ಉಡುಪಿ | ಧರ್ಮಸ್ಥಳ ಪ್ರಕರಣ ತನಿಖೆ ಇನ್ನೂ ಪೂರ್ಣವಾಗಿಲ್ಲ: ಡಾ. ನಾಗಲಕ್ಷ್ಮೀ ಚೌಧರಿ

Date:

ಧರ್ಮಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಮಹಿಳೆಯರ ಅಸಹಜ ಸಾವು ಮತ್ತು ನಾಪತ್ತೆ ಪ್ರಕರಣಗಳ ತನಿಖೆಯ ವರದಿಯನ್ನು ವಿಶೇಷ ತನಿಖಾ ತಂಡ ಇನ್ನೂ ರಾಜ್ಯ ಮಹಿಳಾ ಆಯೋಗಕ್ಕೆ ಸಲ್ಲಿಸಿಲ್ಲ. ಆದರೆ ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

- Advertisement -

ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿನ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ವಂಚನೆ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪು ತಮಗೆ ಆಘಾತ ತಂದಿದೆ ಎಂದರು. ಸಂತ್ರಸ್ತೆಗೆ ಕೇವಲ ಪರಿಹಾರ ನೀಡುವುದರಿಂದ ನ್ಯಾಯ ಸಿಗುವುದಿಲ್ಲ. ಪ್ರಕರಣದ ವಿರುದ್ಧ ಮೇಲ್ಮನವಿ ಸಲ್ಲಿಸಿ, ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ಗೆ ಹೋಗಲಾಗುವುದು. ಎಲ್ಲ ಹಂತದಲ್ಲೂ ಮಹಿಳಾ ಆಯೋಗ ಸಂತ್ರಸ್ತೆಯ ಪರವಾಗಿ ನಿಲ್ಲಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಉಡುಪಿ ನಗರದಲ್ಲಿರುವ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೂಕ್ತ ಸ್ಥಳಾವಕಾಶ ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಇರುವುದರಿಂದ, ಠಾಣೆಯನ್ನು ಮಹಿಳೆಯರಿಗೆ ಅನುಕೂಲಕರವಾದ ಬೇರೆ ಸ್ಥಳಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬಗ್ಗೆ ಮಾತನಾಡಿದ ಅವರು, ಆಸ್ಪತ್ರೆಯನ್ನು ವಿದೇಶಿ ಮಾದರಿಯಲ್ಲಿ ನಿರ್ಮಿಸಿರುವುದರಿಂದ ಅದರ ನಿರ್ವಹಣೆ ದುಬಾರಿ ಮತ್ತು ಕಷ್ಟಕರವಾಗಿದೆ ಎಂದರು. ವಿದ್ಯುತ್ ವ್ಯತ್ಯಯವಾದರೆ ಜನರೇಟರ್ ಕಾರ್ಯಾಚರಣೆಗೆ ಗಂಟೆಗೆ ಸುಮಾರು 50 ಲೀಟರ್ ಡೀಸೆಲ್ ಅಗತ್ಯವಿದೆ. ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...