ಉಡುಪಿ ಜಿಲ್ಲಾಧಿಕಾರಿಗಳೊಂದಿಗೆ ಧರಣಿ ನಿರತ ನಿಯೋಗದ ಮಹತ್ವದ ಮಾತುಕತೆ

Date:

ಕುಂದಾಪುರ ತಾಲೂಕಿನ ಆಲೂರು ಹಾಗೂ ಹರ್ಕೂರು ಗ್ರಾಮದ ಭೂಹೀನ ಕೊರಗ (ಪರಿಶಿಷ್ಟ ಪಂಗಡ) ಕುಟುಂಬಗಳಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಇಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ರಜತಾದ್ರಿ, ಮಣಿಪಾಲದಲ್ಲಿ ಶಾಂತಿಯುತ ಧರಣಿ ಸತ್ಯಾಗ್ರಹ ಹಾಗೂ ಹಕ್ಕೊತ್ತಾಯ ಕಾರ್ಯಕ್ರಮ ನಡೆಯಿತು.

- Advertisement -

ಧರಣಿಯಲ್ಲಿ ಕೊರಗ ಸಮುದಾಯದ ನೂರಾರು ಸದಸ್ಯರು, ವಿವಿಧ ಜನಪರ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ, ಸುಮಾರು ಹತ್ತು ವರ್ಷಗಳಿಂದ ಬಾಕಿ ಉಳಿದಿರುವ ಭೂಮಿ ಮಂಜೂರಾತಿ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಧರಣಿ ನಡೆಯುತ್ತಿರುವ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಧರಣಿ ನಿರತ ನಿಯೋಗವನ್ನು ತಮ್ಮ ಕಚೇರಿಗೆ ಆಹ್ವಾನಿಸಿ, ಪ್ರಕರಣದ ಕುರಿತು ವಿಸ್ತೃತ ಚರ್ಚೆ ನಡೆಸಿದರು. ಸಂಘಟನೆಯಿಂದ ಸಲ್ಲಿಸಲಾದ ಹಕ್ಕೊತ್ತಾಯ ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಆಲೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ ಪ್ರಕರಣದ ಕುರಿತು ತನಗೆ ಸಂಪೂರ್ಣ ಮಾಹಿತಿ ಇದೆ. ಸಂಘಟನೆಯು ಈ ಹಿಂದೆ ಸಲ್ಲಿಸಿರುವ ದಾಖಲೆಗಳು ಹಾಗೂ ವಿವಿಧ ಇಲಾಖೆಗಳ ವರದಿಗಳು ಜಿಲ್ಲಾಡಳಿತದ ಬಳಿ ಲಭ್ಯವಿದ್ದು, ಸಂಬಂಧಿಸಿದ ಎಲ್ಲಾ ಇಲಾಖೆಗಳ ಸಭೆಯನ್ನು ಶೀಘ್ರದಲ್ಲಿಯೇ ತಮ್ಮ ಅಧ್ಯಕ್ಷತೆಯಲ್ಲಿ ನಡೆಸಿ ಪ್ರಕರಣದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

1011700053

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ, ಆಲೂರು ಗ್ರಾಮದ ಸರ್ವೇ ನಂ.153, 154, 148/3 ಹಾಗೂ 148/4 ಮತ್ತು ಹರ್ಕೂರು ಗ್ರಾಮದ ಸರ್ವೇ ನಂ.144/1, 150/3ರಲ್ಲಿ ಗುರುತಿಸಲಾದ ಒಟ್ಟು 10.67 ಎಕರೆ ಭೂಮಿಯನ್ನು 13 ಭೂಹೀನ ಕೊರಗ ಕುಟುಂಬಗಳಿಗೆ ಕೂಡಲೇ ಮಂಜೂರು ಮಾಡಬೇಕು ಎಂದು ಆಗ್ರಹಿಸಲಾಯಿತು. ಜೊತೆಗೆ, ಹರ್ಕೂರು ಗ್ರಾಮದ ಸರ್ವೇ ನಂ.135ರಲ್ಲಿ 1984-85ರಲ್ಲಿಯೇ ಮಂಜೂರಾಗಿರುವ ಭೂಮಿಯ ಸ್ವಾಧೀನವನ್ನು ಮೂಲ ಫಲಾನುಭವಿಗಳಿಗೆ ತಕ್ಷಣ ಒದಗಿಸುವಂತೆ ಒತ್ತಾಯಿಸಲಾಯಿತು.

ಕರ್ನಾಟಕ ಗೇರು ಅಭಿವೃದ್ಧಿ ನಿಗಮವು ಸಲ್ಲಿಸಿರುವ ಆಧಾರರಹಿತ ಆಕ್ಷೇಪಣೆಯನ್ನು ತಿರಸ್ಕರಿಸಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಎಲ್ಲಾ ಇಲಾಖೆಗಳ ಉನ್ನತ ಮಟ್ಟದ ಸಭೆಯನ್ನು ಶೀಘ್ರದಲ್ಲಿ ನಡೆಸಿ, ಜಿಲ್ಲಾ ಮಟ್ಟದಲ್ಲಿಯೇ ಪ್ರಕರಣವನ್ನು ಅಂತಿಮವಾಗಿ ಇತ್ಯರ್ಥಪಡಿಸಿ ಕೊರಗ ಕುಟುಂಬಗಳಿಗೆ ನ್ಯಾಯ ಒದಗಿಸಬೇಕೆಂದು ಸಂಘಟನೆ ಒತ್ತಾಯಿಸಿತು.

ಜಿಲ್ಲಾಧಿಕಾರಿಗಳಿಂದ ದೊರೆತ ಸಕಾರಾತ್ಮಕ ಭರವಸೆಯನ್ನು ಸಂಘಟನೆ ಸ್ವಾಗತಿಸಿದ್ದು, ಶೀಘ್ರದಲ್ಲೇ ಸಭೆ ನಡೆಸಿ ನ್ಯಾಯಯುತ ನಿರ್ಧಾರ ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದೆ.

ಧರಣಿ ಸತ್ಯಾಗ್ರಹದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕರಾದ ಶ್ರೀಧರ ನಾಡ, ರಾಜ್ಯ ಸಮಿತಿ ಸದಸ್ಯರಾದ ಕೃಷ್ಣ ಇನ್ನಾ ಹಾಗೂ ಗಣೇಶ ಆಲೂರು, ರೇವತಿ ಆಲೂರು, ಕೊರಗ ನಾರ್ಕಳಿ, ಪಡುಬಿದ್ರಿ ಘಟಕದ ಕಾರ್ಯದರ್ಶಿ ತುಳಸಿ, ರೇಷ್ಮಾ ನಾಡ, ಮಾಲತಿ ಆಲೂರು, ಶೇಖರ ನಾರ್ಕಳಿ, ಕೊರಗ ಸಮುದಾಯದ ಸಾಹಿತಿಗಳಾದ ಬಾಬು ಪಾಂಗಾಳ, ಕುಡುಪ ಕೊರಗ, ವಸಂತ ಕೊರಗ (ಉಡುಪಿ), ಕಾರ್ಮಿಕ ಮುಖಂಡರಾದ ಸುರೇಶ್ ಕಲಾಗಾರ್, ಚಂದ್ರಶೇಖರ, ಹೆಚ್. ನರಸಿಂಹ ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಮುಖಂಡರು, ಹಿತೈಷಿಗಳು ಹಾಗೂ ಕೊರಗ ಸಮುದಾಯದ ನೂರಾರು ಸದಸ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...