ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

Date:

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.

- Advertisement -

ಮೃತರನ್ನು ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ (27) ಎಂದು ಗುರುತಿಸಲಾಗಿದೆ. ಅವರು ಉತ್ತಮ ಕ್ರಿಕೆಟ್ ಆಟಗಾರರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಅ. 26ರಂದು ಮುಂಜಾನೆ ಕೋಟ ಜಂಕ್ಷನ್‌ನಲ್ಲಿ ರಸ್ತೆ ದಾಟುತ್ತಿದ್ದ ಗುರುದಾಸ್ ಶೆಣೈ ಅವರಿಗೆ ಉಡುಪಿಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ತೀವ್ರತೆಗೆ ಸೈಕಲ್ ಸವಾರ ಗುರುದಾಸ್ ಶೆಣೈ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪಘಾತದಲ್ಲಿ ಕಾರು ಚಾಲಕ ಪ್ರದೀಪ್ ಕಾಂಚನ್ ಅವರಿಗೂ ಗಂಭೀರ ಗಾಯಗಳಾಗಿದ್ದವು. ಅವರನ್ನು ತಕ್ಷಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಉತ್ತರ ಕನ್ನಡ | ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 11.39 ಲಕ್ಷ ಮತದಾರರು

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ...

ಕೋಲಾರ | ಪ್ರಜಾಪ್ರಭುತ್ವ, ಮತದಾನ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಹೋರಾಟ: ಎಐಸಿಸಿ ವೀಕ್ಷಕಿ ದೀಪ್ತಿ ವರ್ಗೀಸ್

ದೇಶದಲ್ಲಿ 13 ಕೋಟಿಗೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ...

ಕೋಲಾರ | ಮತಗಳ್ಳತನದ ಮೂಲಕ ಅಧಿಕಾರ ಹಿಡಿಯಲು ಬಿಜೆಪಿ ಯತ್ನ: ಅನಿಲ್ ಕುಮಾರ್

ಕೋಲಾರ: ಚುನಾವಣಾ ಆಯೋಗವನ್ನು ಬಳಸಿಕೊಂಡು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟು,...