ಉಡುಪಿ | ಮಲ್ಪೆಯಲ್ಲಿ ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು; ವ್ಯಕ್ತಿಯ ಬಂಧನ

Date:

ಉಡುಪಿ ನಗರದ ಮಲ್ಪೆ ಜಂಕ್ಷನ್ ಸಮೀಪ ಅಕ್ರಮವಾಗಿ ವಾಣಿಜ್ಯ ಅನಿಲ ಸಿಲಿಂಡರ್‌ಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಖಚಿತ ಮಾಹಿತಿಯ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಮಲ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಅನೀಲ್ ಕುಮಾರ್ ನೇತೃತ್ವದ ತಂಡವು ಕೊಡವೂರು ಗ್ರಾಮದ ಮಲ್ಪೆ ಜಂಕ್ಷನ್ ಬಳಿಯ ಸನತ್ ಕಾಮತ್ ಅವರ ಮನೆ ಅಂಗಳಕ್ಕೆ ದಾಳಿ ನಡೆಸಿತು. ಪರಿಶೀಲನೆ ವೇಳೆ 19 ಕೆ.ಜಿ. ತೂಕದ 12 ವಾಣಿಜ್ಯ ಸಿಲಿಂಡರ್‌ಗಳು ಹಾಗೂ 5 ಕೆ.ಜಿ. ತೂಕದ 9 ವಾಣಿಜ್ಯ ಸಿಲಿಂಡರ್‌ಗಳು ದಾಸ್ತಾನು ಇರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ ಮಾತುಗಳಿಂದ ಹಾಲಕ್ಕಿಗಳ ಮತ ದೋಚಿ ಗೆದ್ದವರು ಕೃತಘ್ನರಾಗಿದ್ದಾರೆ. ಎಸ್ಟಿ ಮೀಸಲಾತಿ ಸೌಲಭ್ಯ ಅಷ್ಟು ಸುಲಭಕ್ಕೆ ಹಾಕ್ಕಿಗಳಿಗೆ ದಕ್ಕಲು ಪ್ರಬಲ ಮೇಲ್ವರ್ಗದ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ...

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ, ಗ್ರಾಮೀಣ ರಾಜಕಾರಣದಲ್ಲಿ ಮಾತ್ರ ಈಗಾಗಲೇ ಚುನಾವಣೆಯ ಕಾವು ಏರತೊಡಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ...

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ...

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

ವಿಚಾರಣೆ ವೇಳೆ ಸನತ್ ಕಾಮತ್ ಅವರು ಮೀನುಗಾರಿಕಾ ಉದ್ದೇಶಕ್ಕಾಗಿ ಬಳಸುವವರಿಗೆ ಮಾರಾಟ ಮಾಡಲು ಸಿಲಿಂಡರ್‌ಗಳನ್ನು ಸಂಗ್ರಹಿಸಿದ್ದಾಗಿ ತಿಳಿಸಿದ್ದು, ಈ ಸಂಬಂಧ ಯಾವುದೇ ಪರವಾನಿಗೆ ಅಥವಾ ದಾಖಲೆಗಳನ್ನು ಹೊಂದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಹಾರ ಇಲಾಖೆಯ ಅಧಿಕಾರಿಗಳು ಸಿಲಿಂಡರ್‌ಗಳನ್ನು ಮಹಜರು ಮೂಲಕ ವಶಪಡಿಸಿಕೊಂಡು ದೂರು ನೀಡಿದ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ-1955ರ ಕಲಂ 3 ಹಾಗೂ 7 ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲ (ಪೂರೈಕೆ ಮತ್ತು ವಿತರಣೆ ನಿಯಂತ್ರಣ) ಆದೇಶ-2000ರ ಕಲಂ 4 ಹಾಗೂ 7ರಡಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿತ ಸನತ್ ಆರ್. ಕಾಮತ್ (43) ಅವರನ್ನು ಅದೇ ದಿನ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಯಾವುದೇ ಪರವಾನಿಗೆ ಇಲ್ಲದೆ ಅನಿಲ ಸಿಲಿಂಡರ್‌ಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಕ್ರಮ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಬೇಸರ; ಶಾಸಕ ಸ್ವರೂಪ್ ಪ್ರಕಾಶ್

ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ...

ಕೋಲಾರ | ರಾಸುಗಳ ವಿಮಾ ಮೊತ್ತ ₹80 ಸಾವಿರಕ್ಕೆ ಏರಿಕೆ: ಹಸು ಕಳೆದುಕೊಂಡ ರೈತರಿಗೆ ನೆರವು

ರಾಸುಗಳ ವಿಮಾ ಸೌಲಭ್ಯದ ಮೊತ್ತವನ್ನು ₹60 ಸಾವಿರದಿಂದ ₹80 ಸಾವಿರಕ್ಕೆ ಹೆಚ್ಚಿಸಲಾಗಿದ್ದು,...

ಹಾಸನ | ರಾಜ್ಯದ ಹಲವು ಕಡೆ ಮಳೆ ಮುನ್ಸೂಚನೆ 

ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಚುರುಕಾಗಿರುವ...