ಉಡುಪಿ | ವಿದ್ಯಾರ್ಥಿಗಳು ಅವಕಾಶ ಬಳಸಿಕೊಳ್ಳಲಿ : ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್

Date:

ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಭಾಗವಹಿಸುವುದರೊಂದಿಗೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು.

- Advertisement -

ಅವರು ಶುಕ್ರವಾರ ಕಲ್ಯಾಣಪುರ ಮಿಲಾಗ್ರಿಸ್ ಟ್ರೈ ಸೆಂಟಿನರಿ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕ ಕಾಲೇಜು ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ವಿದ್ಯಾರ್ಥಿಗಳಿಗೆ ಕಾಲೇಜು ಶೈಕ್ಷಣಿಕ ಅವಧಿ ತಮ್ಮ ಜೀವನದಲ್ಲಿ ಸಾಧನೆ ತೋರಲು ಇರುವ ಉತ್ತಮ ಅವಕಾಶವಾಗಿದ್ದು ಈ ಸಂದರ್ಭದಲ್ಲಿ ತಮ್ಮಲ್ಲಿರುವ ಪ್ರತಿಭೆಗಳನ್ನು ಪ್ರದರ್ಶಿಸಲು ಸಿಕ್ಕ ವೇದಿಕೆಗಳನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳ ಕಾಲ ಹರಣ ಮಾಡದೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವಂತಾಗಬೇಕು. ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಲಿದೆ ಎಂದರು.

ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಪ್ರಾದೇಶಿಕ ಕಚೇರಿ ಜಂಟಿ ನಿರ್ದೇಶಕಿ ಕವಿತಾ ಕೆ.ಆರ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜು ಪಠ್ಯ ವಿಷಯಗಳ ಜೊತೆಗೆ ಅವುಗಳಿಗಿಂತ ಭಿನ್ನವಾದ ಸಾಮಾಜಿ ಮೌಲ್ಯಗಳ ಅರಿವಿನ ಅಗತ್ಯವಿದ್ದು ಅದನ್ನು ಪರಿಚಯಿಸುವ ಕೆಲಸ ಮಿಲಾಗ್ರಿಸ್ ಕಾಲೇಜು ಅತ್ಯುತ್ತಮವಾಗಿ ಮಾಡುತ್ತಿದೆ ಎಂದರು.

ಭಾರತದ ಅಂಧ ಕ್ರಿಕೆಟ್ ಅಸೋಸಿಯೇಶನ್ ವ್ಯವಸ್ಥಾಪಕಿ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಶಿಕಾ ಶೆಟ್ಟಿ, ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ವಂ|ಮೆಲ್ವಿನ್ ಮೆಂಡೊನ್ಸಾ ಶುಭ ಹಾರೈಸಿದರು.

ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲರಾದ ಡಾ|ವಿನ್ಸೆಂಟ್ ಆಳ್ವಾ ಮಂಡಿಸಿ ಕಾಲೇಜಿನ ಸಾಧಕ ಸಿಬಂದಿಗಳು ಹಾಗೂ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಿದರು.

ಕಾಲೇಜಿನ ಸಂಚಾಲಕರಾಗಿ ಸೇವೆ ಸಲ್ಲಿಸಿ ಕೆಲವೇ ದಿನಗಳಲ್ಲಿ ವರ್ಗಾವಣೆಗೊಳ್ಳಲಿರುವ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡಮಾಡುವ ವಿವಿಧ ದತ್ತಿ ನಿಧಿ ಪುರಸ್ಕಾರಗಳನ್ನು ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಅಂಧ ಕಲಾವಿದರಿಗೆ ಕೊಡ ಮಾಡಿದ ರಿದಮ್ ಪ್ಯಾಡ್ ಉಪಕರಣವನ್ನು ಹಸ್ತಾಂತರಿಸಲಾಯಿತು.

ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಸೋಫಿಯಾ ಡಾಯಸ್, ಎಸ್ ಡಬ್ಲ್ಯೂ ಸಿ ನಿರ್ದೇಶಕಿ ಸುಷ್ಮಾ ಶೆಟ್ಟಿ, ರಾಧಿಕಾ ಪಾಟ್ಕರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಗಣೇಶ್ ಮೇಸ್ತಾ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ್ ಸಾಲಿಯಾನ್, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಲಾಯ್ನಲ್ ರೊವಿನ್ ಡಿಸಿಲ್ವಾ ಉಪಸ್ಥಿತರಿದ್ದರು.

ಶಾಲೆಟ್ ಮಥಾಯಸ್ ಸ್ವಾಗತಿಸಿ, ನಿಲೋಫರ್ ರಿಯಾ ಫೆರ್ನಾಂಡಿಸ್ ಧನ್ಯವಾದವಿತ್ತರು, ಜಿವಿತಾ ಮತ್ತು ಆನ್ಸನ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...