ಉಡುಪಿ | ಸಾರಿಗೆ ಕಲ್ಯಾಣ ಮಂಡಳಿಯನ್ನು ಕಾರ್ಮಿಕ ಇಲಾಖೆಯಿಂದ ಸಾರಿಗೆ ಇಲಾಖೆಗೆ ವರ್ಗಾವಣೆ ಕುಂದಾಪುರ ಆಟೋ ಚಾಲಕರ ವಿರೋಧ

Date:

ಕರ್ನಾಟಕ ರಾಜ್ಯ ಸರಕಾರ ಸಾರಿಗೆ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರಿಗಾಗಿ ರಚಿಸಲಾದ ಕರ್ನಾಟಕ ಮೋಟಾರ್ ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯನ್ನು ಕಾರ್ಮಿಕ ಇಲಾಖೆಯಿಂದ ಸಾರಿಗೆ ಇಲಾಖೆಗೆ ವರ್ಗಾಯಿಸುವುದನ್ನು ಕುಂದಾಪುರ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕರ ಸಂಘ ಸಿಐಟಿಯು ತೀವ್ರವಾಗಿ ಪ್ರತಿಭಟಿಸುತ್ತದೆ. ಸಂಘದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ವಿ ರವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡುತ್ತ ಸಾರಿಗೆ ಇಲಾಖೆಯಲ್ಲಿ ಚಾಲಕರ ಮತ್ತು ನಿರ್ವಾಹಕರು ಸೇರಿದಂತೆ ಕೆಲವೇ ವಿಭಾಗದ ನೌಕರರ ಮಾಹಿತಿ ಹೊಂದಿದ್ದು ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಇತರೆ ಗ್ಯಾರೇಜ್, ಪೇಂಟಿಂಗ್, ವೆಲ್ಡಿಂಗ್, ಟಿಂಕರಿಂಗ್ ಬಾಡಿ ಬಿಲ್ಡಿಂಗ್ ಟೈಮ್ ಕೀಪರ್ ಸೇರಿದಂತೆ ವಿಶಾಲ ವಿಭಾಗದ ಮಾಹಿತಿ ಸಾರಿಗೆ ಸಾರಿಗೆ ಇಲಾಖೆ ಅಡಿ ಬಾರದೆ ಇರುವುದರಿಂದ ಕಲ್ಯಾಣ ಮಂಡಳಿ ನಿರ್ವಹಣೆಯನ್ನು ಕಾರ್ಮಿಕ ಇಲಾಖೆಗೆ ಮಾಡುವುದು ಸೂಕ್ತವಾಗಿದೆ ಎಂಬುದಾಗಿ ಅಭಿಪ್ರಾಯ ಪಟ್ಟರು ಅದರೊಂದಿಗೆ ಸಾರಿಗೆ ಕಾರ್ಮಿಕರಿಗಾಗಿ ಸಂಗ್ರಹಿಸಿದ ಸೆಸ್ ಹಣದಿಂದ ಕಾರ್ಮಿಕರಿಗೆ ಸೌಲಭ್ಯ ವಿತರಿಸಲು ಸರಕಾರವನ್ನು ಒತ್ತಾಯಿಸಿದರು.

- Advertisement -

ರಾಜ್ಯ ವ್ಯಾಪಿ ಪ್ರತಿಭಟನೆಯ ಭಾಗವಾಗಿ ಇಂದು ಕುಂದಾಪುರದಲ್ಲಿ ಕುಂದಾಪುರ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕರ ಸಂಘದ ನೇತೃತ್ವದಲ್ಲಿ ಸಂಘದ ಸದಸ್ಯರು ಶಾಸ್ತ್ರಿ ಸರ್ಕಲ್ ಬಳಿಯಿಂದ ಸಹಾಯಕ ಆಯುಕ್ತರ ಕಚೇರಿಯ ವರೆಗೆ ಪಾದ ಯಾತ್ರೆ ನಡೆಸಿ ಸಹಾಯಕ ಆಯುಕ್ತ ಕಚೇರಿಗೆ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಅರ್ಪಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಂಘದ ಅಧ್ಯಕ್ಷರಾದ ರಮೇಶ್ ವಿ ಮಾತನಾಡಿ ದಿನನಿತ್ಯವೆಂಬಂತೆ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಆಟೋ ಚಾಲಕರ ಜೇಬಿಗೆ ಕತ್ತರಿಯಾಗಿದೆ. ಚಾಲಕರ ಆದಾಯ ಕಸಿದು ಜೀವನ ಸಂಕಷ್ಟಕ್ಕೆ ದುಡುವುದು. ಕೇಂದ್ರ ಸರಕಾರ ಬೆಲೆ ಏರಿಕೆ ಹಿಂಪಡೆಯಲು ಒತ್ತಾಯಿಸಿದರು ಇನ್ನೊಬ್ಬ ಸಂಘದ ಮುಖಂಡರಾದ ರಾಜೇಶ್ ಪಡುಕೋಣೆ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಗ್ಯಾಸ್ ಕೊರತೆಯಿಂದಾಗಿ 10ರಿಂದ 12 ಗಂಟೆ ಬಂಕ್ ಎದುರು ಸಾಲು ನಿಂತು ಬಾಡಿಗೆ ಮಾಡಲು ಸಾಧ್ಯವಾಗದ ಸ್ಥಿತಿ ಏರ್ಪಾಟ್ ಆಗಿದೆ ಸರಕಾರ ಈ ಬಗ್ಗೆ ಶೀಘ್ರ ಗಮನಹರಿಸಲು ಒತ್ತಾಯಿಸಿದರು

ಕಾರ್ಯಕ್ರಮದ ನೇತೃತ್ವವನ್ನು ಸಂಘದ ಮುಖಂಡರಾದ ರಾಜು ದೇವಡಿಗ ಹಾಗೂ ಸಂಘದ ಪದಾಧಿಕಾರಿಗಳಾದ ನರಸಿಂಹ , ಕೃಷ್ಣ ಪೂಜಾರಿ, ಜನ್ನಣ್ಣ, ಶೇಖರ್ ದೋಣಿಮನೆ , ದಿನೇಶ್, ರವಿ ವಿ ಎಂ, ಮಂಜುನಾಥ್ ಶೇರಿಗಾರ್ ಸಿಐಟಿಯು ಮುಖಂಡರಾದ ನರಸಿಂಹ ಎಚ್ , ಚಿಕ್ಕ ಮೊಗವೀರ ಬಲ್ಕಿಸ್, ಜೆಎಂಎಸ್ ಮುಖಂಡರಾದ ಶೀಲಾವತಿ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...