ಉಡುಪಿ | ಜಗತ್ತಿಗೆ ಸಮಾನತೆಯ ಜ್ಞಾನದ ಬೆಳಕು ಚೆಲ್ಲಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ಶಾಸಕ ಯಶ್‌ಪಾಲ್ ಸುವರ್ಣ

Date:

ದೇಶ ಕಂಡ ಮಹಾನ್ ಸಂತರಲ್ಲಿ ಒಬ್ಬರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜ ಸುಧಾರಣೆಯಲ್ಲಿ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಹಿಂದುಳಿದ ಸಮಾಜದವರು ಮುಖ್ಯವಾಹಿನಿಗೆ ಬರಲು ದಾರಿ ಮಾಡಿಕೊಟ್ಟರು. ಸಾಮಾಜಿಕ ಕಳಕಳಿಯ ಚಟುವಟಿಕೆಗಳ ಮೂಲಕ ದೇಶದೆಲ್ಲೆಡೆ ಸಂಚರಿಸಿ, ಜಗತ್ತಿಗೆ ಸಮಾನತೆಯ ಜ್ಞಾನದ ಬೆಳಕನ್ನು ಹರಿಸಿದರು ಎಂದು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು.

- Advertisement -

ನಗರದ ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ), ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ದಾರ್ಶನಿಕ ಹಾಗೂ ಆಧ್ಯಾತ್ಮಿಕ ಸಾಧಕರಾಗಿದ್ದ ನಾರಾಯಣ ಗುರುಗಳು ಸಮಾಜದಲ್ಲಿ ಸಮಾನತೆ ನಿರ್ಮಾಣಕ್ಕೆ ಮುಂದಾಗಿದ್ದರು. ಕೆಳವರ್ಗದ ಜನರಿಗಾಗಿ ದೇವಾಲಯಗಳನ್ನು ನಿರ್ಮಿಸಿ, ದೇವರನ್ನು ಪೂಜಿಸುವ ಅವಕಾಶ ಕಲ್ಪಿಸಿದ್ದರು. ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವುದರೊಂದಿಗೆ ಅಸ್ಪೃಶ್ಯತೆ, ಜಾತೀಯತೆ ಸೇರಿದಂತೆ ಸಾಮಾಜಿಕ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದ್ದರು ಎಂದರು.

ಕರಾವಳಿ ಭಾಗದಲ್ಲಿ ನಾರಾಯಣ ಗುರುಗಳ 172ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ನಾರಾಯಣ ಗುರುಗಳು ತಮ್ಮ ಜೀವಿತಾವಧಿಯಲ್ಲಿ ತಾಂಡವವಾಡುತ್ತಿದ್ದ ಮೇಲು-ಕೀಳು ಹಾಗೂ ಅಸ್ಪೃಶ್ಯತೆಯ ನಿವಾರಣೆಗೆ ಶ್ರಮಿಸಿದರು. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ಸಮಬಾಳು ಮತ್ತು ಸಮಪಾಲು ದೊರೆಯಬೇಕು ಎಂಬ ಪರಿಕಲ್ಪನೆಯೊಂದಿಗೆ ಅಸ್ಪೃಶ್ಯತೆಯ ವಿರುದ್ಧ ಶಾಂತಿಯ ಮಾರ್ಗದಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿದರು ಎಂದರು.

ಅಂದಿನ ಕಾಲದಲ್ಲಿ ಸ್ವಾಮಿ ವಿವೇಕಾನಂದರು ಕೇರಳಕ್ಕೆ ಭೇಟಿ ನೀಡಿದಾಗ ಅಲ್ಲಿನ ಮನುಷ್ಯತ್ವವಿಲ್ಲದ ವಾತಾವರಣವನ್ನು ಕಂಡು ತೀವ್ರವಾಗಿ ಬೇಸರ ವ್ಯಕ್ತಪಡಿಸಿದ್ದರು. ಅಂತಹ ಸಂಘರ್ಷಮಯ ಪ್ರದೇಶದಲ್ಲಿ ನಾರಾಯಣ ಗುರುಗಳು ತಮ್ಮ ಸಂದೇಶಗಳ ಮೂಲಕ ಶಾಂತಿಯ ಕ್ರಾಂತಿಯೊಂದಿಗೆ ಸಾಮಾಜಿಕ ಬದಲಾವಣೆಯನ್ನು ತಂದರು ಎಂದು ಹೇಳಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಸಮಾಜದ ಕಟ್ಟಕಡೆಯ ಜನರಿಗೂ ಮನ್ನಣೆ ನೀಡಿದ ನಾರಾಯಣ ಗುರುಗಳು ಹಿಂದುಳಿದ ಸಮುದಾಯಕ್ಕೆ ಶಕ್ತಿ ತುಂಬಿದರು. ದೀನರು, ಶೋಷಿತರು, ಹಿಂದುಳಿದವರು ಹಾಗೂ ಅಸ್ಪೃಶ್ಯರಿಗಾಗಿ ಮಿಡಿಯುವ ಹೃದಯ ಹೊಂದಿದ್ದ ಅವರು ಮೌನ ಕ್ರಾಂತಿ ನಡೆಸಿದರು. ಸಮಾಜದ ಆರ್ಥಿಕ ಮತ್ತು ನೈತಿಕ ಅಧಃಪತನಕ್ಕೆ ಕಾರಣವಾಗಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಸಮರ ಸಾರಿದರು ಎಂದರು.

ಕೇರಳದ ಶೋಷಿತ ವರ್ಗಗಳ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಔದ್ಯೋಗಿಕ ಕ್ಷೇತ್ರಗಳ ಪುನರುತ್ಥಾನ ಮತ್ತು ಹಕ್ಕುಗಳಿಗಾಗಿ ಹೋರಾಡುವ ಮೂಲಕ ಸಾಮಾಜಿಕ ಸುಧಾರಣೆಯ ಕ್ರಾಂತಿಯ ಕಹಳೆಯನ್ನು ಊದಿದ ನಾರಾಯಣ ಗುರುಗಳ ಸಿದ್ಧಾಂತಗಳನ್ನು ನಾವು ಪಾಲಿಸುವುದರ ಜೊತೆಗೆ ಮುಂದಿನ ಪೀಳಿಗೆಯೂ ಅವುಗಳನ್ನು ಮುಂದುವರಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಉಪನ್ಯಾಸಕ ಸಚೇಂದ್ರ ಅಂಬಾಗಿಲು ಉಪನ್ಯಾಸ ನೀಡಿ, ‘ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ಸಂದೇಶದೊಂದಿಗೆ ಶಿಕ್ಷಣ, ಉದ್ಯೋಗ ಹಾಗೂ ಸಂಘಟನೆಗಳಿಗೆ ಆದ್ಯತೆ ನೀಡುವ ಮೂಲಕ ಸಮಾನತೆ, ಸಹೋದರತೆ ಮತ್ತು ಮಾನವೀಯ ಮೌಲ್ಯಗಳನ್ನು ನಾರಾಯಣ ಗುರುಗಳು ಸಾರಿದರು ಎಂದರು.

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ 2

ಜಾತೀಯತೆ ಹಾಗೂ ಅಸಮಾನತೆಯ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಆಧ್ಯಾತ್ಮಿಕ ಮಾರ್ಗವನ್ನು ಆಯ್ಕೆ ಮಾಡಿಕೊಂಡ ಅವರು ಅತ್ಯಂತ ವೇಗವಾಗಿ ಜನರಿಗೆ ಹತ್ತಿರವಾದರು. ಅಸ್ಪೃಶ್ಯರಿಗೆ ದೇವಾಲಯ ಪ್ರವೇಶ ಮತ್ತು ಪೂಜೆಯ ಹಕ್ಕು ನಿರಾಕರಿಸಿದ ಸಂದರ್ಭದಲ್ಲಿ, ದೇವಾಲಯಕ್ಕೆ ಹೋಗುವ ಹಕ್ಕು ಇಲ್ಲದಿದ್ದರೆ ದೇವಾಲಯವನ್ನೇ ನಿಮ್ಮಲ್ಲಿಗೆ ತರುತ್ತೇನೆ ಎಂಬ ಸಂದೇಶದ ಮೂಲಕ ಪೂಜೆಯ ಹಕ್ಕನ್ನು ಕಲ್ಪಿಸಿದರು ಎಂದು ವಿವರಿಸಿದರು.

ನಾರಾಯಣ ಗುರುಗಳು ಯಾವುದೇ ಒಂದು ಸಮುದಾಯ ಅಥವಾ ಜಾತಿಗೆ ಸೀಮಿತರಾಗದೆ ಇಡೀ ಸಮಾಜದ ಆಸ್ತಿಯಾಗಿ, ಜಾತಿ ವ್ಯವಸ್ಥೆ, ಮೂಢನಂಬಿಕೆ ಹಾಗೂ ಅಂಧಶ್ರದ್ಧೆಯ ವಿರುದ್ಧ ಹೋರಾಟ ನಡೆಸಿದರು ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತಂತೆ ಜಿಲ್ಲೆಯ ಐದು ವಲಯಗಳಲ್ಲಿ ಆಯೋಜಿಸಲಾಗಿದ್ದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಬಿಲ್ಲವರ ಸೇವಾ ಸಂಘ ಉಡುಪಿ (ರಿ), ಬನ್ನಂಜೆ ಅಧ್ಯಕ್ಷ ಶಶಿಧರ ಎಂ. ಅಮೀನ್ ವಡಭಾಂಡೇಶ್ವರ, ಬಿಲ್ಲವ ಸಮುದಾಯದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ತೇಜಸ್ ಎಂ. ಬಂಗೇರ ನಿರೂಪಿಸಿದರು. ಇಲಾಖೆಯ ಸಿಬ್ಬಂದಿ ವರ್ಷಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...