ಉಡುಪಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ

Date:

ಪ್ರವಾದಿ ಮುಹಮ್ಮದ್(ಸ.ಅ) ಪೈಗಂಬರ್ ಅವರ ಜನ್ಮದಿನಾಚರಣೆಯಾದ ಮೀಲಾದುನ್ನಬಿಯನ್ನು ಮಂಗಳವಾರ ಉಡುಪಿ ತಾಲೂಕಿನಾದ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

- Advertisement -

ಉಡುಪಿಯ ನೇಜಾರು, ದೊಡ್ಡಣಗುಡ್ಡೆ, ಸಂತೋಷ್‌ನಗರ, ತೋನ್ಸೆ-ಹೂಡೆ ಸೇರಿದಂತೆ ಹಲವು ಕಡೆಗಳಲ್ಲಿ ಮೀಲಾದ್ ಮೆರವಣಿಗೆಗಳು ವಿಜೃಂಭಣೆಯಿಂದ ನಡೆದವು. ಆಯಾ ಮಸೀದಿಗಳಿಂದ ಹೊರಟ ಮೆರವಣಿಗೆಗಳು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ಅದೇ ಮಸೀದಿಗಳಿಗೆ ಮರಳುವ ಮೂಲಕ ಸಮಾಪ್ತಿಗೊಂಡವು. ಮೆರವಣಿಗೆಯಲ್ಲಿ ಪ್ರವಾದಿ ಸಂದೇಶ ಸಾರುವ ಘೋಷಣೆಗಳು, ದಫ್ ಕುಣಿತ, ಸ್ಕೌಟ್ಸ್ ಹಾಗೂ ಮದ್ರಸ ವಿದ್ಯಾರ್ಥಿಗಳು ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ದೊಡ್ಡಣಗುಡ್ಡೆ ಜುಮಾ ಮಸೀದಿಯಿಂದ ಹೊರಟ ಸಂದಲ್ ಮೆರವಣಿಗೆಯು ಬುದಗಿ ಸ್ಟೋರ್‌ವರೆಗೆ ಸಾಗಿತು. ಬಳಿಕ ಮಸೀದಿಗೆ ಮರಳಿ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ಮಕ್ಕಳ ಸ್ಕೌಟ್ಸ್ ಹಾಗೂ ದಾಯಿರ ತಂಡದ ಪ್ರದರ್ಶನ ಆಕರ್ಷಣೀಯವಾಗಿತ್ತು.

WhatsApp Image 2026 08 25 at 7.38.50 PM 1

ಸಂತೋಷ್‌ನಗರ ಮಸೀದಿಯಲ್ಲೂ ಮೀಲಾದುನ್ನಬಿ ಅಂಗವಾಗಿ ರ್ಯಾಲಿ ನಡೆಯಿತು. ಮಸೀದಿಯಿಂದ ಹೊರಟ ಮೆರವಣಿಗೆಯು ಅಂಬಾಗಿಲುವರೆಗೆ ತೆರಳಿ ಬಳಿಕ ಮಸೀದಿಗೆ ವಾಪಸ್ಸಾಯಿತು.

ನೇಜಾರು ಜುಮಾ ಮಸೀದಿ ವತಿಯಿಂದ ವೈಭವದ ಮೀಲಾದ್ ಮೆರವಣಿಗೆ ನಡೆಯಿತು. ಮಸೀದಿಯಿಂದ ಹೊರಟ ರ್ಯಾಲಿಯು ಸಂತೆಕಟ್ಟೆಗೆ ತೆರಳಿ, ಅಲ್ಲಿಂದ ಕಲ್ಯಾಣಪುರ, ನಿಡಂಬಳ್ಳಿ ರಸ್ತೆಯ ಮೂಲಕ ಸುಮಾರು ಐದು ಕಿ.ಮೀ. ಸಂಚರಿಸಿ ನೇಜಾರು ಮಸೀದಿಗೆ ತಲುಪಿತು.

ರ್ಯಾಲಿಯುದ್ದಕ್ಕೂ ಮುಸ್ಲಿಂ ಬಾಂಧವರಿಗೆ ವಿವಿಧ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯರು ತಂಪು ಪಾನೀಯ, ಸಿಹಿತಿಂಡಿಗಳನ್ನು ವಿತರಿಸಿ ಶುಭ ಹಾರೈಸಿದರು. ನೇಜಾರು ಭಜನಾ ಮಂದಿರ, ನೇಜಾರು ಕ್ರೀಡಾಂಗಣ, ರಿಕ್ಷಾ ಚಾಲಕ ಮತ್ತು ಮಾಲಕರ ಸಂಘ, ಗುರು ಕನ್‌ಸ್ಟ್ರಕ್ಷನ್‌ನ ಮಾಲಕ ಚಂದ್ರಶೇಖರ್ ಆಚಾರ್ಯ, ನಾಗೇಶ್ ಆಚಾರ್ಯ ಹಾಗೂ ಕೆಳಾರ್ಕಳಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದ ವತಿಯಿಂದ ಪಾನೀಯ ಹಾಗೂ ಸಿಹಿತಿಂಡಿಗಳನ್ನು ವಿತರಿಸಲಾಯಿತು. ಈ ಮೂಲಕ ಮೀಲಾದ್ ಮೆರವಣಿಗೆಯ ಸಂದರ್ಭದಲ್ಲಿ ಸ್ಥಳೀಯರು ಕೋಮುಸೌಹಾರ್ದತೆಯ ಸಂದೇಶ ಸಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...