ಉಡುಪಿ | ನಗರಸಭೆಗೆ ಲೋಕಾಯುಕ್ತ ದಿಢೀರ್ ದಾಳಿ ಸಾರ್ವಜನಿಕ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಆರೋಪ; ದಾಖಲೆಗಳ ಪರಿಶೀಲನೆ

Date:

ಸಾರ್ವಜನಿಕರಿಂದ ಸಲ್ಲಿಸಲಾದ ಅರ್ಜಿಗಳನ್ನು ದೀರ್ಘಕಾಲ ವಿಲೇವಾರಿ ಮಾಡದೆ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

- Advertisement -

ನಗರಸಭೆಯ ವಿವಿಧ ವಿಭಾಗಗಳಲ್ಲಿ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳು ಯಾವುದೇ ಸಮರ್ಪಕ ಕಾರಣವಿಲ್ಲದೆ ತಿಂಗಳುಗಟ್ಟಲೆ ಬಾಕಿ ಉಳಿದಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳ ತಂಡ ನಗರಸಭೆ ಕಚೇರಿಗೆ ಭೇಟಿ ನೀಡಿ ಕಡತಗಳ ನಿರ್ವಹಣೆ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಅರ್ಜಿಗಳ ವಿಲೇವಾರಿಯ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...
1011347517

ಪರಿಶೀಲನೆ ವೇಳೆ ವಿವಿಧ ವಿಭಾಗಗಳ ದಾಖಲೆಗಳು ಹಾಗೂ ಆಡಳಿತಾತ್ಮಕ ಕಡತಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಸಾರ್ವಜನಿಕರ ಅರ್ಜಿಗಳ ವಿಲೇವಾರಿಯಲ್ಲಿ ಉಂಟಾಗಿರುವ ವಿಳಂಬಕ್ಕೆ ಕಾರಣವಾದ ಅಂಶಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಿದರು.

ಲೋಕಾಯುಕ್ತ ದಾಳಿಯಿಂದ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತನಿಖೆಗೆ ಸಹಕರಿಸಿದ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಲೋಕಾಯುಕ್ತ ತಂಡಕ್ಕೆ ಒದಗಿಸಿದರು.

ಪ್ರಸ್ತುತ ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಲೋಕಾಯುಕ್ತ ಇಲಾಖೆಯ ಸಂಪೂರ್ಣ ವರದಿ ಹೊರಬಂದ ಬಳಿಕ ಯಾವ ವಿಭಾಗಗಳಲ್ಲಿ ಎಷ್ಟು ಕಡತಗಳು ಬಾಕಿ ಉಳಿದಿವೆ ಹಾಗೂ ವಿಳಂಬಕ್ಕೆ ಕಾರಣರಾದವರ ಕುರಿತು ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...