ಉಡುಪಿ | ಉದ್ಯಾವರದಲ್ಲಿ ಏ.26ರಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

Date:

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮ ಏಪ್ರಿಲ್‌ 26ರ ರವಿವಾರ ಸಂಜೆ 5 ಗಂಟೆಗೆ ಉಡುಪಿ ಸಮೀಪದ ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ತಿಳಿಸಿದ್ದಾರೆ.

- Advertisement -

ಉಡುಪಿಯ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಗೌರವ ಪ್ರಶಸ್ತಿಯನ್ನು ಕೊಂಕಣಿ ಸಾಹಿತ್ಯ ವಿಭಾಗದಲ್ಲಿ ರೊನ್ ರೊಚ್ ಕಾಸ್ಸಿಯಾ, ಕಲಾ ವಿಭಾಗದಲ್ಲಿ ರಾಮದಾಸ ದತ್ತಾತ್ರೇಯ ಗುಲ್ವಾಡಿ ಹಾಗೂ ಕೊಂಕಣಿ ಜನಪದ ವಿಭಾಗದಲ್ಲಿ ಸೈರು (ಮುರಳೀಧರ) ಪುತ್ತು ನಾಯ್ಕ ಅವರಿಗೆ ಪ್ರದಾನಿಸಲಾಗುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...
Screenshot 2026 04 24 210103

2025ನೇ ಸಾಲಿನ ಪುಸ್ತಕ ಪುರಸ್ಕಾರಗಳನ್ನು ಕೊಂಕಣಿ ಕವನ ವಿಭಾಗದಲ್ಲಿ ಆಂಡ್ರ್ಯೂ ಎಲ್. ಡಿಕುನ್ಹಾ ಅವರ ‘ಉಜ್ವಾಡಾಚ್ಯೆ ವೆಂಗೆಂತ್’, ಲೇಖನ ವಿಭಾಗದಲ್ಲಿ ರೋಶನ್ ಮೆಲ್ಕಿ ಸಿಕ್ವೇರಾ ಅವರ ‘ಕೊಂಕ್ಣಿ ಸರ್ಕಸ್’ ಹಾಗೂ ಸಣ್ಣಕಥೆ ವಿಭಾಗದಲ್ಲಿ ರಿಚರ್ಡ್ ಆಲ್ವಾರಿಸ್ ಅವರ ‘ಪಿತುರಿ’ ಕೃತಿಗಳಿಗೆ ಲಭಿಸಿವೆ.

ಕಾರ್ಯಕ್ರಮವನ್ನು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್. ತಂಗಡಗಿ ಉದ್ಘಾಟಿಸಲಿದ್ದಾರೆ. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಉಡುಪಿ ಕೆಥೊಲಿಕ್ ಧರ್ಮಪ್ರಾಂತದ ಪ್ರೇಷಿತ ಆಡಳಿತಾಧಿಕಾರಿ ಜೆರಾಲ್ಡ್ ಐಸಾಕ್ ಲೋಬೊ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಖಾರ್ವಿ, ಸಿದ್ಧಿ, ಕುಡುಬಿ ಸಮುದಾಯಗಳ ಸಾಂಸ್ಕೃತಿಕ ನೃತ್ಯಗಳು, ಬ್ರಾಸ್ ಬ್ಯಾಂಡ್ ಹಾಗೂ ಕೊಂಕಣಿ ಸಂಗೀತ ರಸಮಂಜರಿ ಕಾರ್ಯಕ್ರಮಗಳು ನಡೆಯಲಿವೆ.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯ ನವೀನ್ ಲೋಬೊ, ಪರಿಚಯ ಪಾಂಬೂರ್ ಸಂಘಟನೆಯ ಪ್ರಕಾಶ್ ನೊರೊನ್ಹಾ, ನಿರಂತರ್ ಉದ್ಯಾವರ ಸಂಘಟನೆಯ ಸ್ಟೀವನ್ ಕುಲಾಸೊ, ಉದ್ಯಾವರ ಚರ್ಚ್‌ನ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ ಹಾಗೂ ಕಾರ್ಯದರ್ಶಿ ವಿಲ್ಪ್ರೆಡ್ ಡಿಸೋಜ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...