ಉಡುಪಿ‌ | SIR ಫಾರ್ಮ್ ಸಲ್ಲಿಕೆ ವೇಳೆ ಗಲಾಟೆ: ಗ್ರಾಮ ಆಡಳಿತಾಧಿಕಾರಿಗೆ ಬೆದರಿಕೆ, ಇಬ್ಬರ ಬಂಧನ

Date:

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಲ್ವಾಡಿ ಗ್ರಾಮ ಪಂಚಾಯತ್‌ನ ಗ್ರಾಮ ಆಡಳಿತಾಧಿಕಾರಿಗೆ ಕರ್ತವ್ಯ ನಿರ್ವಹಿಸುವ ವೇಳೆ ಜಾತಿ ನಿಂದನೆ ಮಾಡಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ತಂದೆ-ಮಗನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಜುಲೈ 15ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಗುಲ್ವಾಡಿ ಗ್ರಾಮ ಪಂಚಾಯತ್‌ನ ಗ್ರಾಮ ಆಡಳಿತಾಧಿಕಾರಿ ಪ್ರಕಾಶ ನಾಯ್ಕ್ ಅವರು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, ಗುಲ್ವಾಡಿ ನಿವಾಸಿಗಳಾದ ಪಳ್ಳಿ ಸುಲೇಮಾನ್ ಹಾಗೂ ಅವರ ಪುತ್ರ ಶಫಿ SIR ಫಾರ್ಮ್ ನೀಡಲು ಕಚೇರಿಗೆ ಬಂದಿದ್ದರು. ಈ ವೇಳೆ ಫಾರ್ಮ್ ಅನ್ನು ತಮ್ಮ ಬಳಿ ನೀಡುವಂತೆ ಅಧಿಕಾರಿಯು ತಿಳಿಸಿದಾಗ, ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 37/2026 ದಾಖಲಿಸಲಾಗಿದ್ದು, BNS ಕಾಯ್ದೆಯ ಸೆಕ್ಷನ್ 132, 352, 351(2), 3(5) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಕಲಂ 3(1)(r)(s) ಮತ್ತು 3(2)(v-a) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕುಂದಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ ಅವರ ನೇತೃತ್ವದಲ್ಲಿ, ಪೊಲೀಸ್ ಉಪನಿರೀಕ್ಷಕರಾದ ನಿರಂಜನ್ ಗೌಡ ಮತ್ತು ಚಂದ್ರಕಲಾ ಎಂ. ಪತ್ತಾರ ಹಾಗೂ ಸಿಬ್ಬಂದಿಯ ತಂಡ ಜುಲೈ 16ರಂದು ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಪ್ರದೇಶದಲ್ಲಿ ಆರೋಪಿಗಳಾದ ಪಳ್ಳಿ ಸುಲೇಮಾನ್ ಹಾಗೂ ಶಫಿ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...