ಉಡುಪಿ | ಶ್ರೀನಾರಾಯಣ ಗುರು 172ನೇ ಜಯಂತಿ: ರಾಜ್ಯಮಟ್ಟದ ಭಾಷಣ ಸ್ಪರ್ಧೆ, ಸಾಮರಸ್ಯ ಜಾಥಾ

Date:

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ಶ್ರೀನಾರಾಯಣ ಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ‘ಗುರು ಸಂದೇಶ ಸಾಮರಸ್ಯ ಜಾಥಾ’ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆ.30ರಂದು ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ.ಪೂಜಾರಿ ತಿಳಿಸಿದ್ದಾರೆ.

- Advertisement -

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ನಾರಾಯಣಗುರು ಆಡಿಟೋರಿಯಂನಲ್ಲಿ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶ್ರೀನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ರಘುಪತಿ ಭಟ್ ಭಾಗವಹಿಸಲಿರು ವರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮಧ್ಯಾಹ್ನ 1ಗಂಟೆಗೆ ರಾಜ್ಯಮಟ್ಟದ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಗುರು ಸಂದೇಶ ಸಾಮರಸ್ಯ ಜಾಥಾಕ್ಕೆ ಚಾಲನೆ ನೀಡಲಾಗುವುದು. ಜಾಥಾಕ್ಕೆ ಸಾಧಕಾರದ ವಿದುಷಿ ದೀಕ್ಷಾ, ವಿದ್ಯಾರ್ಥಿಗಳಾದ ದಿಶಾ, ಪ್ರೀತಂ ಪೂಜಾರಿ, ತನುಶ್ರೀ ಪಿತ್ರೋಡಿ ಹಾಗೂ ರಾಷ್ಟ್ರೀಯ ಕರಾಟೆಪಟು ಛಾಯಾ ಎಸ್.ಪೂಜಾರಿ ಚಾಲನೆ ನೀಡಲಿದ್ದಾರೆ.

WhatsApp Image 2026 08 26 at 10.13.35 PM 3

ಬನ್ನಂಜೆ ಬಿಲ್ಲವ ಸಂಘದಿಂದ ಆರಂಭಗೊಳ್ಳುವ ಜಾಥಾವು ಎಸ್ಪಿ ಆಫೀಸ್ ರಸ್ತೆ, ಅಂಬಲಪಾಡಿ ಜಂಕ್ಷನ್, ಕಿನ್ನಿಮೂಲ್ಕಿ, ಬಲಾಯಿಪಾದೆ, ಉದ್ಯಾವರ, ಕಟಪಾಡಿ, ಕಾಪು, ಮೂಳೂರು, ಉಚ್ಚಿಲ, ಪಡುಬಿದ್ರಿ, ಹೆಜಮಾಡಿ ಮಾರ್ಗವಾಗಿ ಸಾಗಿಬಂದು ಕಟಪಾಡಿಯ ಶ್ರೀವಿಶ್ವನಾಥ ಕ್ಷೇತ್ರದಲ್ಲಿ ಸಮಾಪ್ತಿಗೊಳ್ಳಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ಆರೋಗ್ಯ ಸಚಿವ ಯು.ಟಿ ಖಾದರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್, ಯತ್ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಮೊದಲಾದವರು ಭಾಗವಹಿಸಲಿರುವರು ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಗೌರವಾಧ್ಯಕ್ಷ ದಿವಾಕರ್ ಸನಿಲ್, ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಮಲ್ಪೆ, ವಿಜಯ ಕೋಟ್ಯಾನ್ ಪಿತ್ರೋಡಿ, ಗೌರವ ಸಲಹೆಗಾರರಾದ ಸುಧಾಕರ್ ಡಿ.ಅಮೀನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...