲ್ಲೂ ಇರುವ ಕೊರತೆಗಳನ್ನು ಗುರುತಿಸಿ, ಅವುಗಳಲ್ಲಿ ಸುಧಾರಣೆ ತರುವ ಮೂಲಕ ಕೇವಲ ಸಾಹಿತ್ಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೆ, ಉತ್ತಮ ಸಮಾಜ ನಿರ್ಮಾಣದಲ್ಲಿ ತಮ್ಮದೇ ಆದ ಕೊಡುಗೆ ನೀಡಿದವರು. ಕಾರಂತರು ಇಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಿದ್ದಾರೆ ಎಂದು ಕಾರ್ಕಳದ ಎಸ್.ವಿ. ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಪಿ. ಶೆಣೈ ಹೇಳಿದರು.

- Advertisement -

ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ವೆಂಕಟರಮಣ ಮಹಿಳಾ ಕಾಲೇಜು, ಕಾರ್ಕಳದಲ್ಲಿ ನಡೆದ ‘ಅರಿವಿನ ಬೆಳಕು ಉಪನ್ಯಾಸ-19’ ಹಾಗೂ ಕಾರಂತ ಕಥನ ರಂಗಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಏಕವ್ಯಕ್ತಿಯಾಗಿ ಬೃಹತ್ ವಿಶ್ವಕೋಶವನ್ನು ರಚಿಸಿದ ಕಾರಂತರು ತಮ್ಮ ಜೀವನದ ಉದ್ದೇಶವನ್ನು ಸ್ಪಷ್ಟವಾಗಿ ಅರಿತವರಾಗಿದ್ದರು. ಇಂದಿನ ಯುವ ಪೀಳಿಗೆ ಅವರ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು, ಕಲೆ, ಸಾಹಿತ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ ಕಾರಂತರ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವುದು ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ ಎಂದರು.

ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕ ರಾಮಾಂಜಿ ಅವರು ‘ಕಾರಂತರ ಕೃತಿಗಳಲ್ಲಿ ಮಾನವೀಯ ಮೌಲ್ಯಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲೆ ಪ್ರೊ. ಗೀತಾ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಸೀತಾರಾಮ ನಾಯಕ್ ಉಪಸ್ಥಿತರಿದ್ದರು.

ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಸಹನಾ ನಾಯಕ್ ನಿರೂಪಿಸಿದರು. ನಿರೀಕ್ಷಾ ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಕಾರ್ಕಳದ ಕರಾವಳಿ ರಂಗಾಯಣದ ರೆಪರ್ಟರಿ ತಂಡದಿಂದ ಕಾರಂತ ಕಥನ ನಾಟಕ ಪ್ರದರ್ಶನಗೊಂಡಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಾರಿಗೆ ಇಲಾಖೆಯ ಆನ್‌ಲೈನ್ ಸೇವೆ ಪಡೆಯಲು ಮಧ್ಯವರ್ತಿಗಳು ಬೇಕಿಲ್ಲ

ಸಾರಿಗೆ ಇಲಾಖೆಯ ಪ್ರಮುಖ ಸೇವೆಗಳನ್ನು ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳ ನೆರವಿಲ್ಲದೆ ನೇರವಾಗಿ...

ಶಿವಮೊಗ್ಗ | ಕಾರಾಗೃಹದ ಆವರಣಕ್ಕೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನ: ಓರ್ವ ಆರೋಪಿಯ ಬಂಧನ

ಶಿವಮೊಗ್ಗದ ಸೋಗಾನೆ ಕೇಂದ್ರ ಕಾರಾಗೃಹದ ಆವರಣಕ್ಕೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನಿಸಿದ...

ಶಿವಮೊಗ್ಗ | ಅಧಿಕ ಲಾಭದ ಆಮಿಷವೊಡ್ಡಿ 11 ಕೋಟಿ ವಂಚಿಸಿದ ದಂಪತಿ!

ಶಿವಮೊಗ್ಗ ನಗರದಲ್ಲಿ ಅಧಿಕ ಲಾಭದ ಆಸೆ ತೋರಿಸಿ, ವಿದೇಶಿ ಕಂಪನಿಯೊಂದಿಗೆ ಒಪ್ಪಂದವಿರುವುದಾಗಿ...

ಬಾಗಲಕೋಟೆ | ಕಬ್ಬು ಬೆಳೆಗಾರರ ಸಭೆ ವಿವಾದ: ರೂ.25 ಲಕ್ಷ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ಶಾಸಕ ಟಿ ಪಾಟೀಲ

ಬೆಳಗಾವಿ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅಧ್ಯಕ್ಷತೆಯಲ್ಲಿ ನಡೆದ ಕಬ್ಬು ಬೆಳೆಗಾರರ...