ಉಡುಪಿ | ಕಸ್ತೂರಿ ರಂಗನ್ ವರದಿ ಜಾರಿ ಪ್ರಕಟ ಸಭೆ: ಅಧಿಕಾರಿಗಳ ವಿರುದ್ಧ ವಿಕಾಸ್ ಹೆಗ್ಡೆ ಅಸಮಾಧಾನ

Date:

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಜಾರಿಯಾಗಲಿರುವ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವಾಲಯ 7 ನೇ ಕರಡು ಅಧಿಸೂಚನೆ ಪ್ರಕಟಿಸಿರುವಾಗ ಇದರ ಬಗ್ಗೆ ಸಂಸದರು, ಶಾಸಕರು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಸಭೆ ಕೇವಲ ಕಾಟಾಚಾರದ ಸಭೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯು ಪಿ ಎ ಸರ್ಕಾರ ಇರುವಾಗ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಪರಿಸರ ತಜ್ಞ ಮಾಧವ್ ಗಾಡ್ಗಿಲ್ ರವರ ನೇತೃತ್ವದ ಒಂದು ಸಮಿತಿ ರಚನೆ ಮಾಡಿ ಅವರಿಂದ ಬಂದ ವರದಿ ಅತ್ಯಂತ ಜನವಿರೋಧಿಯಾಗಿತ್ತು ಎನ್ನುವ ಕಾರಣಕ್ಕೆ ಅದನ್ನು ಕೈಬಿಟ್ಟು ಪರಿಸರ ತಜ್ಞ ಕಸ್ತೂರಿ ರಂಗನ್ ರವರ ನೇತೃತ್ವದ ಸಮಿತಿ ರಚನೆ ಮಾಡಿ ವರದಿ ಪಡೆದು ಅದು ಈಗ ಜಾರಿ ಹಂತದಲ್ಲಿದೆ. ಆದರೆ ಕಸ್ತೂರಿ ರಂಗನ್ ವರದಿಯಲ್ಲಿ ಕೂಡ ಪಶ್ಚಿಮ ಘಟ್ಟ ಪ್ರದೇಶದ ತಪ್ಪಲಿನ ವಾಸಿಗಳಿಗೆ ಜನವಿರೋಧಿ ಅಂಶಗಳು ಇವೆ ಮತ್ತು ಅನಗತ್ಯವಾಗಿ ಅದೆಷ್ಟೋ ಗ್ರಾಮಗಳನ್ನು ಈ ವರದಿಯಲ್ಲಿ ಸೇರ್ಪಡೆಗೊಳಿಸಲಾಗಿದೆ ಹಾಗೂ ಈ ವರದಿ ಜಾರಿಗೆ ಭೌತಿಕ ಸಮೀಕ್ಷೆ ಮಾಡದೆ ಅಧಿಕಾರಿಗಳು ಹವಾನಿಯಂತ್ರಿತ ಕಚೇರಿಯಲ್ಲಿ ಕುಳಿತು ವೈಮಾನಿಕ ಸಮೀಕ್ಷೆ ಮಾಡಿರುವುದರಿಂದ ಪುನಃ ಭೌತಿಕ ಸಮೀಕ್ಷೆ ಮಾಡಬೇಕು ಎನ್ನುವ ಆಗ್ರಹ ಪ್ರಾರಂಭದಿಂದ ಕೇಳಿಬಂದರೂ ಸಹ ಇಲ್ಲಿಯ ತನಕ ಇದು ಕಾರ್ಯರೂಪಕ್ಕೆ ಬರದೇ ಇರಲು ಇಲ್ಲಿಯ ಸಂಸದರ ಹಾಗೂ ಶಾಸಕರುಗಳ ನಿಷ್ಕ್ರಿಯತೆಯೆ ಕಾರಣ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಸಂಬಂಧಪಟ್ಟ ಜನಪ್ರತಿನಿದಿನಗಳು ಅಧಿಕಾರಿಗಳ, ರೈತ ಸಂಘಟನೆಗಳ ಕಾಟಚಾರದ ಸಭೆ ಮಾಡಿ, ಪತ್ರಿಕೆಗಳಿಗೆ ಹೇಳಿಕೆ ಕೊಟ್ಟು ಕೈತೊಳೆದು ಕೊಳ್ಳುತ್ತಿದ್ದಾರೆ ಬಿಟ್ಟರೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಂಬಂಧ ಪಟ್ಟ ಸಚಿವರನ್ನು ಹಾಗೂ ಅಧಿಕಾರಿಗಳನ್ನು ಸಂಬಂಧಪಟ್ಟ ಜಿಲ್ಲೆಗಳಿಗೆ ಆಹ್ವಾನ ಮಾಡಿ ಸಾಧಕ ಬಾಧಕಗಳ ಕುರಿತು ಸಭೆಯನ್ನು ಇಲ್ಲಿಯ ತನಕ ನಡೆಸದೆ ಇರುವುದು ಅವರು ಪ್ರತಿನಿಧಿಸುವ ಜನರ ಬಗೆಗಿನ ನಿರ್ಲಕ್ಷ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಜ್ಯೂನಿಯರ್ಸ್‌ ಮೇಲೆ ಕ್ರೂರ ರ‍್ಯಾಂಗಿಂಗ್; 9 ಮಂದಿ ವಿರುದ್ಧ ಎಫ್‌ಐಆರ್

ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ಬಿಬಿಎ ...

ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....

ಧಾರವಾಡ | ಸೆ.27ಕ್ಕೆ ಭಾರತಿ ನಗರದಲ್ಲಿ ಉದ್ಯಾನವನ ಉದ್ಘಾಟನೆ

ಭಾರತಿ ನಗರ ನಿವಾಸಿಗಳ ಅಭಿವೃದ್ಧಿ ಸಂಘವು ರೋಟರಿ ಕ್ಲಬ್​ ಆಫ್​ ಧಾರವಾಡ...