ಉಡುಪಿ | ಕಾರ್ಕಳ ಪುರಸಭೆ ನಿರ್ಲಕ್ಷ್ಯಕ್ಕೆ ಮಳೆ ನೀರಲ್ಲೇ ನೆನೆದು ಪ್ರತಿಭಟನೆ

Date:

ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆ ಕಟ್ಟಡದ ಮೇಲ್ಚಾವಣಿಯಿಂದ ಮಳೆನೀರು ಸರಿಯಾಗಿ ಹರಿದು ಹೋಗುವ ವ್ಯವಸ್ಥೆ ಹಾಳಾಗಿರುವ ಪರಿಣಾಮ ಕಳೆದ ಎರಡು ವರ್ಷಗಳಿಂದ ನೀರು ಜಲಪಾತದಂತೆ ರಸ್ತೆಗೆ ಧುಮ್ಮಿಕ್ಕುತ್ತಿದ್ದು, ಸಾರ್ವಜನಿಕರು ಹಾಗೂ ಅಂಗಡಿ ಮಾಲಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

- Advertisement -

ಸಮಸ್ಯೆಯನ್ನು ಹಲವು ಬಾರಿ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪುರಸಭೆಯ ಮಾಜಿ ಸದಸ್ಯ ಪ್ರಕಾಶ್‌ ರಾವ್ ಸೋಮವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಪುರಸಭೆ ಕಟ್ಟಡದಿಂದ ಜಲಪಾತದಂತೆ ಹರಿಯುತ್ತಿದ್ದ ಮಳೆನೀರಿನಡಿ ನಿಂತು ಸ್ನಾನ ಮಾಡುವ ಮೂಲಕ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರ ಮೂಲಭೂತ ಸಮಸ್ಯೆಗಳ ಬಗ್ಗೆ ಪುರಸಭೆ ಆಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ಮಳೆನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ವ್ಯವಸ್ಥೆ ಕಲ್ಪಿಸಿ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬೇಕು. ಇಲ್ಲವಾದರೆ ಜಿಲ್ಲಾಡಳಿತ ಹಾಗೂ ಸಂಬಂಧಿತ ಮೇಲಧಿಕಾರಿಗಳಿಗೆ ದೂರು ಸಲ್ಲಿಸಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆ ನಡೆದ ಸ್ಥಳದಲ್ಲಿ ಕೆಲಕಾಲ ಕುತೂಹಲದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಕೂಡ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಪುರಸಭೆ ಅಧಿಕಾರಿಗಳನ್ನು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...

ಕೋಲಾರ | ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ಕದಸಂಸ ಪ್ರತಿಭಟನೆ

ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...