ಉಡುಪಿ | ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರ ಪ್ರತಿಭಟನೆ; ಕಲ್ಲೊಟ್ಟೆ–ಬಂಡಿಮಠ ರಸ್ತೆ ದುರಸ್ತಿಗೆ ಆಗ್ರಹ

Date:

ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರವೇ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾರ್ವಜನಿಕರು ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ–ಬಂಡಿಮಠ ರಸ್ತೆಯಲ್ಲಿ ನಡೆದಿದೆ.

- Advertisement -

ಕಾರ್ಕಳ ಮಾರ್ಕೆಟ್ ರಸ್ತೆಯಿಂದ ಪೆರ್ವಾಜೆ, ಕಲ್ಲೊಟ್ಟೆ ಮೂಲಕ ಬಂಡಿಮಠಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನಗಳಷ್ಟೇ ಅಲ್ಲದೆ ಪಾದಚಾರಿಗಳ ಸಂಚಾರಕ್ಕೂ ತೀವ್ರ ತೊಂದರೆ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾರ್ಕಳದಿಂದ ಉಡುಪಿ ಹಾಗೂ ಹೆಬ್ರಿ ಕಡೆಗೆ ಸಂಚರಿಸುವ ಬಸ್‌ಗಳಿಗೆ ಈ ರಸ್ತೆ ಪ್ರಮುಖ ಸಂಪರ್ಕ ಮಾರ್ಗವಾಗಿದೆ. ಆದರೆ ರಸ್ತೆ ತುಂಬಾ ಆಳವಾದ ಗುಂಡಿಗಳು ನಿರ್ಮಾಣವಾಗಿರುವುದರಿಂದ ಭಾರೀ ವಾಹನಗಳು ಕಷ್ಟಪಟ್ಟು ಸಂಚರಿಸುತ್ತಿದ್ದು, ಲಘು ವಾಹನಗಳು, ತ್ರಿಚಕ್ರ ವಾಹನಗಳು ಹಾಗೂ ದ್ವಿಚಕ್ರ ವಾಹನಗಳ ಸಂಚಾರ ಬಹುತೇಕ ಅಸಾಧ್ಯವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸುಮಾರು ಒಂದು ವರ್ಷದಿಂದ ಅಮೃತ್ ಯೋಜನೆಯಡಿ ಈ ರಸ್ತೆಯಲ್ಲಿ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಮುಖ್ಯ ಕೊಳವೆ ಅಳವಡಿಕೆಗಾಗಿ ರಸ್ತೆ ಅಗೆದು ಬಳಿಕ ಮಣ್ಣು ಮುಚ್ಚಲಾಗಿದೆ. ಆದರೆ ಕಾಮಗಾರಿ ಸಮರ್ಪಕವಾಗಿ ಪೂರ್ಣಗೊಳ್ಳದ ಕಾರಣ ರಸ್ತೆ ಅಲ್ಲಲ್ಲಿ ಕುಸಿದು ಗುಂಡಿಗಳು ಉಂಟಾಗಿವೆ. ಅಳವಡಿಸಿರುವ ಪೈಪ್‌ಲೈನ್‌ಗಳು ಪದೇ ಪದೇ ಸೋರಿಕೆಯಾಗುತ್ತಿರುವುದರಿಂದ ಮರು ದುರಸ್ತಿ ಕಾಮಗಾರಿ ನಿರಂತರವಾಗಿ ನಡೆಯುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Advertisements

ಇದಲ್ಲದೆ ರಸ್ತೆ ಬದಿಯ ಚರಂಡಿಯ ಮೋರಿಯನ್ನೂ ಅಗೆದು ಬಿಟ್ಟಿರುವುದರಿಂದ ಮಳೆ ನೀರು ರಸ್ತೆಯಲ್ಲೇ ಹರಿದು ರಸ್ತೆ ಮತ್ತಷ್ಟು ಹಾಳಾಗಿದೆ. ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಮೃತ್ ಯೋಜನೆಯ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಹಲವು ಬಾರಿ ಬಂದಿದ್ದರೂ ಪುರಸಭೆ ಹಾಗೂ ಸಂಬಂಧಿತ ಅಧಿಕಾರಿಗಳು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು, ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ವಿನೂತನ ಪ್ರತಿಭಟನೆ ನಡೆಸಿದರು.

ಈ ರಸ್ತೆಯಲ್ಲಿ ಈಗಾಗಲೇ ಹಲವು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಗಳು ನಡೆದಿವೆ. ಇಷ್ಟಾದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...