ಉಡುಪಿ | ಇಂದು ಜೂನ್ 28 ರಾಷ್ಟ್ರೀಯ ಲಸಿಕಾ ದಿನ; ಜಿಲ್ಲೆಯಲ್ಲಿ 65,401 ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ

Date:

ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಜೂನ್ 28, 2026ರಂದು ಜಿಲ್ಲೆಯಾದ್ಯಂತ 0 ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

- Advertisement -

ಭಾರತವು ಕಳೆದ 14 ವರ್ಷಗಳಿಂದ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ 2026ರಲ್ಲಿ ಪೋಲಿಯೊ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಅಭಿಯಾನವನ್ನು ಮುಂದುವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಿಲ್ಲೆಯಲ್ಲಿ ಒಟ್ಟು 65,401 ಮಕ್ಕಳಿಗೆ (ಗ್ರಾಮೀಣ ಪ್ರದೇಶದಲ್ಲಿ 51,711 ಹಾಗೂ ನಗರ ಪ್ರದೇಶದಲ್ಲಿ 13,690) ಪೋಲಿಯೊ ಹನಿ ನೀಡುವ ಗುರಿ ಹೊಂದಲಾಗಿದೆ.

ಇದಕ್ಕಾಗಿ 665 ಲಸಿಕಾ ಕೇಂದ್ರಗಳು (571 ಗ್ರಾಮೀಣ, 94 ನಗರ), 3 ಮೊಬೈಲ್ ತಂಡಗಳು ಹಾಗೂ 19 ಟ್ರಾನ್ಸಿಟ್ ಬೂತ್‌ಗಳನ್ನು ತೆರೆಯಲಾಗಿದೆ. ಜೂನ್ 28ರಂದು ಲಸಿಕಾ ಕೇಂದ್ರಗಳಲ್ಲಿ ಹನಿ ನೀಡಲಾಗುವುದು. ಬಳಿಕ ಗ್ರಾಮೀಣ ಪ್ರದೇಶಗಳಲ್ಲಿ ಜೂನ್ 29 ಮತ್ತು 30ರಂದು ಹಾಗೂ ನಗರ ಪ್ರದೇಶಗಳಲ್ಲಿ ಜೂನ್ 29ರಿಂದ ಜುಲೈ 1ರವರೆಗೆ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ.

ಅಭಿಯಾನದಲ್ಲಿ 2,660 ಲಸಿಕಾ ಸಿಬ್ಬಂದಿ, 134 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯು ಜೂನ್ 28ರಂದು ಬೆಳಿಗ್ಗೆ 8 ಗಂಟೆಗೆ ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ (MCH)ಯಲ್ಲಿ ನಡೆಯಲಿದೆ.

ಆರೋಗ್ಯ ಇಲಾಖೆ, ಪಂಚಾಯತ್ ರಾಜ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಜರುಗಲಿದ್ದು, 0–5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪಲ್ಸ್ ಪೋಲಿಯೊ ಹನಿ ಹಾಕಿಸುವಂತೆ ಪೋಷಕರಿಗೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

“ಪ್ರತಿ ಬಾರಿ ಎರಡು ಹನಿಗಳು – ಪೋಲಿಯೊ ವಿರುದ್ಧ ನಿರಂತರ ಗೆಲುವು.”

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...