ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

Date:

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ ಕಾವ್ಯ ಎಂಬ ಮಹಿಳೆ ತನ್ನ ಮೂರು ವರ್ಷದ ಪುತ್ರ ಶಿವಾಂಶ್‌ನೊಂದಿಗೆ ನಾಪತ್ತೆಯಾಗಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಅಕ್ಟೋಬರ್ 23ರಂದು ಬೆಳಿಗ್ಗೆ ಸಂಬಂಧಿಕರು ಕಾವ್ಯ ಮತ್ತು ಮಗುವನ್ನು ಮೆಣಸೆಯಲ್ಲಿರುವ ಪತಿ ಯತೀಶ್ವರ ಅವರ ಮನೆಗೆ ಬಿಡಲು ಉಡುಪಿಗೆ ಕರೆತಂದಿದ್ದರು. ಬೆಳಿಗ್ಗೆ 8.30ರ ಸುಮಾರಿಗೆ ಉಡುಪಿ ತಲುಪಿದ ಅವರು, ಆಟೋ ರಿಕ್ಷಾದಲ್ಲಿ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದು ಲಗೇಜ್ ಇಳಿಸಿ ನಿಂತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ವೇಳೆ ಕಾವ್ಯ ತಿಂಡಿ ಅಥವಾ ಚಹಾ ಬೇಡವೆಂದು ತಿಳಿಸಿ, ಸಂಬಂಧಿಕರು ತಿಂಡಿ ಸೇವಿಸಿ ಬರುವಂತೆ ಹೇಳಿದ್ದರು ಎನ್ನಲಾಗಿದೆ. ಅದರಂತೆ ಸಂಬಂಧಿಕರು ಹೋಟೆಲ್‌ಗೆ ತೆರಳಿ ಬೆಳಿಗ್ಗೆ 9.15ರ ಸುಮಾರಿಗೆ ವಾಪಸ್ ಬಂದಾಗ ಕಾವ್ಯ ಮತ್ತು ಮಗು ನಾಪತ್ತೆಯಾಗಿದ್ದರು. ಸುತ್ತಮುತ್ತ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.

Advertisements
1013271375

ನಾಪತ್ತೆಯಾದ ಮಹಿಳೆಯ ಚಹರೆ: ಕಾವ್ಯ ಅವರು ಸುಮಾರು 4 ಅಡಿ 10 ಇಂಚು ಎತ್ತರವಿದ್ದು, ಎಣ್ಣೆಕಪ್ಪು ಮೈಬಣ್ಣ, ಕಪ್ಪು ಕೂದಲು ಹಾಗೂ ಸಾಧಾರಣ ಶರೀರ ಹೊಂದಿದ್ದಾರೆ. ನಾಪತ್ತೆಯಾದಾಗ ಹಳದಿ ಬಣ್ಣದ ಹೂಗಳಿರುವ ಟಾಪ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ಹಿಂದಿ, ತುಳು ಮತ್ತು ಮರಾಠಿ ಭಾಷೆ ಮಾತನಾಡುತ್ತಾರೆ.

ಕಾವ್ಯ ಮತ್ತು ಮಗು ಶಿವಾಂಶ್ ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಕೆಳಗಿನ ದೂರವಾಣಿ ಸಂಖ್ಯೆಗಳ ಮೂಲಕ ಪೊಲೀಸರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

  • ಉಡುಪಿ ನಗರ ಪೊಲೀಸ್ ಠಾಣೆ: 0820-2520444
  • ಉಡುಪಿ ಪೊಲೀಸ್ ಕಂಟ್ರೋಲ್ ರೂಂ: 0820-2526444
  • ಪೊಲೀಸ್ ನಿರೀಕ್ಷಕರು: 9480805408
  • ಪೊಲೀಸ್ ಉಪನಿರೀಕ್ಷಕರು: 9080805445

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆ ಮತ್ತು ಮಗುವಿನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...

ರಾಯಚೂರು | ಉದ್ರಿ ಕೊಡಲಿಲ್ಲವೆಂದು ಅಂಗಡಿ ಮಾಲೀಕನ ಬರ್ಬರ ಕೊಲೆ

ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ...

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...