ಉಡುಪಿ | ಸರಕಾರದ ತಪ್ಪು ನಿರ್ಧಾರಗಳನ್ನು ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ : ಅಣ್ಣಾಮಲೈ

Date:

ಸರಕಾರದ ಯೋಜನೆಗಳು ಅಥವಾ ನಿರ್ಧಾರಗಳಿಂದ ಜನಸಾಮಾನ್ಯರಿಗೆ ತೊಂದರೆಯಾದರೆ, ಪಕ್ಷಭೇದ ಮರೆತು ಅದನ್ನು ವಿರೋಧಿಸಬೇಕು. ಸರಕಾರದ ತಪ್ಪು ನಿರ್ಧಾರಗಳನ್ನು ಪ್ರಶ್ನಿಸಿ ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದರು.

- Advertisement -

ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಶನ್ ಆಶ್ರಯದಲ್ಲಿ ಶನಿವಾರ ಉಡುಪಿಯ ಪುರಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ತೃಪ್ತಿಯಾಗುವ ರೀತಿಯಲ್ಲಿ ಸರಕಾರ ಯೋಜನೆಗಳನ್ನು ರೂಪಿಸುವುದು ಸುಲಭವಲ್ಲ. ಕೆಲವೊಮ್ಮೆ ಸರಕಾರದ ನಿರ್ಧಾರಗಳೂ ತಪ್ಪಾಗಿರಬಹುದು. ಅಂತಹ ಸಂದರ್ಭಗಳಲ್ಲಿ ರಾಜಕೀಯ ಪಕ್ಷಗಳ ಭೇದಭಾವ ಬದಿಗಿಟ್ಟು, ಜನರಿಗೆ ಸಮಸ್ಯೆಯಾಗುವ ನಿರ್ಧಾರಗಳ ವಿರುದ್ಧ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದು ಅವರು ಹೇಳಿದರು.

ಯುಪಿಐ ಮೂಲಕ ನಡೆಯುವ ವ್ಯಾಪಾರಿ ವಹಿವಾಟುಗಳ ಮೇಲಿನ ಎಂಡಿಆರ್ (ಮರ್ಚೆಂಟ್ ಡಿಸ್ಕೌಂಟ್ ರೇಟ್) ಶುಲ್ಕದ ವಿಚಾರದಲ್ಲಿ ಕೇಂದ್ರ ಸರಕಾರ ಸಮತೋಲನದ ನಿಲುವು ತಳೆಯಬೇಕಿತ್ತು. ಸುಮಾರು ₹50 ಲಕ್ಷ ಕೋಟಿ ಬಜೆಟ್ ಮಂಡಿಸುವ ಕೇಂದ್ರ ಸರಕಾರಕ್ಕೆ ಎಂಡಿಆರ್ ಶುಲ್ಕದಿಂದ ಬರುವ ₹15 ಸಾವಿರ ಕೋಟಿ ದೊಡ್ಡ ಮೊತ್ತವಲ್ಲ. ಕಾರ್ಪೊರೇಟ್ ಕಂಪೆನಿಗಳಿಗೆ ತೆರಿಗೆ ವಿನಾಯಿತಿ ನೀಡುವ ಮಾದರಿಯಲ್ಲೇ ಚಿಲ್ಲರೆ ವ್ಯಾಪಾರಿಗಳಿಗೂ ಎಂಡಿಆರ್ ಶುಲ್ಕದಿಂದ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಚಿಲ್ಲರೆ ವ್ಯಾಪಾರ ಕ್ಷೇತ್ರ ಕುಸಿತ ಕಾಣುತ್ತಿರುವ ಬಗ್ಗೆ ಸರಕಾರ ಗಂಭೀರವಾಗಿ ಗಮನಹರಿಸಬೇಕು. ಬಂಡವಾಳಶಾಹಿ ಕಂಪೆನಿಗಳಲ್ಲಿ ವಿದೇಶಿ ಹೂಡಿಕೆ ಹೆಚ್ಚುತ್ತಿರುವುದು ಭವಿಷ್ಯದಲ್ಲಿ ದೇಶದ ಭದ್ರತೆಯ ದೃಷ್ಟಿಯಿಂದಲೂ ಆತಂಕಕಾರಿ ಬೆಳವಣಿಗೆಯಾಗಬಹುದು ಎಂದು ಅವರು ಅಭಿಪ್ರಾಯಪಟ್ಟರು.

1013271375

ಜವಾಬ್ದಾರಿಯುತ ರಾಜಕೀಯ ಅಗತ್ಯ

ದೇಶದ ನಗರಪಾಲಿಕೆಗಳು ಮತ್ತು ಮಹಾನಗರ ಪಾಲಿಕೆಗಳಲ್ಲಿ ಕಳಪೆ ನಿರ್ವಹಣೆ ಹಾಗೂ ನೈರ್ಮಲ್ಯ ವ್ಯವಸ್ಥೆಯ ಸಮಸ್ಯೆಗಳಿವೆ. ರಾಜಕೀಯವು ಉಚಿತ ಕೊಡುಗೆಗಳ ಘೋಷಣೆಗಳ ಸ್ಪರ್ಧೆಯಾಗದೆ, ಜವಾಬ್ದಾರಿಯುತ ಆಡಳಿತ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡುವಂತಿರಬೇಕು ಎಂದರು.

ಮುಖ್ಯಮಂತ್ರಿ ಅಥವಾ ಶಾಸಕರ ಆಯ್ಕೆಗಿಂತ ಮೊದಲು ಸ್ಥಳೀಯ ಸಂಸ್ಥೆಗಳಿಗೆ ಅರ್ಹ ನಾಯಕರನ್ನು ಆಯ್ಕೆ ಮಾಡುವುದು ಮುಖ್ಯ. ಸ್ಥಳೀಯ ಜನಪ್ರತಿನಿಧಿಗಳಿಗೆ ಪ್ರದೇಶದ ಸುರಕ್ಷತೆ, ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಅರಿವು ಇರಬೇಕು. ರಾಜಕೀಯ ಪಕ್ಷಗಳು ನಾಯಕರು ಭೇಟಿ ನೀಡುವ ಬಗ್ಗೆ ಪ್ರಚಾರ ಮಾಡುವುದಕ್ಕಿಂತ, ತಮ್ಮ ಆಡಳಿತದಲ್ಲಿ ವಾರ್ಡ್‌ ಹಾಗೂ ಊರುಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಡುವ ಸ್ಪರ್ಧಾತ್ಮಕ ರಾಜಕೀಯ ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಹೇಳಿದರು.

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗಬಾರದು. ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳೂ ಸಮಾನವಾಗಿ ಅಭಿವೃದ್ಧಿಯಾಗಬೇಕು. ಉಡುಪಿ ಜಿಲ್ಲೆಯ ಜನರು ಶಿಕ್ಷಿತರು, ಸುಸಂಸ್ಕೃತರು ಮತ್ತು ಪ್ರಾಮಾಣಿಕರಾಗಿದ್ದರೂ, ಜಿಲ್ಲೆಗೆ ದೊಡ್ಡ ಕಂಪೆನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿಲ್ಲ. ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ನಡೆಸಿ ಉಡುಪಿಯನ್ನು ಜ್ಞಾನಾಧಾರಿತ ಉದ್ಯಮಗಳ ಕೇಂದ್ರವಾಗಿ ಬೆಳೆಸಬೇಕು ಎಂದು ಅಣ್ಣಾಮಲೈ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ಮೊಬೈಲ್ ರಿಟೇಲರ್ಸ್ ಅಸೋಸಿಯೇಶನ್ ಅಧ್ಯಕ್ಷ ಕೈಲಾಶ್ ಲಖಿಯಾನಿ, ಕರ್ನಾಟಕ ರಾಜ್ಯಾಧ್ಯಕ್ಷ ರವಿಕುಮಾರ್ ಕೆ., ರಾಜ್ಯ ಕಾರ್ಯದರ್ಶಿ ಸುಹಾಸ್ ಕಿಣಿ ಹಾಗೂ ಉಡುಪಿ ಜಿಲ್ಲಾಧ್ಯಕ್ಷ ವಿವೇಕ್ ಜಿ. ಸುವರ್ಣ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...

ರಾಯಚೂರು | ಉದ್ರಿ ಕೊಡಲಿಲ್ಲವೆಂದು ಅಂಗಡಿ ಮಾಲೀಕನ ಬರ್ಬರ ಕೊಲೆ

ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ...

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...