ಉಡುಪಿ | ರೈತರ ಸ್ವಾವಲಂಬನೆಗೆ ಸಹಕಾರಿ ಸಂಘಗಳ ಕೊಡುಗೆ ಅಪಾರ: ಕೆ. ರವಿರಾಜ ಹೆಗ್ಡೆ

Date:

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ (ನಿ.) ಹಾಗೂ ಜಿಲ್ಲಾ ಸಹಕಾರ ಯೂನಿಯನ್‌ನ ಸಂಯುಕ್ತ ಆಶ್ರಯದಲ್ಲಿ 73ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಗೌರವಧನ ವಿತರಣಾ ಸಮಾರಂಭವು ನಾಗೂರಿನ ಶ್ರೀ ಕೃಷ್ಣಲಲಿತ ಕಲಾಮಂದಿರದ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

- Advertisement -

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಸಹಕಾರಿ ಕ್ಷೇತ್ರವು ಸಮಾಜದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ. ಸಹಕಾರ ತತ್ವದ ಮೂಲಕ ಜನಸಾಮಾನ್ಯರು, ರೈತರು ಹಾಗೂ ಗ್ರಾಮೀಣ ಭಾಗದ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಂಘಗಳು ಶ್ರಮಿಸುತ್ತಿವೆ. ಈ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...
WhatsApp Image 2026 11 19 at 12.55.08 PM

ಕಾರ್ಯಕ್ರಮದಲ್ಲಿ ಮಾತನಾಡಿದ ಕೆ. ರವಿರಾಜ ಹೆಗ್ಡೆ ಅವರು, ಸಹಕಾರಿ ಸಂಘಗಳು ಕೇವಲ ಆರ್ಥಿಕ ವ್ಯವಹಾರಗಳಿಗೆ ಸೀಮಿತವಾಗದೆ, ಸಮಾಜದ ಸರ್ವತೋಮುಖ ಏಳಿಗೆ ಮತ್ತು ರೈತರ ಸ್ವಾವಲಂಬನೆಗಾಗಿ ಕಾರ್ಯನಿರ್ವಹಿಸುತ್ತಿವೆ. ಸಹಕಾರ ಕ್ಷೇತ್ರವು ಗ್ರಾಮೀಣ ಜನರ ಆರ್ಥಿಕ ಪ್ರಗತಿಗೆ ಆಧಾರಸ್ತಂಭವಾಗಿದ್ದು, ಜನರ ನಡುವೆ ಪರಸ್ಪರ ಸಹಕಾರ ಮತ್ತು ವಿಶ್ವಾಸವನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದೆ ಎಂದು ಹೇಳಿದರು.

ಸಂಘದ ಸದಸ್ಯರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವುದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸುವುದು ಸಂಘದ ಆದ್ಯ ಕರ್ತವ್ಯವಾಗಿದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಸಾಧನೆ ಮಾಡುವ ಉತ್ಸಾಹವನ್ನು ಮೂಡಿಸುವುದರ ಜತೆಗೆ ಸಮಾಜಕ್ಕೆ ಸೇವೆ ಸಲ್ಲಿಸಿದವರ ಕಾರ್ಯವನ್ನು ಗುರುತಿಸಿ ಗೌರವಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.

WhatsApp Image 2026 11 19 at 12.55.07 PM 1

ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಅವರು ಸಾರ್ವಜನಿಕ, ಖಾಸಗಿ ಹಾಗೂ ಸಹಕಾರಿ ಪಾಲುದಾರಿಕೆಯ ಕುರಿತು ಮಾತನಾಡಿ, ಅಭಿವೃದ್ಧಿ ಕಾರ್ಯಗಳಲ್ಲಿ ಈ ಮೂರು ಕ್ಷೇತ್ರಗಳ ಪರಸ್ಪರ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ. ಸಮಾಜದ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳು ಇತರ ಕ್ಷೇತ್ರಗಳೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಂ. ಮಹೇಶ ಹೆಗ್ಡೆ, ಸಹಕಾರ ಕ್ಷೇತ್ರದ ಬೆಳವಣಿಗೆ, ಸಹಕಾರಿ ಸಂಸ್ಥೆಗಳ ಬಲವರ್ಧನೆ ಮತ್ತು ಸಮಾಜದ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಸಂಘಗಳ ಪಾತ್ರದ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಸಂಘದ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಯಿತು. ಇದರೊಂದಿಗೆ ಅರ್ಹ ಫಲಾನುಭವಿಗಳಿಗೆ ಗೌರವಧನ ವಿತರಿಸುವ ಮೂಲಕ ಶಿಕ್ಷಣ ಮತ್ತು ಸಾಮಾಜಿಕ ಸೇವೆಗೆ ಸಂಘದ ವತಿಯಿಂದ ಪ್ರೋತ್ಸಾಹ ನೀಡಲಾಯಿತು.

WhatsApp Image 2026 11 19 at 12.55.07 PM

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್‌ನ ಸಿಇಒ ಅನೂಷಾ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್, ಸಂಘದ ಉಪಾಧ್ಯಕ್ಷ ಮಂಜು ದೇವಾಡಿಗ, ನಿರ್ದೇಶಕರಾದ ಉದಯ ಕುಮಾರ್ ಶೆಟ್ಟಿ, ಈಶ್ವರ, ಮೋಹನ ಪೂಜಾರಿ, ಬಿ.ಎಸ್. ಸುರೇಶ್ ಶೆಟ್ಟಿ, ಗುರುರಾಜ ಹೆಬ್ಬಾರ್, ಭರತ್ ದೇವಾಡಿಗ, ಹೂವ ನಾಯ್ಕ, ಪ್ರಕಾಶ ಎನ್. ಪೂಜಾರಿ, ರಾಜೇಶ್ ದೇವಾಡಿಗ, ದಿನೀತಾ ಶೆಟ್ಟಿ, ಲೀಲಾ ಕೆ. ಪೂಜಾರಿ, ರಂಜಿತ್ ಕುಮಾರ್ ಶೆಟ್ಟಿ ಹಾಗೂ ಸಂಘದ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಾಡಾನೆ ದಾಳಿ ಮತ್ತೊಂದು ಸಾವು: ಕಾಡಾನೆ ಸ್ಥಳಾಂತರಿಸಿದರೆ ತೀವ್ರ ಹೋರಾಟ; SDPI ಎಚ್ಚರಿಕೆ

ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೃಷ್ಣಮೂರ್ತಿ ಎಂಬವರು ಮೃತಪಟ್ಟಿರುವ...

ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ: ಒಂದು ಲಕ್ಷ ಜನರ ಭಾಗವಹಿಸುವಿಕೆ ನಿರೀಕ್ಷೆ

ನವೆಂಬರ್ 26ರಂದು ಮೈಸೂರಿನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆಯ ಸಿದ್ಧತೆಗಳ ಕುರಿತು ನಿಕಟಪೂರ್ವ...

ವಿಜಯನಗರ | ಕಬ್ಬಿನ ಗದ್ದೆಗೆ ಬೆಂಕಿ : ಅಪಾರ ಹಾನಿ

ಹೂವಿನಹಡಗಲಿ ತಾಲ್ಲೂಕಿನ ಕತ್ತೆಬೆನ್ನೂರ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕಿಟ್ ಕಿಡಿಯಿಂದ...