ಉಡುಪಿ | ವಿದ್ಯಾರ್ಥಿ ನಾಪತ್ತೆ ಪ್ರಕರಣ: ಸಕಲೇಶಪುರದಲ್ಲಿ ಪತ್ತೆ, ಕುಟುಂಬಕ್ಕೆ ಹಸ್ತಾಂತರ

Date:

ನೀಟ್ ಪರೀಕ್ಷೆಯಲ್ಲಿ ಅಂಕ ಕಡಿಮೆ ಬರಬಹುದೆಂಬ ಭೀತಿಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯನ್ನು ಕೋಟ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ವಿದ್ಯಾರ್ಥಿಯನ್ನು ಉಡುಪಿ ಜಿಲ್ಲೆಯ ಕೋಟ ಮೂರ್ಕೈ ನಿವಾಸಿ ಅಭಿಷೇಕ್ (17) ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಆತ ಹಾಸ್ಟೆಲ್‌ನಲ್ಲಿ ವಾಸವಾಗಿದ್ದನು. ಮೇ 3ರಂದು ಉಡುಪಿಯಲ್ಲಿ ನೀಟ್ ಪರೀಕ್ಷೆ ಬರೆದಿದ್ದ ಆತ, ಮೇ 4ರಂದು ಹಾಸನದಲ್ಲಿರುವ ತಾಯಿಗೆ ಕರೆ ಮಾಡಿ ಮನೆಯಿಂದ ಮಣಿಪಾಲಕ್ಕೆ ತೆರಳುವುದಾಗಿ ತಿಳಿಸಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆದರೆ ಸಂಜೆಗೂ ಮನೆಗೆ ವಾಪಾಸ್ಸು ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಮನೆಯಲ್ಲಿ ಆತ ಬರೆದಿಟ್ಟಿದ್ದ ಪತ್ರ ಪತ್ತೆಯಾಗಿದ್ದು, ಅದರಲ್ಲಿ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಬಹುದೆಂಬ ಆತಂಕ ವ್ಯಕ್ತಪಡಿಸಿದ್ದಾನೆ ಎಂಬುದು ತಿಳಿದುಬಂದಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ತನಿಖೆ ಕೈಗೊಂಡು, ವಿದ್ಯಾರ್ಥಿಯ ಚಲನೆಯನ್ನು ಪತ್ತೆ ಹಚ್ಚಿದರು. ಮಾನಸಿಕ ಒತ್ತಡದಿಂದ ಮನೆ ಬಿಟ್ಟು ಹೊರಟಿದ್ದ ಅಭಿಷೇಕ್, ಧರ್ಮಸ್ಥಳಕ್ಕೆ ತೆರಳಿ ಅಲ್ಲಿಂದ ಸಕಲೇಶಪುರದತ್ತ ಪ್ರಯಾಣಿಸುತ್ತಿದ್ದನೆಂದು ತಿಳಿದುಬಂದಿದೆ.

ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅವನನ್ನು ಸುರಕ್ಷಿತವಾಗಿ ಪತ್ತೆ ಹಚ್ಚಿ, ಕುಟುಂಬದವರ ಬಳಿಗೆ ಕರೆತರುವ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...