ಉಡುಪಿ | ಮಕ್ಕಳ ಶಿಕ್ಷಣದೊಂದಿಗೆ ಅವರ ಭವಿಷ್ಯದ ಬಗ್ಗೆಯೂ ಪೋಷಕರು ಕಾಳಜಿ ವಹಿಸಬೇಕು: ಗುರ್ಮೆ ಸುರೇಶ್ ಶೆಟ್ಟಿ

Date:

ಕರ್ನಾಟಕ ಪಬ್ಲಿಕ್ ಸ್ಕೂಲ್, ಪಡುಬಿದ್ರಿಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಇಂದು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸುವ ಮೂಲಕ ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ಸಾಧನೆಯನ್ನು ಮೆರೆದಿದೆ ಎಂದು ಹೇಳಿದರು.

- Advertisement -

ಇಂದಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಮಕ್ಕಳು ವಿವಿಧ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಆದ್ದರಿಂದ ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಅವರ ಬೆಳವಣಿಗೆ ಮತ್ತು ಭವಿಷ್ಯದ ಬಗ್ಗೆ ಜಾಗೃತರಾಗಿರಬೇಕು ಎಂದು ಅವರು ಸಲಹೆ ನೀಡಿದರು. ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿ ಅವರನ್ನು ಸಮಾಜದಲ್ಲಿ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸುವುದು ಪೋಷಕರು ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2026 06 01 at 12.33.42 PM

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವಸಂತ್, ಹೇಮಚಂದ್ರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ಕೃಷ್ಣ ಬಂಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಶಾಲಾ ಮುಖ್ಯ ಶಿಕ್ಷಕಿ ಸುಮಾ, ಸಹ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...