ಉಡುಪಿ | ರಾಷ್ಟ್ರೀಯ ಲೋಕ್ ಅದಾಲತ್, ಒಂದೇ ದಿನ 38 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ

Date:

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಅವರ ನಿರ್ದೇಶನದ ಮೇರೆಗೆ ಶನಿವಾರ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಿತು. ಈ ಸಂದರ್ಭದಲ್ಲಿ ಒಂದೇ ದಿನ ಒಟ್ಟು 38,369 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಲಾಯಿತು.

- Advertisement -

ಇತ್ಯರ್ಥಗೊಂಡ ಪ್ರಕರಣಗಳಲ್ಲಿ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು 33, ಚೆಕ್ ಅಮಾನ್ಯ ಪ್ರಕರಣಗಳು 391, ಬ್ಯಾಂಕ್/ಹಣ ವಸೂಲಾತಿ ಪ್ರಕರಣಗಳು 5, ಮೋಟಾರು ವಾಹನ ಪರಿಹಾರ (ಎಂವಿಸಿ) ಪ್ರಕರಣಗಳು 99, ಸಿವಿಲ್ ಪ್ರಕರಣಗಳು 273, ಎಂಎಂಆರ್‌ಡಿ ಪ್ರಕರಣಗಳು 2, ವಿದ್ಯುತ್ ಕಾಯಿದೆ ಪ್ರಕರಣ 1, ಇತರೆ ಕ್ರಿಮಿನಲ್ ಪ್ರಕರಣಗಳು 2,094 ಹಾಗೂ ಕಾರ್ಮಿಕ ವ್ಯಾಜ್ಯಗಳು 11 ಸೇರಿವೆ. ಇದರೊಂದಿಗೆ 35,460 ವ್ಯಾಜ್ಯ ಪೂರ್ವ ಪ್ರಕರಣಗಳು ಕೂಡ ಇತ್ಯರ್ಥಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
1010036681 2
ಜಾಹಿರಾತು

ಲೋಕ್ ಅದಾಲತ್‌ನಲ್ಲಿ ಒಟ್ಟು ₹20,92,55,344 ಪರಿಹಾರ ಮೊತ್ತವನ್ನು ಘೋಷಿಸಲಾಗಿದೆ.

ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿಗಳು, ವಕೀಲರ ಸಂಘಗಳು, ಅಭಿಯೋಜನ ಇಲಾಖೆ, ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕುಗಳು ಹಾಗೂ ಇತರ ಸರ್ಕಾರಿ ಇಲಾಖೆಗಳ ಸಹಕಾರದೊಂದಿಗೆ ಲೋಕ್ ಅದಾಲತ್ ಯಶಸ್ವಿಯಾಗಿ ನಡೆಯಿತು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...