ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

Date:

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

- Advertisement -

ಬನ್ನಂಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳ ಆಶ್ರಯದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಅಂತರ್‌ಪೀಳಿಗೆಯ ಬಾಂಧವ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಹಿರಿಯ ನಾಗರಿಕರ ಸೇವೆ ಕುಟುಂಬ ಹಾಗೂ ಸಮಾಜಕ್ಕೆ ಅಗತ್ಯವಾಗಿದೆ. ವಯಸ್ಸಾಗಿದೆ, ತಾವು ಅಪ್ರಯೋಜಕರು ಎಂಬ ಭಾವನೆ ಹೊಂದದೆ, ಆರೋಗ್ಯ ಸದೃಢವಾಗಿರುವವರೆಗೆ ಹಿರಿಯರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕಿರಿಯರು ಹಿರಿಯರನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು. ಈ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಮಕ್ಕಳು ಹೆತ್ತವರನ್ನು ತ್ಯಜಿಸುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವುದು ಆತಂಕಕಾರಿ. ಯುವಕರಿಗೆ ಉತ್ತಮ ಶಿಕ್ಷಣದ ಜತೆಗೆ ಕೌಟುಂಬಿಕ ಮೌಲ್ಯಗಳ ಬಗ್ಗೆಯೂ ಅರಿವು ಮೂಡಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿರಿಯ ನಾಗರಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಕುರಿತು ಹಿರಿಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಭಾರತೀಯ ಪರಂಪರೆಯ ‘ವಸುದೈವ ಕುಟುಂಬಕಂ’ ತತ್ವದ ಹೊರತಾಗಿಯೂ ಕುಟುಂಬ ವ್ಯವಸ್ಥೆ ಶಿಥಿಲಗೊಳ್ಳುತ್ತಿರುವುದು ಹಿರಿಯ ನಾಗರಿಕರ ಮೇಲೆ ಪರಿಣಾಮ ಬೀರುತ್ತಿದೆ. ಕಿರಿಯರಿಗೆ ಹಿರಿಯರನ್ನು ಗೌರವದಿಂದ ಕಾಣುವ ಕುರಿತು ಆಪ್ತ ಸಮಾಲೋಚನೆ ನೀಡುವ ಅಗತ್ಯವಿದೆ ಎಂದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್ ಮಾತನಾಡಿ, ನಗರೀಕರಣದ ಪರಿಣಾಮ ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಗಳಿಂದ ದೂರವಾಗಿ ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರ ಸುರಕ್ಷತೆಗೆ ಪೊಲೀಸ್ ಇಲಾಖೆ ಆದ್ಯತೆ ನೀಡುತ್ತಿದೆ. ಉಡುಪಿ ಜಿಲ್ಲೆಯಲ್ಲಿ 1,184 ಹಿರಿಯ ನಾಗರಿಕರನ್ನು ಗುರುತಿಸಿ, ಅವರ ಮನೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ನಡೆಯುತ್ತಿದೆ. ಒಂಟಿಯಾಗಿ ವಾಸಿಸುವ ಹಿರಿಯರು ಭಯಪಡಬೇಕಾಗಿಲ್ಲ; ಪೊಲೀಸ್ ಇಲಾಖೆ ಅವರ ಬೆಂಬಲಕ್ಕೆ ಇದೆ ಎಂದರು.

ಇಂಚರ ಕ್ಲಿನಿಕ್‌ನ ಜನರಲ್ ಫಿಸಿಶಿಯನ್ ಡಾ. ವೈ. ಸುದರ್ಶನ್ ರಾವ್ ವಿಶೇಷ ಉಪನ್ಯಾಸ ನೀಡಿ, ಹಿರಿಯರ ಅನುಭವದಿಂದ ಪಡೆದ ಜ್ಞಾನವನ್ನು ಸಮಾಜದ ಒಳಿತಿಗೆ ಬಳಸಿಕೊಳ್ಳಬೇಕು. ಅವರ ಆರೋಗ್ಯದ ಬಗ್ಗೆ ಕುಟುಂಬಸ್ಥರು ಕಾಳಜಿ ವಹಿಸುವುದರ ಜತೆಗೆ, ಒಂಟಿತನ ಕಾಡದಂತೆ ಅವರೊಂದಿಗೆ ಸಮಯ ಕಳೆಯಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯರ ಅನುಭವ ಹಾಗೂ ಜ್ಞಾನವನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವಾಗಬೇಕು. ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯುವಲ್ಲಿ ಹಿರಿಯರ ಮಾರ್ಗದರ್ಶನ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಆರೋಗ್ಯ ಇಲಾಖೆಯಿಂದ ಹಿರಿಯ ನಾಗರಿಕರಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೊಳ್ಳಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಬಿ., ಕೆನರಾ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಟಿ.ಎಸ್.ಎನ್. ಪೂರ್ಣಾನಂದ, ಹಿರಿಯ ನಾಗರಿಕರ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಕೆ. ಸದಾನಂದ ಹೆಗಡೆ, ಮಹಿಳಾ ಮಂಡಲಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷೆ ವಸಂತಿ ರಾವ್ ಕೊರಡ್ಕಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸ್ವಾಗತಿಸಿದರು. ಹೆಚ್. ರವೀಂದ್ರ ಮತ್ತು ಕಾಂತಿ ಹರೀಶ್ ನಿರೂಪಿಸಿದರು. ಯೋಜನಾ ಸಹಾಯಕ ಶಿವಾಜಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಪಾವತಿಸಲು ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು...

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...