ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆ (ಎನ್‌ಐಎ) ಹಾಗೂ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ದಾಖಲಾಗಿರುವ ಮತ್ತು ಮುಂದಿನ ದಿನಗಳಲ್ಲಿ ದಾಖಲಾಗುವ ಪ್ರಕರಣಗಳ ವಿಚಾರಣೆಗಾಗಿ ಉಡುಪಿಯಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸರ್ವೋಚ್ಚ ನ್ಯಾಯಾಲಯವು ಸುವೋ ಮೋಟೊ ಡಬ್ಲ್ಯುಪಿ (ಕ್ರಿಮಿನಲ್) ನಂ.1/2026ರಲ್ಲಿ ಕಳೆದ ಮಾರ್ಚ್ 24ರಂದು ನೀಡಿದ ನಿರ್ದೇಶನ ಹಾಗೂ ಕರ್ನಾಟಕ ಹೈಕೋರ್ಟ್‌ನ ಶಿಫಾರಸ್ಸಿನ ಮೇರೆಗೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕಾರ್ಯವ್ಯಾಪ್ತಿ ಹೊಂದಿರುವ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವನ್ನು ಉಡುಪಿಯಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಈ ನ್ಯಾಯಾಲಯದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ದಾಖಲಾಗಿರುವ ಮತ್ತು ಮುಂದೆ ದಾಖಲಾಗುವ ಎಲ್ಲ ಎನ್‌ಐಎ ಹಾಗೂ ಯುಎಪಿಎ ಪ್ರಕರಣಗಳ ವಿಚಾರಣೆ ನಡೆಯಲಿದೆ.
This video cannot be played in your browser. Open the video directly
ನೂತನ ವಿಶೇಷ ನ್ಯಾಯಾಲಯದ ಕಾರ್ಯನಿರ್ವಹಣೆಗೆ ವಿಶೇಷ ನ್ಯಾಯಾಧೀಶರ ಹುದ್ದೆ ಸೇರಿದಂತೆ ಒಟ್ಟು 13 ಪೂರಕ ಹುದ್ದೆಗಳನ್ನು ಸೃಜಿಸಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.






