ಉಡುಪಿ | ಬ್ರಹ್ಮಾವರ ತಾಲೂಕು ಸೌಧಕ್ಕೆ ಲೋಕಾಯುಕ್ತ ದಾಳಿ; ದಾಖಲೆ ವಶ

Date:

ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬ್ರಹ್ಮಾವರ ತಾಲೂಕು ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಭಾನುವಾರ ದಾಳಿ ನಡೆಸಿ ವಿವಿಧ ಶಾಖೆಗಳ ಕಡತಗಳನ್ನು ಪರಿಶೀಲಿಸಿದರು.
ಬೆಂಗಳೂರು ಲೋಕಾಯುಕ್ತ ಕಚೇರಿಯಿಂದ ಶೋಧನಾ ವಾರಂಟ್ ಪಡೆದು ನಡೆಸಿದ ಈ ಕಾರ್ಯಾಚರಣೆ ಮಂಗಳೂರು ಲೋಕಾಯುಕ್ತ ಎಸ್‌ಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಯಿತು.

- Advertisement -

ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್ ಹಾಗೂ ರಾಜೇಂದ್ರ ನಾಯ್ಕ್, ಮಂಗಳೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ಭಾರತಿ ಸೇರಿದಂತೆ ಉಡುಪಿ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1011007954

ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ವಿಲೇವಾರಿಗೆ ಬಾಕಿ ಉಳಿದಿದ್ದ ಕಡತಗಳು ಹಾಗೂ ನಿಯಮಬಾಹಿರವಾಗಿ ವಿಲೇವಾರಿ ಮಾಡಲಾಗಿದೆ ಎನ್ನಲಾದ ದಾಖಲೆಗಳನ್ನು ಪರಿಶೀಲಿಸಿ ಕೆಲ ಪ್ರಮುಖ ಕಡತಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಪರಿಶೀಲನೆ ವೇಳೆ ಪತ್ತೆಯಾದ ಅಂಶಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಗೌರವಾನ್ವಿತ ಲೋಕಾಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...