ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

Date:

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿದ್ದ ಆರೋಪದ ಮೇಲೆ 26 ವರ್ಷದ ಮಹಮ್ಮದ್ ಪರ್ವೇಜ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

- Advertisement -

ಅ. 24ರಂದು ಗಸ್ತಿನಲ್ಲಿದ್ದ ಮಣಿಪಾಲ ಪೊಲೀಸ್ ಠಾಣೆಯ ತನಿಖಾ ಉಪನಿರೀಕ್ಷಕ ಶಂಭುಲಿಂಗಯ್ಯ ಎಂ.ಇ. ಅವರಿಗೆ ದೊರೆತ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡರು. ಈ ವೇಳೆ ಆತನ ಬಳಿಯಿಂದ ಸುಮಾರು 20 ಇಂಚು ಉದ್ದದ ಕಬ್ಬಿಣದ ಲಾಂಗ್ ಹಾಗೂ 16 ಇಂಚು ಉದ್ದದ ಕಬ್ಬಿಣದ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಆರೋಪಿಯ ವಿರುದ್ಧ ಉಡುಪಿ ನಗರ, ಶಿರ್ವ, ಸೆನ್ ಹಾಗೂ ಮಂಗಳೂರಿನ ಕಾವೂರು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾವೂದ್, ಇಸಾಕ್ ಹಾಗೂ ಗರುಡ ಗ್ಯಾಂಗ್‌ನ ಕೆಲವರೊಂದಿಗೆ ವೈಮನಸ್ಸು ಹೊಂದಿದ್ದು, ಅವರ ಮೇಲೆ ಹಲ್ಲೆ ನಡೆಸುವ ಉದ್ದೇಶದಿಂದ ಆಯುಧಗಳನ್ನು ಇಟ್ಟುಕೊಂಡಿದ್ದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 175/2026ರಡಿ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 4 ಮತ್ತು 25(1B)(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 28ರಂದು ಕಾರವಾರ, ಕುಮಟಾ ಹಾಗೂ ಗೋಕರ್ಣ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರವಾರ: ತುರ್ತು ವಿದ್ಯುತ್ ಮಾರ್ಗ ನಿರ್ವಹಣೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಉತ್ತರ ಕನ್ನಡ | ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 11.39 ಲಕ್ಷ ಮತದಾರರು

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ...

ಕೋಲಾರ | ಪ್ರಜಾಪ್ರಭುತ್ವ, ಮತದಾನ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಹೋರಾಟ: ಎಐಸಿಸಿ ವೀಕ್ಷಕಿ ದೀಪ್ತಿ ವರ್ಗೀಸ್

ದೇಶದಲ್ಲಿ 13 ಕೋಟಿಗೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ...