ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಬೋಟ್‌ನಲ್ಲೇ ಹತ್ಯೆ ಮಾಡಿರುವ ಭೀಕರ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಹತ್ಯೆಯಾದ ಯುವಕನನ್ನು ಅಭಿಷೇಕ್ (24) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಬೋಟ್‌ನಲ್ಲಿ ಜೊತೆಗಿದ್ದ ಸಹಕಾರ್ಮಿಕನೇ ಅಭಿಷೇಕ್‌ನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹ ಕಾರ್ಮಿಕರ ನಡುವೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಅಭಿಷೇಕ್‌ನನ್ನು ಸಹ ಕಾರ್ಮಿಕನೊಬ್ಬ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ ಹಾಗೂ ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆತನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆದರೆ ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹತ್ಯೆಯ ಹಿಂದಿನ ಕಾರಣ ಹಾಗೂ ಆರೋಪಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರಿಸಿದ್ದಾರೆ.





