ಉಡುಪಿ | ಕಿನ್ನಿಮೂಲ್ಕಿ ಬಳಿ ಭೀಕರ ಅಪಘಾತ: ಲಾರಿಗೆ ಗೂಡ್ಸ್ ಟೆಂಪೋ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು

Date:

ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ರವಿವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೂಡ್ಸ್ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

- Advertisement -

ಸರಕು ಸಾಗಾಟ ಲಾರಿಗೆ ಗೂಡ್ಸ್ ಟೆಂಪೋ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಮೃತರನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಪಿ. (29) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಟೆಂಪೋ ಮುಂಭಾಗ ಸಂಪೂರ್ಣ ಜಜ್ಜಿಹೋಗಿದ್ದು, ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು.

ಮೃತದೇಹವನ್ನು ಹೊರತೆಗೆಯಲು ಸಾಕಷ್ಟು ಸಮಯ ಹಾಗೂ ಶ್ರಮವಹಿಸಬೇಕಾಯಿತು. ಸಮಾಜಸೇವಕ ನಿತ್ಯಾನಂದ ಒಳಕಾಡು, ಸಂಚಾರಿ ಠಾಣೆ ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಹೊರತೆಗೆದು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ರವಾನಿಸಲಾಯಿತು.

ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...