ಉಡುಪಿ | ಮಹಿಷ ದಸರಾಗಿಲ್ಲ ಅನುಮತಿ; ಪೊಲೀಸರ ವಿರುದ್ಧ ಕಿಡಿ

Date:

ಉಡುಪಿಯಲ್ಲಿ ಮಹಿಷ ದಸರಾ ನಡೆಸಲು ಅನುಮತಿಯಿಲ್ಲವೆಂದು ಉಡುಪಿ ನಗರ ಪೊಲೀಸರು ಹೇಳಿದ್ದಾರೆ. ಅನುಮತಿ ನಿರಾಕರಿಸಿರುವ ಪೊಲೀಸರ ನಡೆಯನ್ನು ಸಾಮಾಜಿಕ ಹೋರಾಟಗಾರ ಜಯನ್ ಮಲ್ಫೆ ಖಂಡಿಸಿದ್ದು, ‘ಅನುಮತಿ ನಿರಾಕರಣೆಯು ಸಂವಿಧಾನದ ಮೇಲಿನ ಅತ್ಯಾಚಾರ’ ವೆಂದು ಆಕ್ರೋಶ ವ್ಯಸ್ಥಪಡಿಸಿದ್ದಾರೆ.

- Advertisement -

ಅಕ್ಟೋಬರ್ 15ರಂದು ಉಡುಪಿಯಲ್ಲಿ ಮಹಿಷ ದಸರಾ ನಡೆಸಲು ಹಲವು ಸಂಘಟನೆಗಳು ನಿರ್ಧಸಿದ್ದವು. ಆಚರಣೆಗೆ ಅನುಮತಿ ಕೇಳಿ  ಅಂಬೇಡ್ಕರ್ ಯುವ ಸೇನೆ ಅಧ್ಯಕ್ಷ ಹರೀಶ್ ಸಾಲ್ಯಾನ್‌ ಅವರು ಉಡುಪಿ ನಗರ ಪೊಲೀಸ್‌ ಠಾಣೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅನುಮತಿ ನೀಡಲು ಪೊಲೀಸರು ನಿಕಾರಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅನುಮತಿ ನೀಡಿಲ್ಲವೆಂದು ಹರೀಶ್‌ ಅವರಿಗೆ ಉಡುಪಿ ಪೊಲೀಸ್‌ ನಿರೀಕ್ಷಕರು ಪತ್ರ ಬರೆದಿದ್ದು, “ತಾವು ಮಹಿಷ ದಸರಾ ಮೆರವಣಿಗೆ ಮತ್ತು ಅದಕ್ಕೆ ಸಂಬಂಧಿಸಿದ ಬ್ಯಾನರ್‌ಗಳನ್ನು ಕಟ್ಟಲು ಅನುಮತಿ ಕೋರಿದ್ದೀರಿ. ಆದರೆ, ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಅನುಮತಿ ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಮಹಿಷ ದಸರಾ 4

ಈ ಬಗ್ಗೆ ಕಿಡಿಕಾರಿರುವ ಜಯನ್‌ ಮಲ್ಫೆ, “ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತ್ವದ ತತ್ವಗಳ ಆಧಾರದ ಮೇಲೆ ಸಂವಿಧಾನವು ರಚಿತವಾಗಿದೆ. ಸಂವಿಧಾನದ 25ನೇ ವಿಧಿಯ ಪ್ರಕಾರ, ಧರ್ಮ ಪ್ರಚಾರ ಮತ್ತು ಪಾಲನೆಗೆ ಸ್ವತಂತ್ರ ಅವಕಾಶವಿದೆ. ಅಲ್ಲದೆ, ಪ್ರಜೆಗಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನೂ ನೀಡಲಾಗಿದೆ. ಆದರೂ, ಮಹಿಷ ದಸರಾಗೆ ಅನುಮತಿ ನೀಡದೇ ಇರುವುದು ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ಹೇಳಿದ್ದಾರೆ.

“ದಲಿತರ ಅಸ್ಮಿತೆಯಾಗಿರುವ ಮಹಿಷ ದಸರಾವನ್ನು ನಡೆಸದಂತೆ ಬಹಿರಂಗವಾಗಿ ಬೆದರಿಕೆ ಹಾಕುತ್ತಿರುವವರನ್ನು ಬಂಧಿಸಬೇಕು. ಆದರೆ, ಅದನ್ನು ಬಿಟ್ಟು, ಪೊಲೀಸರು ದಲಿತರ ಹಕ್ಕನ್ನು ಒಸಕಿ ಹಾಕುತ್ತಿದ್ದಾರೆ. ಉಡುಪಿಯ ಪರ್ಯಾಯ ಮಹೋತ್ಸವಕ್ಕೆ ಉಗ್ರರ ಬೆದರಿಕೆ ಬಂದರೆ ಉಗ್ರರನ್ನು ಮಟ್ಟ ಹಾಕುತ್ತಾರೋ, ಇಲ್ಲ ಪರ್ಯಾಯ ಮಹೋತ್ಸವವನ್ನು ನಿಲ್ಲಿಸುತ್ತಾರೋ” ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ.

ಅಕ್ಟೋಬರ್ 15ರಂದು ಆದಿ ಉಡುಪಿಯ ಅಂಬೇಡ್ಕರ್‌ ವನದಲ್ಲಿ ಮಹಿಷ ದಸರಾ ನಡೆಯಲಿದೆ. ಕಾರ್ಯಕ್ರಮದಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ಜನರು ಭಾಗಿಯಾಗಬೇಕು ಎಂದು ಅಂಬೇಡ್ಕರ್ ಯುವ ಸೇನೆ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...