ಉಡುಪಿ | ಮಲ್ಪೆ ಬಂದರು ಪ್ರವೇಶ ದ್ವಾರ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ

Date:

ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಕಾಮಗಾರಿ ಮಂಗಳವಾರ ಆರಂಭಗೊಂಡಿದೆ.

- Advertisement -

ಮಂಗಳವಾರ ಬೆಳಿಗ್ಗೆಯಿಂದಲೇ ಕಾಮಗಾರಿ ಆರಂಭಗೊಂಡಿದ್ದು, ಮಲ್ಪೆ ಮೀನುಗಾರಿಕಾ ಬಂದರಿನ ಹಳೆ ಪ್ರವೇಶ ದ್ವಾರವನ್ನು ತೆರವು ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಗೇಟ್ ಅಗಲವನ್ನು 24 ಮೀಟರ್‌ಗೆ ಮರುವಿನ್ಯಾಸ ಮಾಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಹಾಗೂ ಮಲ್ಪೆ ಬಂದರು ಸಂಪರ್ಕಿಸುವ ಭಾಗದಲ್ಲಿ ಕಿರು ಸೇತುವೆ ನಿರ್ಮಾಣವನ್ನು ವಿಸ್ತರಿಸಲಾಗುತ್ತದೆ. ಗೇಟ್ ಹಾಗೂ ಕಿರು ಸೇತುವೆ ಕಾಮಗಾರಿಯನ್ನು ಏಕಕಾಲದಲ್ಲಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಬಂದರು ಪ್ರವೇಶ ದ್ವಾರ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ, ಮೀನುಗಾರಿಕಾ ರಜೆ ಹಿನ್ನೆಲೆಯಲ್ಲಿ ಬಂದರಿನ ಚಟುವಟಿಕೆಗೆ ಸಮಸ್ಯೆಯಾಗದಂತೆ ಬಂದರು ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಪೂರಕವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಬಂದರು ಇಲಾಖೆಯ ಅಧೀನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಜಾಗವನ್ನು ತಕ್ಷಣ ತೆರವು ಮಾಡಿ ಕಾಮಗಾರಿಗೆ ಅನುವು ಮಾಡಿ, ಮೆಸ್ಕಾಂ ಇಲಾಖೆಯ ಮೂಲಕ ವಿದ್ಯುತ್ ಕಂಬಗಳ ಸ್ಥಳಾಂತರ, ಬಂದರು ಪ್ರವೇಶ ಬದಲಿ ಮಾರ್ಗದ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ, ಸುಗಮ ವಾಹನ ಸಂಚಾರ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಮಲ್ಪೆ ಪೊಲೀಸ್ ಉಪನಿರೀಕ್ಷಕರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕಿಶೋರ್ ಡಿ. ಸುವರ್ಣ, ಕಾರ್ಯದರ್ಶಿ ಜಗನ್ನಾಥ ಕುಂದರ್, ಮೀನುಗಾರ ಮುಖಂಡರಾದ ರಾಮಚಂದ್ರ ಕುಂದರ್, ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್, ಸುಭಾಷ್ ಮೆಂಡನ್, ಪ್ರಕಾಶ ಬಂಗೇರ, ಕೃಷ್ಣ ಕೋಟ್ಯಾನ್, ಸುರೇಶ್ ಕುಂರ್ದ, ಮೀನುಗಾರಿಕೆ, ಬಂದರು ಇಲಾಖೆಯ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...