ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

Date:

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ ಉನ್ನತ ಮಟ್ಟಕ್ಕೆ ಬೆಳೆದು ಸಮಾಜದ ಆಸ್ತಿಯಾಗಿ ಹೊರಹೊಮ್ಮಬೇಕು. ಸಮಾಜ ಕಟ್ಟುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಕರಾವಳಿ ಮೊಗವೀರ ಮಹಾಜನ ಸಂಘದ ಪ್ರಧಾನ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಹೇಳಿದರು.

- Advertisement -

ಶನಿವಾರ ಸಾಲಿಗ್ರಾಮದ ಗುಂಡ್ಮಿಯ ಕರಾವಳಿ ಮೊಗವೀರ ಸಭಾಭವನದಲ್ಲಿ ನಡೆದ ಕರಾವಳಿ ಮೊಗವೀರ ಮಹಾಜನ ಸಂಘ ಕೋಟ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ, ವಿದ್ಯಾರ್ಥಿವೇತನ ವಿತರಣೆ, ಗುರಿಕಾರರಿಗೆ ಗೌರವಧನ ಹಾಗೂ ವೈದ್ಯಕೀಯ ನೆರವು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಕೋಟ ಮೊಗವೀರ ಮಹಾಜನ ಸಂಘವು ಸಮುದಾಯದ ಅಭಿವೃದ್ಧಿ ಹಾಗೂ ಬಡವರ ಕಲ್ಯಾಣಕ್ಕಾಗಿ ಶ್ರಮಿಸುವ ಶಕ್ತಿ ಕೇಂದ್ರವಾಗಿ ರೂಪುಗೊಳ್ಳಬೇಕು. ಶಿಕ್ಷಣ, ಉದ್ಯೋಗ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಮೊಗವೀರ ಸಮುದಾಯದವರು ಮುಂಚೂಣಿಯಲ್ಲಿ ಗುರುತಿಸಿಕೊಳ್ಳಬೇಕು. ಸಮುದಾಯದ ಏಳಿಗೆಯೊಂದಿಗೆ ಸಮಾಜಕ್ಕೂ ತಮ್ಮದೇ ಆದ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ನೂತನ ಅಧ್ಯಕ್ಷ ಶಿವರಾಂ ಕೆ.ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು.

WhatsApp Image 2026 11 14 at 11.00.45 PM 1

ಸಮಾರಂಭದಲ್ಲಿ ಸಮುದಾಯದ ಗುರಿಕಾರರಿಗೆ ಗೌರವಧನ ವಿತರಿಸಲಾಯಿತು. ಅನಾರೋಗ್ಯದಿಂದ ಬಳಲುತ್ತಿರುವ ಹಾಗೂ ಆರ್ಥಿಕವಾಗಿ ಅಶಕ್ತರಾಗಿರುವವರಿಗೆ ವೈದ್ಯಕೀಯ ನೆರವು ಹಸ್ತಾಂತರಿಸಲಾಯಿತು. ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ರ‍್ಯಾಂಕ್ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರನ್ನೂ ಸನ್ಮಾನಿಸಲಾಯಿತು.

ಪದಪ್ರದಾನ ಸಮಾರಂಭದಲ್ಲಿ ನೂತನ ಅಧ್ಯಕ್ಷ ಶಿವರಾಂ ಕೆ.ಎಂ. ಅವರಿಗೆ ಪ್ರಸ್ತುತ ಅಧ್ಯಕ್ಷ ನಾಡೋಜ ಡಾ. ಜಿ. ಶಂಕರ್ ಪುಷ್ಪಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿ ಅಭಿನಂದಿಸಿದರು. ನೂತನ ಕಾರ್ಯದರ್ಶಿ, ಕೋಶಾಧಿಕಾರಿ, ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಗೌರವ ಸಲಹೆಗಾರರನ್ನು ಗೌರವಿಸಲಾಯಿತು.

ಕರಾವಳಿ ಮೊಗವೀರ ಸಭಾಭವನದ ಪಾಕತಜ್ಞ ಶೀನ ಕುಲಾಲ್, ರಮೇಶ್ ಹೇರ್ಳೆ ಹಾಗೂ ಸಭಾಭವನದ ನಿರ್ವಹಣೆಯಲ್ಲಿ ಸೇವೆ ಸಲ್ಲಿಸಿದ ರಾಮ ಬಂಗೇರ ಪಡುಕರೆ ಅವರನ್ನು ಸನ್ಮಾನಿಸಲಾಯಿತು.

ಪ್ರಸ್ತುತ ಅಧ್ಯಕ್ಷ ಆನಂದ್ ಸಿ. ಕುಂದರ್ ಶುಭಹಾರೈಸಿದರು.

WhatsApp Image 2026 11 14 at 11.00.06 PM

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಬಾರ್ಕೂರು ಮೊಗವೀರ ಸಂಯುಕ್ತ ಮಹಾಸಭಾದ ಅಧ್ಯಕ್ಷ ಸತೀಶ್ ಅಮೀನ್, ಬಗ್ವಾಡಿ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷ ಉದಯ ಹಟ್ಟಿಯಂಗಡಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ರವೀಶ್ ಶ್ರೀಯಾನ್, ಕೋಟ ಘಟಕದ ಅಧ್ಯಕ್ಷ ಸತೀಶ್ ತಿಂಗಳಾಯ, ಸಾಲಿಗ್ರಾಮ ಘಟಕದ ಅಧ್ಯಕ್ಷ ಕಿರಣ್ ಕುಂದರ್, ಮನಸ್ಮಿತ ಫೌಂಡೇಶನ್ ಪ್ರವರ್ತಕ ಡಾ. ಪ್ರಕಾಶ್ ಸಿ. ತೋಳಾರ್, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಉದ್ಯಮಿ ಗಣೇಶ್ ಪ್ರಸಾದ್ ಕಾಂಚನ್, ಮಹಾಜನ ಸಂಘದ ಕಾರ್ಯದರ್ಶಿ ಚಂದ್ರ ಬಂಗೇರ, ಕೋಶಾಧಿಕಾರಿ ಸತೀಶ್ ಮರಕಾಲ ಹಾಗೂ ನೂತನ ಕೋಶಾಧಿಕಾರಿ ಜಗನಾಥ ಬಂಗೇರ ಉಪಸ್ಥಿತರಿದ್ದರು.

ಸಂಘದ ರಾಜು ಕರಾವಳಿ ಕಾರ್ಯಕ್ರಮ ನಿರೂಪಿಸಿದರು. ಗುರಿಕಾರರ ಪಟ್ಟಿಯನ್ನು ಕೃಷ್ಣಮೂರ್ತಿ ಮರಕಾಲ ವಾಚಿಸಿದರು. ಮೊಗವೀರ ಯುವ ಸಂಘ ಕೋಟ ಘಟಕದ ಮಾಜಿ ಅಧ್ಯಕ್ಷ ರಂಜೀತ್ ಕುಮಾರ್ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಸುರೇಶ್ ಕೆ. ವಂದಿಸಿದರು. ಕೋಡಿ ರಾಘವೇಂದ್ರ ಕರ್ಕೇರ ಸಹಕರಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ʻಮಾಂಡ್ ಸೊಬಾಣ್ʼ ಗಾಯನ

ಮಂಗಳೂರು ನಗರದ ಪುರಭವನದಲ್ಲಿ ಕಳೆದ ವಾರ ಮಾಂಡ್ ಸೊಭಾಣ್ ನೇತೃತ್ವದಲ್ಲಿ ಆರಂಭಿಸಿದ್ದ...

ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್...

ಚಿಂತಾಮಣಿ | ವೇಶ್ಯಾವಾಟಿಕೆ ಅಡ್ಡಿ ಮೇಲೆ ನಗರ ಠಾಣೆ ಪೊಲೀಸ್ ದಾಳಿ

ಚಿಂತಾಮಣಿ ನಗರದ ಟ್ಯಾಂಕ್ ಬಾಂಡ್ ರಸ್ತೆಯ ಮನೆಯೊಂದರಲ್ಲಿ ಸುಮಾರು ದಿನಗಳಿಂದ ನಡೆಸುತ್ತಿದ್ದ...

ಬಾಗಲಕೋಟೆ |ಮಕ್ಕಳಿಗೆ ಪಠ್ಯದ ಜೊತೆಗೆ ಜೀವನ ಮೌಲ್ಯಗಳ ಸಂಸ್ಕಾರವೂ ಅಗತ್ಯ: ಪ್ರವೀಣ ಗುಂಡಗಾವಿ

ಮಕ್ಕಳಲ್ಲಿ ಉತ್ತಮ ಗುಣ, ಸಂಸ್ಕಾರ ಮತ್ತು ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸುವ...