ಉಡುಪಿ | ಶ್ರೀಕೃಷ್ಣ ಮಠದ ವಸತಿಗೃಹದಲ್ಲಿ ಮುಸ್ಲಿಂ ಯುವತಿಗೆ ವಸತಿ ನಿರಾಕರಣೆ: ಸಿಪಿಐ(ಎಂ) ಖಂಡನೆ

Date:

ಹಿಂದೂ ಕುಟುಂಬದ ಸ್ನೇಹಿತೆಯೊಂದಿಗೆ ಪ್ರವಾಸಕ್ಕಾಗಿ ಉಡುಪಿಗೆ ಬಂದಿದ್ದ ಬಳ್ಳಾರಿಯ ಯುವತಿಯೊಬ್ಬರಿಗೆ ಮುಸ್ಲಿಂ ಧರ್ಮಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕೆ ರಾತ್ರಿ ಉಳಿದುಕೊಳ್ಳಲು ಅನುಮತಿ ನಿರಾಕರಿಸಿದ ಮಠದ ವಸತಿ ಗೃಹದ ಅಧಿಕಾರಿಗಳ ಕೃತ್ಯವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಿಪಿಐ(ಎಂ) ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಧರ್ಮದ ಆಧಾರದ ಮೇಲೆ ಇಂತಹ ವಸತಿ ನಿರಾಕರಣೆಗಳು ಮರುಕಳಿಸದಂತೆ ಜಿಲ್ಲಾಡಳಿತ ಮಠದ ಅಧಿಕಾರಿಗಳಿಗೆ ಸೂಕ್ತ ಎಚ್ಚರಿಕೆ ನೀಡಬೇಕು ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಘಟನೆಯ ವಿವರ: ಬಳ್ಳಾರಿ ಜಿಲ್ಲೆಯ ಮಸ್ಲಿಂ ಯುವತಿ ತನ್ನ ಸ್ನೇಹಿತೆ ಶಕುಂತಲಾ ಮತ್ತು ಅವರ ಕುಟುಂಬದೊಂದಿಗೆ ಪ್ರವಾಸಕ್ಕಾಗಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಕೃಷ್ಣ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಅಕ್ಟೋಬರ್ 3ನೇ ತಾರೀಕಿನ ರಾತ್ರಿ ಉಳಿದುಕೊಳ್ಳಲು ಕೃಷ್ಣ ಮಠದ ವಸತಿ ಗೃಹಕ್ಕೆ ಆಗಮಿಸಿದ್ದರು.‌ ಅಷ್ಟು ಹೊತ್ತಿಗೆ ರಾತ್ರಿ 8 ಗಂಟೆ ಕಳೆದಿತ್ತು. ಎಲ್ಲರ ಆಧಾರ್ ಕಾರ್ಡ್ ಪರಿಶೀಲಿಸಿದ ವಸತಿಗ್ರಹದ ಅಧಿಕಾರಿಗಳು ಮುಸ್ಲಿಂ ಯುವತಿಗೆ ರಾತ್ರಿ ಉಳಿದುಕೊಳ್ಳಲು ಅವಕಾಶ ನೀಡಲಿಲ್ಲ. ಸ್ನೇಹಿತೆ ಶಕುಂತಲಾ ಅವರ ಕುಟುಂಬದ ಹಿರಿಯರು, ಆಕೆ ನಮ್ಮ ಮೊಮ್ಮಗಳು ಇದ್ದಂತೆ, ಅಲ್ಲದೆ ರಾತ್ರಿ ಹೊತ್ತಿನಲ್ಲಿ ಅಪರಿಚಿತ ನಗರದಲ್ಲಿ ಒಬ್ಬಳೇ ಎಲ್ಲಿಗೆ ಹೋಗುವುದು ಎಂದು ಅಂಗಲಾಚಿದರೂ ಕೇಳಲಿಲ್ಲ.

ಹಿಂದೆ ಪೇಜಾವರ ಮಠದ ವಿಶ್ವೇಶ್ವರತೀರ್ಥ ಶ್ರೀಗಳು ತನ್ನ ಕಾರಿನ ಚಾಲಕ ಮುಸ್ಲಿಂ ಧರ್ಮವನ್ನು ಅನುಸರಿಸುವವನಾಗಿದ್ದರೂ, ಅವರನ್ನು ಆದರದಿಂದ ನೋಡುತ್ತಿದ್ದುದು ಮಾತ್ರವಲ್ಲದೆ ಇಫ್ತಾರ್ ಕೂಟವನ್ನೂ ಆಯೋಜಿಸಿದ್ದರು.

ಉಡುಪಿಯ ಕೊಡುಗೈ ದಾನಿಯೆಂದೇ ಹೆಸರು ಹೊಂದಿದ್ದ ಶ್ರೀ ಹಾಜಿ ಅಬ್ದುಲ್ಲಾ ಸಾಹೇಬ್ ಅವರು ಮಠದ ಭಕ್ತರಾಗಿದ್ದು ಮಾತ್ರವಲ್ಲ ದೀಪೋತ್ಸವ ಸಂದರ್ಭದಲ್ಲಿ ತೊಂದರೆಗೆ ಒಳಗಾದ ಮಠಕ್ಕೆ ದೀಪದ ಎಣ್ಣೆ ಒದಗಿಸಿರುವುದನ್ನು ಉಡುಪಿಯ ಜನರು ಇಂದಿಗೂ ನೆನಪಿಸಿಕೊಳ್ಳುತ್ತಾರೆ.

ಇಂತಹ ಸೌಹಾರ್ದ ಪರಂಪರೆ ಇರುವ ಉಡುಪಿಯಲ್ಲಿ ಮತ್ತು ಮಠದಲ್ಲಿ ರಾತ್ರಿ ಹೊತ್ತಿನಲ್ಲಿ ಮುಸ್ಲಿಂ ಯುವತಿಯೊಬ್ಬರಿಗೆ ಉಳಿದುಕೊಳ್ಳಲು ಅವಕಾಶ ನೀಡದೆ ಇರುವುದು ಅಕ್ಷಮ್ಯ ಅಪರಾಧ.

ಇಂತಹ ಘಟನೆಗಳು ಮರುಕಳಿಸಬಾರದೆಂದು ಮಠದ ಅಧಿಕಾರಿಗಳಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಬೇಕೆಂದು ಸಿಪಿಐ(ಎಂ) ಒತ್ತಾಯಿಸುತ್ತದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 55 ವರ್ಷಗಳಾದರೂ ಕುಡಿಯುವ ನೀರಿಗೆ ಪರದಾಟ; ಪಾಲಿಕೆ ಎದುರು ಕರವೇ ಪ್ರತಿಭಟನೆ

ನಗರದ ವಾರ್ಡ್ ನಂ.30ರ ಮಹಾತ್ಮ ಬಸವೇಶ್ವರ ಕಾಲೋನಿಯಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ...

ಕಲಬುರಗಿ | ನೋಟ್‌ಬುಕ್, ಪೆನ್ನು ವಿತರಿಸುವ ಮೂಲಕ ಜನ್ಮದಿನವನ್ನು ಆಚರಿಸಿಕೊಂಡ ಸ್ನೇಹ ಹಡಪದ

ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಪವಾಡ ಪುರುಷ ಸದ್ಗುರು ಶ್ರೀ ಕೋರಿಸಿದ್ದೇಶ್ವರ...

ಕಲಬುರಗಿ | ಮೂಲಸೌಕರ್ಯಕ್ಕಾಗಿ ಪಾಲಿಕೆ ಎದುರು ಸ್ಲಂ ನಿವಾಸಿಗಳ ಪ್ರತಿಭಟನೆ

ನಗರದ ವಾರ್ಡ್ ನಂ. 2ರ ರಾಮನಗರ ಭಾಗ-2ರಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯ,...

ಗದಗ | ಕನಕದಾಸರ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಸಂತ ಕನಕದಾಸರ ಜಯಂತಿಯನ್ನು ನವಂಬರ್ 27 ರಂದು ನಗರದ ಹಾತ್ತಲಗೇರಿ ನಾಕಾದ...