ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

Date:

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ ಪರಿವರ್ತಿಸಿ ಬಡ ಮಕ್ಕಳಿಗೆ ಕೊಡುಗೆಯಾಗಿ ನೀಡುವ ಉದ್ದೇಶದಿಂದ ಮೂರು ದಿನಗಳ ಕಾಲ ಉಡುಪಿಯ ಎಂಜಿಎಂ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾದ ‘ನಡಿಗೆ’ ಸಾಮಾಜಿಕ ಅಭಿಯಾನದಲ್ಲಿ 20ಸಾವಿರ ಜೋಡಿ ಪಾದರಕ್ಷೆಗಳನ್ನು ಸಂಗ್ರಹಿಸಲಾಯಿತು.

- Advertisement -

ರವಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪರಿಸರ ತಜ್ಞ ದಿನೇಶ್ ಹೊಳ್ಳ, ಇಂದು ಪರಿಸರದ ಮೇಲೆ ಸಾಕಷ್ಟು ದಾಳಿಗಳು ನಡೆಯುತ್ತಿವೆ. ಇದರ ಪರಿಣಾಮ ನಾವು ಮಳೆಗಾಲ ದಲ್ಲಿಯೇ ಬರಪೀಡಿತ ಪ್ರದೇಶಗಳ ಸರ್ವೆ ನಡೆಸುವ ಪರಿಸ್ಥಿತಿಗೆ ಬಂದಿದ್ದೇನೆ. ಪಶ್ಚಿಮ ಘಟ್ಟಗಳಲ್ಲಿ ಮಾನವ ಹಸ್ತಕ್ಷೇಪದಿಂದಾಗಿ ಇಂದು ಹಲವು ದುರಂತ ಗಳು ಸಂಭವಿಸುತ್ತಿವೆ. ಪ್ರತಿಯೊಂದು ಜೀವ ಸಂಕುಲಗಳು ಕೂಡ ಈ ಪರಿಸರಕ್ಕೆ ಅತೀ ಅಗತ್ಯವಾಗಿದೆ. ಅದನ್ನು ಕಾಪಾಡುವ ಕಾರ್ಯ ನಾವೆಲ್ಲ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮುಂಬೈ ಗ್ರೀನ್‌ಸೋಲ್‌ನ ಸಹ ಸಂಸ್ಥಾಪಕ ರಮೇಶ್ ಧಾಮಿ, ಸಿಎಸ್‌ಆರ್ ವಿಭಾಗದ ಮುಖ್ಯಸ್ಥೆ ವಿನಿತಾ ಫೆರ್ನಾಂಡೀಸ್, ಕಾರ್ಕಳ ಕ್ರಿಯೆಟಿವ್ ಎಜುಕೇಶನ್ ಫೌಂಡೇಶನ್‌ನ ಅಶ್ವತ್ ಎಸ್.ಎಲ್., ಶ್ರೀಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಯ ಚೆಯರ್‌ಮೆನ್ ಸಂಪತ್ ಶೆಟ್ಟಿ, ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್‌ನ ಅರ್ಜುನ್ ಭಂಡಾರ್ಕರ್, ಕುಂದಾಪುರ ಸುಜ್ಞಾನ ಶಿಕ್ಷಣ ಸಂಸ್ಥೆಯ ಕೋಶಾಧಿಕಾರಿ ಭರತ್ ಶೆಟ್ಟಿ, ಅಬಿಗೇಲ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಡುಪಿಯ ಶಾಲೆಯೊಂದರ 30 ಮಕ್ಕಳಿಗೆ ಮುಂಬೈ ಗ್ರೀನ್‌ಸೋಲ್‌ನಲ್ಲಿ ತಯಾರಿಸಲಾದ ಪಾದರಕ್ಷೆ, ಬ್ಯಾಗ್ ಹಾಗೂ ಮ್ಯಾಟ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಆಯೋಜಕ ಅವಿನಾಶ್ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಉಪನ್ಯಾಸಕ ಸುಜಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಎಂಜಿಎಂ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸಹಕರಿಸಿದರು.

ಈ ಅಭಿಯಾನದ ಮೂಲಕ ಸಂಗ್ರಹಿಸಲಾದ ಪಾದರಕ್ಷೆಗಳನ್ನು ಮುಂಬಯಿಯ ’ಗ್ರೀನ್‌ಸೋಲ್ ಫೌಂಡೇಷನ್’ಗೆ ಮಂಗಳವಾರ ಕಳುಹಿಸಿಕೊಡಲಾಗುತ್ತದೆ ಎಂದು ಸಂಘಟಕ ಅವಿನಾಶ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ ಬೈಕ್...

ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಪ್ರಧಾನ ಕಚೇರಿ ಉದ್ಘಾಟನೆ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅನೇಕ ಪ್ರತಿಷ್ಠಿತ ಹಣಕಾಸು ಸಂಸ್ಥೆಗಳ ತವರೂರಾಗಿದ್ದು,...

ಕುಡಚಿ–ಬಾಗಲಕೋಟೆ ರೈಲು ಮಾರ್ಗ ಕಾಮಗಾರಿ ವಿಳಂಬ: ಶೀಘ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯಲ್ಲಿ ರೈಲ್ವೆ ಇಲಾಖೆ ವಿಳಂಬ ಮಾಡುತ್ತಿರುವುದು ಹಾಗೂ...

ಹಾವೇರಿ | ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಬೋಗಸ್ ಮತದಾನ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ

"​ಇತ್ತೀಚೆಗೆ ಜರುಗಿದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾವೇರಿ ನಗರದ ಮತಗಟ್ಟೆ...