ಉಡುಪಿ | ಮಜೂರಿನಲ್ಲಿ ಪ್ರಜಾಸೇವಾ ಆಂದೋಲನ: ಒಂದೇ ದಿನದಲ್ಲಿ 76 ಅರ್ಜಿಗಳ ಸ್ವೀಕಾರ

Date:

ಪ್ರಜಾಸೇವೆಯೇ ಪರಮಧರ್ಮ. ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ದೊರಕುವ ಅಪೂರ್ವ ಅವಕಾಶವಾಗಿದ್ದು, ಪ್ರಜೆಗಳ ಸೇವೆಯನ್ನು ಪರಮಾತ್ಮನ ಸೇವೆ ಎಂಬ ಭಾವನೆಯಿಂದ ಕೆಲಸ ಮಾಡಿದಾಗ ಪುಣ್ಯಪ್ರಾಪ್ತಿಯಾಗುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

- Advertisement -

ಮಜೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪ್ರಜಾಸೇವಾ ಇಲಾಖೆ ಹಾಗೂ ತಾಲೂಕು ಆಡಳಿತ, ಕಾಪು ಇವರ ಸಹಯೋಗದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸರ್ಕಾರ ಮತ್ತು ಜನರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾರೆ. ಧನಾತ್ಮಕ ಚಿಂತನೆಯೊಂದಿಗೆ ಜನರ ಒಳಿತಿಗಾಗಿ ಕೆಲಸ ಮಾಡಬೇಕು. ಕಡು ಕಷ್ಟದಲ್ಲಿರುವ ಜನರು ತಮ್ಮ ಅಹವಾಲುಗಳನ್ನು ಹೊತ್ತುಕೊಂಡು ಬಂದಾಗ ಅವರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸದೆ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿದ್ದಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಿ ಜನಪರವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

ಕಾಪು ತಾಲೂಕಿನಲ್ಲಿ ನಡೆದ ಪ್ರಥಮ ಪ್ರಜಾಸೇವಾ ಆಂದೋಲನ ಸಭೆ ಇದಾಗಿದ್ದು, ಕಾರ್ಯಕ್ರಮವನ್ನು ಅಭೂತಪೂರ್ವವಾಗಿ ಸಂಘಟಿಸಿದ ತಾಲೂಕು ಆಡಳಿತವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪ್ರಶಂಸಿಸಿದರು. ಅಧಿಕಾರಿಗಳಿಗೆ ಯಾವುದೇ ರೀತಿಯ ತೊಂದರೆ ಎದುರಾದರೂ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.

WhatsApp Image 2026 09 12 at 6.34.40 PM

ಜನರ ಮನೆ ಬಾಗಿಲಿಗೆ ಸರ್ಕಾರ

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ಶಾಸಕರ ಮತ್ತು ಎಲ್ಲ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.

ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲು ಮತ್ತು ಕುಂದುಕೊರತೆಗಳಿಗೆ ತ್ವರಿತ ಹಾಗೂ ಗುಣಾತ್ಮಕವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಅದೇ ದಿನ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು. ಯಾವುದೇ ಕಾರಣಕ್ಕೂ ಅದೇ ದಿನ ಸಮಸ್ಯೆ ಪರಿಹರಿಸಲು ಸಾಧ್ಯವಾಗದಿದ್ದಲ್ಲಿ, 21 ದಿನಗಳೊಳಗಾಗಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಾರ್ವಜನಿಕರು ಪ್ರಜಾಸೇವಾ ಆಂದೋಲನ ಸಭೆಗಳ ಜೊತೆಗೆ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿಯೂ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಸಾರ್ವಜನಿಕರಿಂದ ಸ್ವೀಕರಿಸಲಾದ ಅರ್ಜಿಗಳನ್ನು ಪ್ರತಿ ಬುಧವಾರ ಪರಿಶೀಲಿಸಿ, ಶೀಘ್ರವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

‘ಸೇವೆಯೇ ಧರ್ಮ’ ಎಂಬ ಮನೋಭಾವದಿಂದ ಕೆಲಸ ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸೋಣ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಕರೆ ನೀಡಿದರು.

1012639579

76 ಅರ್ಜಿಗಳ ಸಲ್ಲಿಕೆ

ಮಜೂರಿನಲ್ಲಿ ನಡೆದ ಇಂದಿನ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 76 ಅರ್ಜಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ವಿವಿಧ ಸಮಸ್ಯೆ, ಅಹವಾಲು ಹಾಗೂ ಬೇಡಿಕೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಅಧಿಕಾರಿಗಳು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಪು ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ತಹಶೀಲ್ದಾರ್ ಅನಂತ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್ ಸ್ವಾಗತಿಸಿದರು. ಕಾಪು ಪುರಸಭೆ ಮುಖ್ಯ ಅಧಿಕಾರಿ ನೀಲಕಂಠ ಮೇಸ್ತ ವಂದಿಸಿದರು. ಪಡು ಕಾಪು ಗ್ರಾಮ ಆಡಳಿತ ಅಧಿಕಾರಿ ಶ್ರೀನಿವಾಸ ಆರ್.ಟಿ. ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...