ಉಡುಪಿ | ಪ್ರಧಾನಿಗೆ ಮನವಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಲು ಮುಸ್ಲಿಂ ಬಾಂಧವ್ಯ ವೇದಿಕೆ ಒತ್ತಾಯ

Date:

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ ಮತ್ತು ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕೆಂದು ಕರ್ನಾಟಕ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹಿಸಿದೆ.

- Advertisement -

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ವಕ್ತಾರ ಮುಸ್ತಾಕ್ ಹೆನ್ನಾಬೈಲು, ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬಿಜೆಪಿ ಆಡಳಿತದ ಹಲವು ರಾಜ್ಯಗಳಲ್ಲಿ ಗೋವಿನ ವಿಚಾರದಲ್ಲಿ ದ್ವಂದ್ವ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ದೇಶದ ಪ್ರಮುಖ ಮಾಂಸ ರಫ್ತು ಕೇಂದ್ರಗಳನ್ನು ಮುಸ್ಲಿಮರ ಹೆಸರಿನಲ್ಲಿ ಮುಸ್ಲಿಮೇತರರು ನಡೆಸುತ್ತಿದ್ದಾರೆ ಎಂದು ದೂರಿದರು. ಅಲ್ಲದೆ, ಉತ್ತರ ಪ್ರದೇಶ ರಾಜ್ಯದಿಂದ ವಿದೇಶಗಳಿಗೆ ಅತಿ ಹೆಚ್ಚು ಗೋಮಾಂಸ ರಫ್ತಾಗುತ್ತಿದೆ ಎಂದು ಹೇಳಿದರು.

ಗೋವಾ ಹಾಗೂ ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ಗೋಮಾಂಸ ಸೇವನೆಗೆ ಕಾನೂನುಬದ್ಧ ಅವಕಾಶವಿರುವುದನ್ನು ಉಲ್ಲೇಖಿಸಿದ ಅವರು, ಗೋ ಸಂರಕ್ಷಣೆಯ ವಿಚಾರದಲ್ಲಿ ಬಿಜೆಪಿ ನಾಯಕರು ಒಳಗೊಂದು-ಹೊರಗೊಂದು ನೀತಿ ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.

WhatsApp Image 2026 06 09 at 9.00.54 PM

ಭಾರತವು ಜಗತ್ತಿನ ಪ್ರಮುಖ ಗೋಮಾಂಸ ರಫ್ತು ರಾಷ್ಟ್ರಗಳಲ್ಲಿ ಒಂದಾಗಿದ್ದು, ಗೋಹತ್ಯೆಯನ್ನು ನಿಷೇಧಿಸಿರುವ ನೇಪಾಳ ಮಾದರಿಯನ್ನು ಕೇಂದ್ರ ಸರ್ಕಾರ ಅನುಸರಿಸಬೇಕು ಎಂದು ಅವರು ಒತ್ತಾಯಿಸಿದರು. ಹಿಂದೂತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಗೋಹತ್ಯೆ ಮತ್ತು ಗೋಮಾಂಸ ರಫ್ತು ನಿಷೇಧ ಕುರಿತು ಬಹುಸಂಖ್ಯಾತರ ಭಾವನೆಗಳಿಗೆ ತಕ್ಕಂತೆ ಕ್ರಮ ಕೈಗೊಂಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ದೇಶಾದ್ಯಂತ “ಏಕ ದೇಶ – ಏಕ ಕಾನೂನು” ನೀತಿಯಡಿ ಗೋಹತ್ಯೆ ಮತ್ತು ಗೋಮಾಂಸ ರಫ್ತು ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು. ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು. ಎಲ್ಲ ಕಸಾಯಿಖಾನೆಗಳನ್ನು ಮುಚ್ಚಿ, ಗೋಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು. ಮಾಂಸಕ್ಕಾಗಿ ಗೋಹತ್ಯೆ ನಡೆಸುವವರ ವಿರುದ್ಧ ಹಾಗೂ ಅಕ್ರಮ ರಫ್ತು ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಕಳದ ಧರ್ಮಗುರು ಅಬ್ದುಲ್ ಹಾಫಿಝ್ ಖಾಸಿಮಿ, ವೇದಿಕೆಯ ಅಧ್ಯಕ್ಷ ಝಾಕೀರ್ ಹುಸೇನ್ ಉಚ್ಚಿಲ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಇಬ್ರಾಹಿಂ ನಡುಪದವು ಮತ್ತು ಕೋಟ ಇಬ್ರಾಹಿಂ ಸಾಹೇಬ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...